Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Virat Kohli: ಐಪಿಎಲ್‌ನಲ್ಲಿ 800 ಬೌಂಡರಿ, 300ಕ್ಕೂ ಹೆಚ್ಚು ಸಿಕ್ಸರ್ ಬಾರಿಸಿದ ದಾಖಲೆ ಬರೆದ ವಿರಾಟ್

ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ಸಿಬಿ) ತಂಡದ ಸ್ಟಾರ್ ಆಟಗಾರ ವಿರಾಟ್‌ ಕೊಹ್ಲಿ ತಮ್ಮ ಅಮೋಘ ಪ್ರದರ್ಶನ ಮುಂದುವರಿಸಿದ್ದಾರೆ. ಗುಜರಾತ್ ಟೈಟಾನ್ಸ್‌ ವಿರುದ್ಧದ 19ನೇ ಆವೃತ್ತಿಯ 34ನೇ ಪಂದ್ಯದಲ್ಲಿ ಟಾಸ್‌ ಸೋತರೂ ಮೊದಲು ಬ್ಯಾಟ್ ಮಾಡಿದ ಗುಜರಾತ್‌ 20 ಓವರ್‌ಗಳಲ್ಲಿ 3 ವಿಕೆಟ್‌ಗೆ 205 ರನ್‌ ಸೇರಿಸಿತು. ಸವಾಲಿನ ಗುರಿಯನ್ನು ಆರ್‌ಸಿಬಿ ಬೆನ್ನಟ್ಟಿತು. ಈ ವೇಳೆ ಫಿಲ್ ಸಾಲ್ಟ್‌ ಅವರ ಬದಲಿಗೆ ಇಂಗ್ಲೆಂಡ್ ತಂಡದ ಯುವ ಆಟಗಾರ ಜಾಕೋಬ್ ಬೆಥೆಲ್‌ ಹಾಗೂ ವಿರಾಟ್‌ ಕೊಹ್ಲಿ ಕಣಕ್ಕೆ ಇಳಿದರು. ಈ ವೇಳೆ ಎಲ್ಲರ ಕಣ್ಣುಗಳು ವಿರಾಟ್‌ ಕೊಹ್ಲಿ ಅವರ ಮೇಲೆ ನೆಟ್ಟಿದ್ದವು.

ಎಂ.ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ವಿರಾಟ್‌ ಕೊಹ್ಲಿ ಸೊಗಸಾದ ಪ್ರದರ್ಶನ ನೀಡಿದ್ದಾರೆ. ಈ ಆವೃತ್ತಿಯ ಐಪಿಎಲ್‌ನಲ್ಲಿ ಸೊಗಸಾದ ಬ್ಯಾಟಿಂಗ್ ಮಾಡಿರುವ ವಿರಾಟ್‌, ಐಪಿಎಲ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ ಬಾರಿಸಿದ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಸ್ಥಾನ ಪಡೆದರು. ಈ ಮೂಲಕ ಇವರು ಐಪಿಎಲ್‌ನಲ್ಲಿ ಅತಿ ಹೆಚ್ಚು ಸಿಕ್ಸರ್ ಬಾರಿಸಿದ ಮೂರನೇ ಬ್ಯಾಟರ್ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡರು. ಜಿಟಿ ವಿರುದ್ಧದ ಪಂದ್ಯದಲ್ಲಿ ವಿರಾಟ್ ಸಿಕ್ಸರ್ ಬಾರಿಸುತ್ತಿದ್ದಂತೆ ಐಪಿಎಲ್‌ನಲ್ಲಿ ದೊಡ್ಡ ದಾಖಲೆ ನಿರ್ಮಿಸಿದರು.

Virat Kohli

ಈ ಪಂದ್ಯಕ್ಕೂ ಮುನ್ನ ವಿರಾಟ್ ಕೊಹ್ಲಿ ಐಪಿಎಲ್‌ ಇತಿಹಾಸದಲ್ಲಿ 799 ಬೌಂಡರಿಗಳನ್ನು ಬಾರಿಸಿದ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದರು. ಈ ಪಂದ್ಯದಲ್ಲಿ ವಿರಾಟ್‌ ಸೊಗಸಾದ ಬ್ಯಾಟಿಂಗ್ ಪ್ರದರ್ಶನ ನೀಡಿದ ವಿರಾಟ್‌ ಕೊಹ್ಲಿ ಎರಡು ಬೌಂಡರಿ ಬಾರಿಸುತ್ತಲೇ ದೊಡ್ಡ ದಾಖಲೆಯನ್ನು ಬರೆದಿದ್ದಾರೆ. ಐಪಿಎಲ್‌ನಲ್ಲಿ 800 ಬೌಂಡರಿ ಬಾರಿಸಿದ ಮೊದಲು ಬ್ಯಾಟರ್‌ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡಿದ್ದಾರೆ.

ಐಪಿಎಲ್‌ನಲ್ಲಿ ಅತಿ ಹೆಚ್ಚು ಬೌಂಡರಿ ಬಾರಿಸದ ಬ್ಯಾಟ್ಸ್‌ಮನ್ಸ್‌

ವಿರಾಟ್ ಕೊಹ್ಲಿ, 275 ಪಂದ್ಯ, 800+ ಬೌಂಡರಿ
ಶಿಖರ್ ಧವನ್, 222 ಪಂದ್ಯ, 768 ಬೌಂಡರಿ
ಡೇವಿಡ್‌ ವಾರ್ನರ್‌, 184 ಪಂದ್ಯ, 663 ಬೌಂಡರಿ
ರೋಹಿತ್‌ ಶರ್ಮಾ, 276 ಪಂದ್ಯ, 653 ಬೌಂಡರಿ
ಅಜಿಂಕ್ಯ ರಹಾನೆ, 204 ಪಂದ್ಯ, 522 ಬೌಂಡರಿ


ಇನ್ನು ಗುಜರಾತ್ ಟೈಟಾನ್ಸ್‌ ತಂಡದ ವಿರುದ್ಧ ವಿರಾಟ್‌ ತಮ್ಮ ಆಕ್ರಮಣಕಾರಿ ಆಟವನ್ನು ಮುಂದುವರೆಸಿದರು. ಇವರು ಇನಿಂಗ್ಸ್‌ನ 8ನೇ ಓವರ್‌ ರಶೀದ್ ಖಾನ್ ಅವರ ಎರಡನೇ ಎಸೆತದಲ್ಲಿ ವಿರಾಟ್‌ ಕೊಹ್ಲಿ ಸಿಕ್ಸರ್ ಬಾರಿಸುವ ಮೂಲಕ ದಾಖಲೆ ಬರೆದರು. ಈ ಮೂಲಕ ಐಪಿಎಲ್‌ನಲ್ಲಿ 300ಕ್ಕೂ ಹೆಚ್ಚು ಸಿಕ್ಸರ್ ಬಾರಿಸಿದ ಹಿರಿಮೆ ತಮ್ಮದಾಗಿಸಿಕೊಂಡರು.

ಐಪಿಎಲ್‌ನಲ್ಲಿ ಹೆಚ್ಚು ಸಿಕ್ಸರ್ ಬಾರಿಸಿದ ಬ್ಯಾಟರ್ಸ್‌

ಕ್ರಿಸ್‌ ಗೇಲ್‌, 142 ಪಂದ್ಯ, 357 ಸಿಕ್ಸರ್‌
ರೋಹಿತ್ ಶರ್ಮಾ, 276 ಪಂದ್ಯ, 310 ಸಿಕ್ಸರ್
ವಿರಾಟ್ ಕೊಹ್ಲಿ, 275 ಪಂದ್ಯ, 300 ಸಿಕ್ಸರ್
ಎಂಎಸ್‌ ಧೋನಿ, 278 ಪಂದ್ಯ, 264 ಸಿಕ್ಸರ್
ಎಬಿ ಡಿವಿಲಿಯರ್ಸ್‌, 184 ಪಂದ್ಯ, 251 ಸಿಕ್ಸರ್‌

Story first published: Friday, April 24, 2026, 22:46 [IST]
Other articles published on Apr 24, 2026
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+