ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಭಾರತ vs ಇಂಗ್ಲೆಂಡ್: ನಾಯಕನಾಗಿ ದಾಖಲೆ ಬರೆದ ವಿರಾಟ್ ಕೊಹ್ಲಿ

Virat Kohli most successful captain in indian soil

ಇಂಗ್ಲೆಂಡ್ ವಿರುದ್ಧ ಭಾರತ ಮೂರನೇ ಟೆಸ್ಟ್ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿದೆ. ಎರಡೇ ದಿನದಲ್ಲಿ ಫಲಿತಾಂಶವನ್ನು ಪಡೆದ ಈ ಪಂದ್ಯದಲ್ಲಿ ಗೆಲ್ಲುವ ಮೂಲಕ ಸರಣಿಯಲ್ಲಿ ಭಾರತ 2-1 ಅಂತರದಿಂದ ಮುನ್ನಡೆ ಪಡೆದುಕೊಂಡಿದೆ. ಈ ಗೆಲುವಿನ ಮೂಲಕ ನಾಯಕನಾಗಿ ವಿರಾಟ್ ಕೊಹ್ಲಿ ವಿಶೇಷ ದಾಖಲೆಯೊಂದನ್ನು ಮಾಡಿದ್ದಾರೆ.

ಟೀಮ್ ಇಂಡಿಯಾ ಪರವಾಗಿ ಭಾರತದ ನೆಲದಲ್ಲಿ ಅತ್ಯಂತ ಹೆಚ್ಚು ಗೆಲುವನ್ನು ಕಂಡ ನಾಯಕ ಎಂಬ ಹೆಗ್ಗಳಿಕೆಗೆ ವಿರಾಟ್ ಕೊಹ್ಲಿ ಪಾತ್ರರಾಹಿದ್ದಾರೆ. ಈ ಹಿಂದೆ ಎಂಎಸ್ ಧೋನಿ ಹೆಸರಿನಲ್ಲಿದ್ದ ಈ ದಾಖಲೆಯನ್ನು ವಿರಾಟ್ ಕೊಹ್ಲಿ ಚೆನ್ನೈನಲ್ಲಿ ನಡೆದ ಎರಡನೇ ಪಂದ್ಯವನ್ನು ಗೆಲ್ಲುವ ಮೂಲಕ ಸರಿಗಟ್ಟಿದ್ದರು. ಈಗ ಆ ದಾಖಲೆಯನ್ನು ಸಂಪೂರ್ಣವಾಗಿ ತಮ್ಮ ಹೆಸರಿಗೆ ವರ್ಗಾಯಿಸಿಕೊಂಡಿದ್ದಾರೆ.

 ಪಂದ್ಯದ ಮಧ್ಯೆಯೇ ವಿರಾಟ್ ಕೊಹ್ಲಿ ಬಳಿಗೆ ಬಂದ ಅಭಿಮಾನಿ: ವಿಡಿಯೋ ಪಂದ್ಯದ ಮಧ್ಯೆಯೇ ವಿರಾಟ್ ಕೊಹ್ಲಿ ಬಳಿಗೆ ಬಂದ ಅಭಿಮಾನಿ: ವಿಡಿಯೋ

ಎಂಎಸ್ ಧೋನಿ ಭಾರತದ ನೆಲದಲ್ಲಿ ನಾಯಕನಾಗಿ 21 ಪಂದ್ಯಗಳಲ್ಲಿ ಗೆಲುವನ್ನು ಸಾಧಿಸಿದ್ದಾರೆ. ಇದಕ್ಕಾಗಿ ಎಂಎಸ್ ಧೋನಿ 30 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದರು. ಈಗ ವಿರಾಟ್ ಕೊಹ್ಲಿ 22ನೇ ಗೆಲುವನ್ನು ಭಾರತದ ನೆಲದಲ್ಲಿ ಕಂಡಿದ್ದಾರೆ. 29ನೇ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಈ ಸಾಧನೆಯನ್ನು ಮಾಡಿದ್ದಾರೆ.

ಅಹ್ಮದಾಬಾದ್‌ನಲ್ಲಿ ನಡೆದ ಮೂರನೇ ಟೆಸ್ಟ್‌ನಲ್ಲಿ ಭಾರತದ ಸ್ಪಿನ್ ಬೌಲಿಂಗ್ ದಾಳಿಗೆ ಇಂಗ್ಲೆಂಡ್ ಪಡೆ ಅಕ್ಷರಶಃ ತತ್ತರಿಸಿಹೋಗಿತ್ತು. ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್ ಕೇವಲ 112 ರನ್ ಗಳಿಸಿ ಆಲೌಟ್ ಆಗಿತ್ತು. ಇದಕ್ಕೆ ಪ್ರತಿಯಾಗಿ ಬ್ಯಾಟಿಂಗ್ ನಡೆಸಿದ ಭಾರತ 145 ರನ್‌ಗಳಿಸಿ ಆಲೌಟ್ ಆಗಿತ್ತು.

ಇನ್ನು ಎರಡನೇ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡಲಿಳಿದ ಇಂಗ್ಲೆಂಡ್ ಅಕ್ಷರ್ ಪಟೇಲ್ ಹಾಗೂ ಆರ್ ಅಶ್ವಿನ್ ದಾಳಿಗೆ ತತ್ತರಿಸಿ ಕೇವಲ 81 ರನ್‌ಗಳಿಗೆ ಆಲೌಟ್ ಆಗಿತ್ತು. ಈ ಮೂಲಕ ಭಾರತ ಗೆಲ್ಲಲು 49 ರನ್‌ಗಳ ಗುರಿಯನ್ನು ಪಡೆದುಕೊಂಡಿತ್ತು. ಈ ಗುರಿಯನ್ನು ವಿಕೆಟ್ ಕಳೆದುಕೊಳ್ಳದೆ ತಲುಪುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾಗಿದೆ.

Story first published: Friday, February 26, 2021, 8:48 [IST]
Other articles published on Feb 26, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X