ವಿರಾಟ್ ಕೊಹ್ಲಿ: ಟೆಸ್ಟ್ ಕ್ರಿಕೆಟ್‌ನಲ್ಲಿ ಇತಿಹಾಸ ಸೃಷ್ಟಿಸಲು ಕೊಹ್ಲಿಗೆ ಬೇಕು 53 ರನ್
ಇತ್ತೀಚೆಗೆ ಬಾಂಗ್ಲಾದೇಶ ವಿರುದ್ಧ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಭಾರತ ತಂಡ ಟಿ20 ಸರಣಿ ಗೆದ್ದಿದೆ. ಇದಕ್ಕೂ ಮುನ್ನ ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಬಾಂಗ್ಲಾದೇಶವನ್ನು ಸೋಲಿಸಿದೆ. ಇದೀಗ ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿ ಗೆಲುವಿನ ಮೇಲೆ ರೋಹಿತ್ ಪಡೆ ಕಣ್ಣಿಟ್ಟಿದೆ.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯವು ಅಕ್ಟೋಬರ್ 16 ರಿಂದ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರಂಭವಾಗಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಐತಿಹಾಸಿಕ ದಾಖಲೆ ನಿರ್ಮಿಸಲಿದ್ದಾರೆ. ಇಲ್ಲಿಯವರೆಗೆ ಭಾರತದ ಮೂವರು ಬ್ಯಾಟರ್‌ಗಳು ಮಾತ್ರ ದಾಖಲೆ ಮಾಡಲು ಸಮರ್ಥರಾಗಿದ್ದಾರೆ.

ಕೊಹ್ಲಿ ಹೊಸ ದಾಖಲೆ
ಈಗಾಗಲೇ ವಿಶ್ವ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ಮುರಿದು ಸೃಷ್ಠಿಸಿದ್ದಾರೆ. ಈಗ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ 53 ರನ್ ಗಳಿಸಿದರೆ, ಟೆಸ್ಟ್ ಕ್ರಿಕೆಟ್‌ನಲ್ಲಿ 9000 ರನ್ ಪೂರೈಸಿದ ನಾಲ್ಕನೇ ಭಾರತೀಯ ಬ್ಯಾಟರ್ ಎನಿಸಿಕೊಳ್ಳಲಿದ್ದಾರೆ. ಪ್ರಸ್ತುತ ಆಡುತ್ತಿರುವ ಬ್ಯಾಟರ್‌ಗಳ ಪೈಕಿ ಇಂಗ್ಲೆಂಡ್‌ನ ಜೋ ರೂಟ್ ಮತ್ತು ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಮಾತ್ರ 9000 ಟೆಸ್ಟ್ ರನ್‌ಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಜೋ ರೂಟ್ 12664 ರನ್ ಮತ್ತು ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ 9685 ರನ್ ಬಾರಿಸಿದ್ದಾರೆ.
ಬೆಂಗಳೂರು ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಕೊಹ್ಲಿ ಸುಲಭವಾಗಿ ಟೆಸ್ಟ್ ಕ್ರಿಕೆಟ್‌ನಲ್ಲಿ 9000 ರನ್ ಗಡಿ ಮುಟ್ಟಬಹುದು. ಏಕೆಂದರೆ ಎಂ ಚಿನ್ನಸ್ವಾಮಿ ಸ್ಟೇಡಿಯಂ ಅನ್ನು ಕೊಹ್ಲಿಗೆ ತವರು ಮೈದಾನ ಎನ್ನಬಹುದು. ಐಪಿಎಲ್ ಆರಂಭದಿಂದಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಪರ ಆಡುತ್ತಿರುವ ಅವರಿಗೆ ಈ ಪಿಚ್ ಏರಿಳಿತಗಳ ಬಗ್ಗೆ ಚೆನ್ನಾಗಿ ತಿಳಿದಿದೆ.
ಒಂದು ವೇಳೆ ನ್ಯೂಜಿಲೆಂಡ್ ವಿರುದ್ದ ಕೊಹ್ಲಿ 53 ರನ್ ಗಳಿಸಿದರೆ, ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್ ಮತ್ತು ಸುನಿಲ್ ಗವಾಸ್ಕರ್ ನಂತರ ಭಾರತೀಯ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಈ ಮಹತ್ವದ ಸಾಧನೆ ಮಾಡಿದ ನಾಲ್ಕನೇ ಬ್ಯಾಟರ್ ಆಗಲಿದ್ದಾರೆ. ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಇದುವರೆಗೆ 8,947 ರನ್ ಗಳಿಸಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ಸಚಿನ್ ತೆಂಡೂಲ್ಕರ್ ಅತಿ ಹೆಚ್ಚು ರನ್ ಹೊಡೆದಿರುವ ದಾಖಲೆ ಹೊಂದಿದ್ದಾರೆ. ಅವರು 15921 ರನ್ ಗಳಿಸಿ ಆಗ್ರ ಸ್ಥಾನದಲ್ಲಿದ್ದಾರೆ.
ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ (ಉಪನಾಯಕ), ಮೊಹಮ್ಮದ್ ಸಿರಾಜ್, ಆಕಾಶ್ ದೀಪ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications