Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಐಪಿಎಲ್ 2021: ಅತಿ ದೊಡ್ಡ ಮೈಲಿಗಲ್ಲು ಮುಟ್ಟಲು ವಿರಾಟ್ ಕೊಹ್ಲಿ ಮತ್ತಷ್ಟು ಸನಿಹ

Virat Kohli needs 89 more runs to become the first player to complete 6000 runs in IPL history

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿಯೂ ದಾಖಲೆಗಳ ಮೇಲೆ ದಾಖಲೆ ಬರೆಯುತ್ತಿರುವ ಆಟಗಾರ. ಸದ್ಯ ಕೊಹ್ಲಿ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಅತ್ಯಂತ ಹೆಚ್ಚು ರನ್‌ಗಳಿಸಿದ ಆಟಗಾರ ಎನಿಸಿದ್ದಾರೆ. ಈಗ ಐಪಿಎಲ್‌ನಲ್ಲಿ ಮತ್ತೊಂದು ಮಹತ್ವದ ಮೈಲಿಗಲ್ಲು ಮುಟ್ಟಲು ಸನಿಹದಲ್ಲಿದ್ದಾರೆ.

ಐಪಿಎಲ್‌ನಲ್ಲಿ ರನ್‌ ಮಳೆ ಹರಿಸಿರುವ ವಿರಾಟ್ ಕೊಹ್ಲಿ ಅದೇ ಫಾರ್ಮ್‌ಅನ್ನು ಈ ಬಾರಿಯ ಐಪಿಎಲ್‌ನಲ್ಲಿಯೂ ಮುಂದುವರಿಸುವ ಸೂಚನೆಯನ್ನು ಮೊದಲ ಪಂದ್ಯದಲ್ಲಿ ನೀಡಿದ್ದಾರೆ. ಈಗ ಐಪಿಎಲ್ ಇತಿಹಾಸದಲ್ಲಿ 6000 ರನ್‌ಗಳ ಗಡಿಯನ್ನು ದಾಟಿದ ಪ್ರಥಮ ಆಟಗಾರ ಎನಿಸಲು ಅತ್ಯಂತ ಸಮೀಪಕ್ಕೆ ತಲುಪಿದ್ದಾರೆ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ.

ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಈವರೆಗೆ 5911 ರನ್‌ಗಳಿಸಿದ್ದಾರೆ. 6000 ರನ್‌ಗಳ ಸರದಾರನಾಗಲು ಕೊಹ್ಲಿಗೆ ಇನ್ನು ಅಗತ್ಯವಿರುವುದು ಕೇವಲ 89 ರನ್‌ಗಳು ಮಾತ್ರ. ಹೀಗಾಗಿ ಸನ್‌ರೈಸರ್ಸ್ ಹೈದರಾಬಾದ್‌ ವಿರುದ್ಧದ ಪಂದ್ಯದಲ್ಲಿಯೇ ಕೊಹ್ಲಿ ಈ ಮಹತ್ವದ ಮೈಲಿಗಲ್ಲನ್ನು ದಾಟುತ್ತಾರಾ ಎಂಬುದು ಕುತೂಹಲ ಮೂಡಿಸಿದೆ.

ಸನ್‌ರೈಸರ್ಸ್ ಹೈದರಾಬಾದ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಬುಧವಾರ ಮುಖಾಮುಖಿಯಾಗುತ್ತಿದೆ. ಈ ಪಂದ್ಯ ಎರಡು ತಂಡಗಳಿಗೆ ಎರಡನೇ ಸವಾಲಾಗಿದ್ದು ಮೊದಲ ಪಂದ್ಯದಲ್ಲಿ ಆರ್‌ಸಿಬಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ವಿರುದ್ಧ ಗೆಲುವು ಸಾಧಿಸಿತ್ತು.

ಆದರೆ ಸನ್‌ರೈಸರ್ಸ್ ಹೈದರಾಬಾದ್ ತಂಡ ಈ ಬಾರಿಯ ಟೂರ್ನಿಯನ್ನು ಸೋಲಿನೊಂದಿಗೆ ಆರಂಭಿಸಿದ್ದು ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 10 ರನ್‌ಗಳ ಅಂತರದಿಂದ ಮೊದಲ ಪಂದ್ಯವನ್ನು ಕಳೆದುಕೊಂಡಿತ್ತು. ಇಂದಿನ ಪಂದ್ಯದ ಮೂಲಕ ಗೆಲುವಿನ ರುಚಿ ಕಾಣಲು ಡೇವಿಡ್ ವಾರ್ನರ್ ಪಡೆ ತವಕಿಸುತ್ತಿದೆ.

Story first published: Wednesday, April 14, 2021, 16:23 [IST]
Other articles published on Apr 14, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+