Virat Kohli: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ದಾಖಲೆ ಬರೆಯಲು ಸಜ್ಜಾದ ವಿರಾಟ್ ಕೊಹ್ಲಿ; ಏನಿದು ಹೊಸ ರೆಕಾರ್ಡ್?
ಮೇ 4 ಶನಿವಾರ, ಬೆಂಗಳೂರಿನ ಎಂ.ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 52ನೇ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ (ಜಿಟಿ) ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಗಳು ಮುಖಾಮುಖಿಯಾಗುತ್ತಿವೆ. ಪ್ಲೇಆಪ್ ರೇಸ್‌ನಲ್ಲಿ ಉಳಿದುಕೊಳ್ಳಲು ಆರ್‌ಸಿಬಿ ತಂಡಕ್ಕೆ ಗುಜರಾತ್ ವಿರುದ್ಧ ಈ ಪಂದ್ಯ ಗೆಲ್ಲುವುದು ಅನಿವಾರ್ಯವಾಗಿದೆ.
ಇಂತಹ ಹೈವೋಲ್ಟೇಜ್ ಪಂದ್ಯದಲ್ಲಿ ಆರ್‌ಸಿಬಿ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹೊಸ ದಾಖಲೆ ಬರೆಯಲು ಸಜ್ಜಾಗಿದ್ದಾರೆ. ಈ ಋತುವಿನ ಐಪಿಎಲ್‌ನಲ್ಲಿ ವಿರಾಟ್ ಕೊಹ್ಲಿ ಬೊಂಬಾಟ್ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದು, ಉತ್ತಮ ರನ್ ಕಲೆ ಹಾಕುತ್ತಿದ್ದಾರೆ. ಈಗಾಗಲೇ ಅಡಿರುವ 10 ಪಂದ್ಯಗಳಿಂದ 71 ಸರಾಸರಿಯಲ್ಲಿ 500 ರನ್ ಗಳಿಸಿರುವ ಕೊಹ್ಲಿ 147 ಸ್ಟ್ರೈಕ್ ರೇಟ್ ಹೊಂದಿದ್ದಾರೆ.

ವಿರಾಟ್ ಕೊಹ್ಲಿ ಕ್ರೀಸ್‌ಗೆ ಬಂದರೆ ಕೇವಲ ರನ್ ಗಳಿಸುವುದಲ್ಲದೆ ಪಂದ್ಯವನ್ನು ಗೆಲ್ಲಿಸುವ ಸಾಮರ್ಥ್ಯ ಹೊಂದಿದ್ದಾರೆ. ಐಪಿಎಲ್‌ನಲ್ಲಿ ಕೂಡ ಹಲವು ಪಂದ್ಯಗಳನ್ನು ಏಕಾಂಗಿ ನಿಂತು ಕೊಹ್ಲಿ ಗೆಲ್ಲಿಸಿ ದಾಖಲೆಗಳನ್ನು ಸೃಷ್ಟಿಸಿದ್ದಾರೆ. ಇದೀಗ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮತ್ತೊಂದು ಮೈಲಿಗಲ್ಲು ತಲುಪಲು ವಿರಾಟ್ ಕೊಹ್ಲಿ ಸಿದ್ದರಾಗಿದ್ದಾರೆ.
ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕೊಹ್ಲಿ ಈವರೆಗೆ 2924 ರನ್ ಹೊಡೆದಿದ್ದಾರೆ. ಹೀಗಾಗಿ 3000 ರನ್ ಪೂರೈಸಲು ಕೊಹ್ಲಿಗೆ ಕೇವಲ 76 ರನ್ ಅವಶ್ಯಕತೆ ಇದೆ. ಚಿನ್ನಸ್ವಾಮಿ ಸ್ಟೇಡಿಯಂ ಆರ್‌ಸಿಬಿ ತವರು ಮೈದಾನವಾಗಿದೆ. ಅಲ್ಲದೆ ಆರ್‌ಸಿಬಿಗೆ ಬೆಂಬಲ ನೀಡುವುದಕ್ಕೆ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಬರುತ್ತಾರೆ. ಈ ಸಂದರ್ಭದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ಆಡುತ್ತಿರುವ ರನ್ ಮಷಿನ್ ಖ್ಯಾತಿಯ ವಿರಾಟ್ ಕೊಹ್ಲಿ 3000 ರನ್ ಪೂರೈಸುವಬ ಆತ್ಮವಿಶ್ವಾಸದಲ್ಲಿದ್ದಾರೆ. ಈ ಮೂಲಕ ತವರಿನಲ್ಲಿ ಅತಿ ಹೆಚ್ಚು ರನ್ ಗಳಿಸಿ ಮೊದಲ ಬ್ಯಾಟರ್ ಎಂಬ ಹೆಗ್ಗಳಿಕೆಗೆ ಕೊಹ್ಲಿ ಪಾತ್ರರಾಗಲಿದ್ದಾರೆ.

ಐಪಿಎಲ್‌ನಲ್ಲಿ ನಂಬರ್ 1 ಬ್ಯಾಟರ್ :
ನೀರು ಕುಡಿಯುವಷ್ಟೆ ಸುಲಭವಾಗಿ ರನ್ ಗಳಿಸುವ ಕೊಹ್ಲಿ (7763) ಐಪಿಎಲ್ ಇತಿಹಾಸದಲ್ಲಿ ಅತಿಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ಮೊದಲಿಗರಾಗಿದ್ದಾರೆ. ಬಳಿಕ ಟೀಮ್ ಇಂಡಿಯಾ ಆಟಗಾರ ಶಿಖರ್ ಧವನ್ (6769) ಎರಡನೇ ಸ್ಥಾನದಲ್ಲಿದ್ದಾರೆ. ಡೇವಿಡ್ ವಾರ್ನರ್ (6564), ರೋಹಿತ್ ಶರ್ಮಾ (6526) ಮತ್ತು ಮಿಸ್ಟರ್ ಐಪಿಎಲ್ ಖ್ಯಾತಿ ಟೀಮ್ ಇಂಡಿಯಾ ಮಾಜಿ ಆಟಗಾರ ಸುರೇಶ್ ರೈನಾ ( 5528) ಕ್ರಮವಾಗಿ ಐದನೇ ಸ್ಥಾನದಲ್ಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications