ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಸದ್ಯ ಅವರು ಟೀಮ್ ಇಂಡಿಯಾ ಪರ ಟೆಸ್ಟ್ ಮತ್ತು ಏಕದಿನ ಮಾದರಿಗಳಲ್ಲಿ ಮಾತ್ರ ಆಡುತ್ತಿದ್ದಾರೆ. ಈಗಾಗಲೇ ತಮ್ಮ ಅದ್ಭುತ ಬ್ಯಾಟಿಂಗ್ ಶೈಲಿಯಲ್ಲಿ ಹಲವು ದಾಖಲೆಗಳನ್ನು ಸೃಷ್ಟಿಸಿದ್ದಾರೆ.
ಏಕದಿನ ಕ್ರಿಕೆಟ್‌ನಲ್ಲಿ ವಿರಾಟ್ ಕೊಹ್ಲಿ ಅತಿಹೆಚ್ಚು ಶತಕಗಳನ್ನು ಹೊಡದು ಆಗ್ರ ಸ್ಥಾನದಲ್ಲಿದ್ದಾರೆ. ಆದರೆ ಅವರು ಟೆಸ್ಟ್ ಕ್ರಿಕೆಟ್‌ನಲ್ಲಿ ಸ್ವಲ್ಪ ಮಂದಗತಿ ಆಟಕ್ಕೆ ಮುಂದಾಗಿರುವ ರೀತಿ ಕಾಣಿಸಿಕೊಳ್ಳುತ್ತಿದ್ದಾರೆ. ವಿರಾಟ್ ಕೊಹ್ಲಿ ಅವರ ಪ್ರತಿಯೊಂದು ಶತಕವೂ ಒಂದೊಂದು ದಾಖಲೆಯನ್ನು ಹೇಳುತ್ತವೆ. ಆದರೆ ಕಳೆದ 14 ತಿಂಗಳಲ್ಲಿ ಅವರು ಆಡಿರುವ ಮೂರು ಟೆಸ್ಟ್ ಪಂದ್ಯಗಳಲ್ಲಿ ಒಂದೇ ಒಂದು ಶತಕವನ್ನು ಗಳಿಸಿಲ್ಲ.

ವಿರಾಟ್ ಕೊಹ್ಲಿ ತಮ್ಮ ಕೊನೆಯ ಟೆಸ್ಟ್ ಶತಕವನ್ನು 2023ರ ಜುಲೈ 20 ರಂದು ವೆಸ್ಟ್ ಇಂಡೀಸ್ ವಿರುದ್ಧ ಪೋರ್ಟ್ ಆಫ್ ಸ್ಪೇನ್‌ನಲ್ಲಿ ಕಲೆ ಹಾಕಿದ್ದರು. ಈ ಸಂದರ್ಭದಲ್ಲಿ ವಿರಾಟ್ ಕೊಹ್ಲಿ 121 ರನ್ ಗಳ ಅದ್ಭುತ ಇನ್ನಿಂಗ್ಸ್ ಆಡಿದ್ದರು. ಇದಾದ ನಂತರ, ಅವರು 3 ಟೆಸ್ಟ್ ಪಂದ್ಯಗಳ 5 ಇನ್ನಿಂಗ್ಸ್‌ಗಳಲ್ಲಿ 38, 76, 46, 12, 6 ರನ್ ಗಳಿಸಿದ್ದಾರೆ. ಮತ್ತೊಂದೆಡೆ
ಅಂತರಾಷ್ಟ್ರೀಯ ಏಕದಿನ ಕ್ರಿಕೆಟ್‌ನಲ್ಲಿಯೂ ಅವರು ಸುಮಾರು ಒಂದು ವರ್ಷದಿಂದ ಶತಕ ಸಿಡಿಸಿಲ್ಲ. ವಿರಾಟ್ ಕೊಹ್ಲಿ ತಮ್ಮ ಕೊನೆಯ 5 ಏಕದಿನ ಪಂದ್ಯಗಳಲ್ಲಿ 54, 24, 14 ಮತ್ತು 20 ರನ್ ಹೊಡೆದಿದ್ದಾರೆ.ಬ
ಕಳೆದ ತಿಂಗಳು ಆಗಸ್ಟ್‌ನಲ್ಲಿ ಶ್ರೀಲಂಕಾ ವಿರುದ್ಧ ನಡೆದ ಮೂರು ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ ಒಟ್ಟು 58 ರನ್ ಗಳಿಸಲಷ್ಟೇ ಶಕ್ತರಾಗಿದ್ದರು. ವಿರಾಟ್ ಕೊಹ್ಲಿ ತಮ್ಮ ಕೊನೆಯ ಏಕದಿನ ಶತಕವನ್ನು 2023ರ ವಿಶ್ವಕಪ್ ಸೆಮಿಫೈನಲ್‌ನಲ್ಲಿ ನವೆಂಬರ್ 15 ರಂದು ನ್ಯೂಜಿಲೆಂಡ್ ವಿರುದ್ಧ ಗಳಿಸಿದ್ದರು. ವಿರಾಟ್ ಕೊಹ್ಲಿಗೆ ಈಗ 35 ವರ್ಷ. ಅವರ ಶತಕಗಳ ವೇಗದ ಗತಿಯೇ ನಿಂತು ಹೋದಂತೆ ಕಾಣುತ್ತಿದ್ದು, ಜೊತೆಗೆ ರನ್ ಗಳಿಸುವ ಹಸಿವನ್ನು ಕಳೆದುಕೊಂಡಂತಿದೆ.
ವಿರಾಟ್ ಕೊಹ್ಲಿ ಪ್ರಸ್ತುತ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ 80 ಶತಕಗಳನ್ನು ಹೊಂದಿದ್ದಾರೆ. ಅವರು ಸಚಿನ್ ತೆಂಡೂಲ್ಕರ್ ವಿಶ್ವ ದಾಖಲೆಯನ್ನು ಮುರಿಯಲು 21 ಶತಕಗಳ ದೂರದಲ್ಲಿದ್ದಾರೆ. ವಿರಾಟ್ ಕೊಹ್ಲಿಗೆ 35 ವರ್ಷ ತುಂಬಿದ್ದು, ಅವರು 2027 ರ ವರೆಗೆ ಅಂತರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಯಶಸ್ವಿಯಾದರೂ, ಪ್ರತಿ ವರ್ಷ ಕನಿಷ್ಠ 7 ಶತಕಗಳನ್ನು ಗಳಿಸಬೇಕಾಗಿದೆ. ಸದ್ಯ ಅವರ ಫಾರ್ಮ್ ನೋಡಿದರೆ ಈಗ ಸಚಿನ್ ತೆಂಡೂಲ್ಕರ್ ಅವರ 100 ಶತಕಗಳ ದಾಖಲೆ ಮುರಿಯುವುದು ಅಸಾಧ್ಯ ಎನಿಸುತ್ತಿದೆ.