ಸಚಿನ್ ದಾಖಲೆ ಮುರಿಯುವ ಸನಿಹದಲ್ಲಿ ವಿರಾಟ್ ಕೊಹ್ಲಿ

ನವದೆಹಲಿ, ಅಕ್ಟೋಬರ್ 19: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಅವರ ಮತ್ತೊಂದು ದಾಖಲೆ ಮುರಿಯುವ ಅವಕಾಶವನ್ನು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪಡೆದುಕೊಂಡಿದ್ದಾರೆ.
ವೆಸ್ಟ್‌ಇಂಡೀಸ್ ವಿರುದ್ಧದ 5 ಪಂದ್ಯಗಳ ಏಕದಿನ ಅಂತಾರಾಷ್ಟ್ರೀಯ ಸರಣಿಯ ವೇಳೆ ಕೊಹ್ಲಿ ಅವರು ಈ ಸಾಧನೆ ಮಾಡಬಹುದಾಗಿದೆ. ಈ ಮೂಲಕ ವೆಸ್ಟ್‌ಇಂಡೀಸ್ ವಿರುದ್ಧ ಅತಿ ಹೆಚ್ಚು ರನ್ ಗಳಿಸಿದ ಭಾರತದ ಬ್ಯಾಟ್ಸ್ ಮನ್ ಎನಿಸಿಕೊಳ್ಳಬಹುದಾಗಿದೆ.
ಈ ಮೂಲಕ ಮಾಸ್ಟರ್ ಬ್ಲಾಸ್ಟರ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿಯಬಹುದು. ಕೊಹ್ಲಿಗೆ ಈ ದಾಖಲೆ ಮುರಿಯಲು ಕೇವಲ 187 ರನ್ ಅಗತ್ಯವಿದೆ. ವೆಸ್ಟ್ ಇಂಡೀಸ್ ವಿರುದ್ಧದ ಐದು ಏಕದಿನ ಅಂತಾರಾಷ್ಟ್ರೀಯ ಪಂದ್ಯಗಳ ಸರಣಿಯು ಅಕ್ಟೋಬರ್ 21ರಿಂದ ಆರಂಭವಾಗಲಿದೆ.
ತೆಂಡೂಲ್ಕರ್ ಅವರು ವಿಂಡೀಸ್ ವಿರುದ್ಧ 39 ಪಂದ್ಯಗಳನ್ನು ಆಡಿದ್ದು 52.73ರ ಸರಾಸರಿಯಲ್ಲಿ 4 ಶತಕ, 11 ಅರ್ಧಶತಕಗಳ ಸಹಿತ 1,573 ರನ್ ಗಳಿಸಿದ್ದಾರೆ.
ಕೊಹ್ಲಿ ಈ ತನಕ ವಿಂಡೀಸ್ ವಿರುದ್ಧ 27 ಏಕದಿನ ಪಂದ್ಯಗಳನ್ನು ಆಡಿದ್ದು 60.30ರ ಸರಾಸರಿಯಲ್ಲಿ 1,387 ರನ್ ಗಳಿಸಿದ್ದಾರೆ. ಕೆರಿಬಿಯನ್ ತಂಡದ ವಿರುದ್ಧ 4 ಶತಕ ಹಾಗೂ 9 ಅರ್ಧಶತಕಗಳನ್ನು ಕೊಹ್ಲಿ ಬಾರಿಸಿದ್ದಾರೆ.
ಭಾರತದ ಮತ್ತೊಬ್ಬ ದಿಗ್ಗಜ ರಾಹುಲ್ ದ್ರಾವಿಡ್ ಅವರು ವಿಂಡೀಸ್ ವಿರುದ್ಧ 40 ಪಂದ್ಯಗಳಲ್ಲಿ 42.12ರ ಸರಾಸರಿಯಲ್ಲಿ 3 ಶತಕ ಹಾಗೂ 8 ಅರ್ಧಶತಕಗಳ ಸಹಿತ ಒಟ್ಟು 1,348 ರನ್ ಗಳಿಸಿ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.
ತೆಂಡುಲ್ಕರ್, ಕೊಹ್ಲಿ, ದ್ರಾವಿಡ್ ಹಾಗೂ ಗಂಗುಲಿ ವಿಂಡೀಸ್ ವಿರುದ್ಧ 1,000ಕ್ಕೂ ಅಧಿಕ ರನ್ ಗಳಿಸಿದ ಬ್ಯಾಟ್ಸ್ ಮನ್ ಗಳಾಗಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications