ಭಾರತ vs ವಿಂಡೀಸ್: ದಾಖಲೆಗಳ ದಾಖಲೆ ಬರೆಯಲಿದ್ದಾರೆ ವಿರಾಟ್ ಕೊಹ್ಲಿ

ಗಯಾನಾ, ಆಗಸ್ಟ್ 8: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ಏಕದಿನ ಕ್ರಿಕೆಟ್‌ನಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಲು ಅವಕಾಶವಿದೆ. ಆಗಸ್ಟ್ 8ರಂದು ನಡೆಯುವ ಭಾರತ vs ವೆಸ್ಟ್ ಇಂಡೀಸ್ ಪಂದ್ಯದಲ್ಲಿ ಕೊಹ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರೆ, ಒಂದೇ ಪಂದ್ಯದಲ್ಲಿ ಹಲವು ದಾಖಲೆಗಳು ಮುರಿದು ಹೋಗಲಿವೆ.
ವೆಸ್ಟ್ ಇಂಡೀಸ್ ಪ್ರವಾಸದಲ್ಲಿರುವ ಭಾರತ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಕ್ಲೀನ್ ಸ್ವೀಪ್ ಸಾಧನೆ ತೋರಿಸಿದ್ದು, 3 ಪಂದ್ಯಗಳ ಏಕದಿನ ಸರಣಿಯನ್ನೂ ವಶಪಡಿಸಿಕೊಳ್ಳುವತ್ತ ಕಣ್ಣಿಟ್ಟಿದೆ. ಏಕದಿನ ಸರಣಿಯ ಬಳಿಕ ಎರಡು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ.
ಭಾರತ vs ವೆಸ್ಟ್ ಇಂಡೀಸ್, 1ನೇ ಏಕದಿನ, Live ಸ್ಕೋರ್‌ಕಾರ್ಡ್
ಗುರುವಾರದ (ಆಗಸ್ಟ್ 8) ಪಂದ್ಯದಲ್ಲಿ ಕೊಹ್ಲಿಗೆ ದಾಖಲೆ ನಿರ್ಮಿಸಲು ಎಲ್ಲೆಲ್ಲಿ ಅವಕಾಶವಿದೆ ಎಂಬುದಕ್ಕೆ ಸಂಬಂಧಿಸಿ ಇಲ್ಲಿ ಮಾಹಿತಿಯಿದೆ.

19 ರನ್‌ಗಳು ಬೇಕು
ವಿಂಡೀಸ್ ಎದುರಿನ ಮೊದಲ ಏಕದಿನ ಪಂದ್ಯದಲ್ಲಿ ಕೊಹ್ಲಿ 19 ರನ್ ಗಳಿಸಿದರೆ, ವೆಸ್ಟ್ ಇಂಡೀಸ್ ವಿರುದ್ಧ ಏಕದಿನದಲ್ಲಿ ಅತ್ಯಧಿಕ ರನ್ ಬಾರಿಸಿದ ಮುಂಚೂಣಿ ಆಟಗಾರರಾಗಿ ಕೊಹ್ಲಿ ಗುರುತಿಸಿಕೊಳ್ಳಲಿದ್ದಾರೆ. ವಿಂಡೀಸ್ ವಿರುದ್ಧ ಏಕದಿನದಲ್ಲಿ ಅತ್ಯಧಿಕ ರನ್ ದಾಖಲೆಯಲ್ಲಿ ಕೊಹ್ಲಿ 1912 ರನ್‌ನೊಂದಿಗೆ ದ್ವಿತೀಯ ಸ್ಥಾನದಲ್ಲಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧ 1930 ರನ್ ಬಾರಿಸಿರುವ ಪಾಕ್ ದಿಗ್ಗಜ ಜಾವೆದ್ ಮಿಯಾಂದಾದ್ ಸದ್ಯ ಅಗ್ರ ಸ್ಥಾನದಲ್ಲಿದ್ದಾರೆ.

ಸರ್ವನ್ ದಾಖಲೆ ಬದಿಗೆ
ವೆಸ್ಟ್ ಇಂಡೀಸ್‌ನಲ್ಲಿ ಆತಿಥೇಯರ ವಿರುದ್ಧ ನಡೆದ ಏಕದಿನ ಪಂದ್ಯದಲ್ಲಿ ಅತ್ಯಧಿಕ ರನ್‌ಗಾಗಿ ಮೊದಲ ಸ್ಥಾನದಲ್ಲಿರುವ ವೆಸ್ಟ್ ಇಂಡೀಸ್ ಮಾಜಿ ನಾಯಕ, ಭಾರತ-ಗಯಾನೀಸ್ ಮೂಲದ ರಾಮ್‌ನರೇಶ್ ಸರ್ವನ್ ಒಟ್ಟು 17 ಪಂದ್ಯಗಳಲ್ಲಿ 700 ರನ್ ಬಾರಿಸಿದ್ದಾರೆ. ಕೊಹ್ಲಿಯೀಗ 12 ಪಂದ್ಯಗಳಲ್ಲಿ 556 ರನ್ ಗಳಿಸಿದ್ದಾರೆ.

ಅತ್ಯಧಿಕ ಶತಕ
ವೆಸ್ಟ್ ಇಂಡೀಸ್‌ನಲ್ಲಿ ನಡೆದ ಭಾರತ-ವಿಂಡೀಸ್ ಏಕದಿನ ಪಂದ್ಯದಲ್ಲಿ ಕೆರಿಬಿಯನ್ ಓಪನರ್ ಡೆಸ್ಮಂಡ್ ಹೇನ್ಸ್ 2 ಶತಕಗಳನ್ನು ಬಾರಿಸಿದ್ದಾರೆ. ಕೊಹ್ಲಿಯೂ ಒಟ್ಟು 2 ಶತಕಗಳೊಂದಿಗೆ ಈ ಯಾದಿಯಲ್ಲಿ ಹೇನ್ಸ್ ಜೊತೆ ಸ್ಥಾನ ಹಂಚಿಕೊಂಡಿದ್ದಾರೆ. ಕೊಹ್ಲಿ ಇನ್ನೊಂದು ಶತಕ ಬಾರಿಸಿದರೂ ಡೆಸ್ಮಂಡ್ ಅವರನ್ನು ಹಿಂದಿಕ್ಕಲಿದ್ದಾರೆ.

ಸಂಭಾವ್ಯ ಭಾರತ ತಂಡ
ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್/ಕೆ.ಎಲ್ ರಾಹುಲ್, ರಿಷಭ್ ಪಂತ್, ಕೇದಾರ್ ಜಾಧವ್/ಮನೀಶ್ ಪಾಂಡೆ, ರವೀಂದ್ರ ಜಡೇಜಾ, ಯುಜುವೇಂದ್ರ ಚಾಹಲ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ, ನವದೀಪ್ ಸೈನಿ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications