Virat Kohli: 10 ವರ್ಷಗಳಲ್ಲಿ ಮೊದಲ ಬಾರಿಗೆ ಟಾಪ್ 20 ರಿಂದ ಹೊರಗುಳಿದ ಕೊಹ್ಲಿ!
ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಐಸಿಸಿ ಟೆಸ್ಟ್ ಶ್ರೇಯಾಂಕದಲ್ಲಿ ಸಾಕಷ್ಟು ಹಿನ್ನಡೆ ಅನುಭವಿಸಿದ್ದಾರೆ. ಕಳೆದ 10 ವರ್ಷಗಳಲ್ಲಿ ಅವರು ತಮ್ಮ ಕ್ರಿಕೆಟ್ ವೃತ್ತಿಜೀವನದ ಅತ್ಯಂತ ಕೆಟ್ಟ ಟೆಸ್ಟ್ ಶ್ರೇಯಾಂಕವನ್ನು ತಲುಪಿದ್ದಾರೆ. ಅವರ ಇತ್ತೀಚಿನ ಟೆಸ್ಟ್ ಪ್ರದರ್ಶನದಿಂದಾಗಿ ಇದು ಸಂಭವಿಸಿದೆ.
ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ತವರಿನಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಸಂಪೂರ್ಣ ಮಂಕಾಗಿದ್ದರು. ಕಿವೀಸ್ ಪಡೆ ಎದರು ವಿರಾಟ್ ಕೊಹ್ಲಿ ಹೇಳಿಕೊಳ್ಳುವಂತ ಪ್ರದರ್ಶನ ನೀಡಲಿಲ್ಲ. ಇದೀಗ ಕೊಹ್ಲಿ ಅವರ ಇತ್ತೀಚಿನ ಟೆಸ್ಟ್ ಕ್ರಿಕೆಟ್ ಶ್ರೇಯಾಂಕದ ನಂತರ ಅವರ ಅಭಿಮಾನಿಗಳು ಕೂಡ ನಿರಾಶೆಗೊಂಡಿದ್ದಾರೆ.

ಐಸಿಸಿ ಟೆಸ್ಟ್ ಕ್ರಿಕೆಟ್ನಲ್ಲಿ ವಿರಾಟ್ ಕೊಹ್ಲಿ 10 ವರ್ಷಗಳಲ್ಲಿ ಮೊದಲ ಬಾರಿಗೆ ಟಾಪ್ 20 ರಿಂದ ಹೊರಗುಳಿದಿದ್ದಾರೆ. ಕಳಪೆ ಬ್ಯಾಟಿಂಗ್ ಪ್ರದರ್ಶನದಿಂದಾಗಿ ಕೊಹ್ಲಿ ಎಂಟು ಸ್ಥಾನಗಳನ್ನು ಕಳೆದುಕೊಂಡಿದ್ದು, ಅಗ್ರ 20 ಬ್ಯಾಟರ್ಗಳ ಪಟ್ಟಿಯಿಂದ ಹೊರಗುಳಿದಿದ್ದಾರೆ.
ಸದ್ಯ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್ನಲ್ಲಿ 22ನೇ ಸ್ಥಾನದಲ್ಲಿದ್ದಾರೆ. 2014ರ ಡಿಸೆಂಬರ್ ನಂತರ ವಿರಾಟ್ ಕೊಹ್ಲಿ ಟಾಪ್-20ರೊಳಗೆ ಹೊರಗುಳಿದಿರುವುದು ಇದೇ ಮೊದಲು. ಅವರು ಕಳೆದ 10 ವರ್ಷಗಳಿಂದ ನಿರಂತರವಾಗಿ ಅಗ್ರ 20 ಟೆಸ್ಟ್ ಬ್ಯಾಟರ್ಗಳಲ್ಲಿ ಒಬ್ಬರಾಗಿದ್ದರು. ಈಗ ಅವರು ಟಾಪ್ 20 ರಿಂದ ಹೊರ ಬಂದಿರುವುದು ಎಲ್ಲರಿಗೂ ಅಚ್ಚರಿ ಮೂಡಿಸಿದೆ.
ವಿರಾಟ್ ಕೊಹ್ಲಿ ಜೊತೆಗೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೂಡ ನ್ಯೂಜಿಲೆಂಡ್ ವಿರುದ್ಧದ ಸೋಲಿನ ನಂತರ ಭಾರೀ ಹಿನ್ನಡೆ ಕಂಡಿದ್ದಾರೆ. ರೋಹಿತ್ ಶರ್ಮಾ ಕೂಡ ಎರಡು ಸ್ಥಾನ ಕುಸಿದು 26ನೇ ಸ್ಥಾನಕ್ಕೆ ತಲುಪಿದ್ದಾರೆ. ಯಶಸ್ವಿ ಜೈಸ್ವಾಲ್ ಒಂದು ಸ್ಥಾನ ಕಳೆದುಕೊಂಡು ನಾಲ್ಕನೇ ಸ್ಥಾನದಲ್ಲಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಮೊದಲ ಇನಿಂಗ್ಸ್ನಲ್ಲಿ 90 ರನ್ ಗಳಿಸಿದ್ದ ಯುವ ಆಟಗಾರ ಶುಭಮನ್ ಗಿಲ್ ಶ್ರೇಯಾಂಕದಲ್ಲಿ ನಾಲ್ಕು ಸ್ಥಾನ ಜಿಗಿದು 16ನೇ ಸ್ಥಾನಕ್ಕೆ ತಲುಪಿದ್ದಾರೆ.
ಕಳೆದ ಕೆಲವು ವರ್ಷಗಳಲ್ಲಿ ವಿರಾಟ್ ಕೊಹ್ಲಿಯ ಪ್ರದರ್ಶನವು ಸಾಕಷ್ಟು ನಿರಾಶಾದಾಯಕವಾಗಿದೆ. ಟೆಸ್ಟ್ ಕ್ರಿಕೆಟ್ನಲ್ಲಿ ಸ್ಪಿನ್ ಬೌಲರ್ಗಳ ವಿರುದ್ಧ ರನ್ ಗಳಿಸುವಲ್ಲಿ ಕೊಹ್ಲಿ ಯಶಸ್ವಿಯಾಗಲಿಲ್ಲ. ಅವರು ಸ್ಪಿನ್ ಬೌಲಿಂಗ್ ಬಹುತೇಕ ಬಾರಿ ತಮ್ಮ ವಿಕೆಟ್ ಕಳೆದುಕೊಂಡಿದ್ದಾರೆ. ಕಳೆದ ಐದು ವರ್ಷಗಳಲ್ಲಿ ವಿರಾಟ್ ಅವರ ಟೆಸ್ಟ್ ಅಂಕಿ-ಅಂಶಗಳ ಬಗ್ಗೆ ನೋಡುವುದಾದರೆ, ನಿರಾಶಾದಾಯಕವಾಗಿವೆ. 2020 ರಿಂದ ಇಲ್ಲಿಯವರೆಗೆ ಕೊಹ್ಲಿ ಟೆಸ್ಟ್ ಕ್ರಿಕೆಟ್ನಲ್ಲಿ ಕೇವಲ 2 ಶತಕಗಳು ಬಂದಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications