ಫಾರ್ಮ್‌ಗೆ ಮರಳಲು ಕೊಹ್ಲಿ ಮಾಸ್ಟರ್‌ಪ್ಲಾನ್: ಹಾರ್ದಿಕ್ ಹಾದಿ ಹಿಡಿಯಲಿದ್ದಾರೆ ಮಾಜಿ ನಾಯಕ

ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಫಾರ್ಮ್ ಕಳೆದುಕೊಂಡು ಸಾಕಷ್ಟು ಸಮಯ ಕಳೆದುಕೊಂಡಿದೆ. ಬರು ಬರುತ್ತಾ ಕೊಹ್ಲಿ ಫಾರ್ಮ್ ಮತ್ತಷ್ಟು ಕಳಪೆಯಾಗುತ್ತಿದೆ. ಹೀಗಾಗಿ ಸಾಕಷ್ಟು ಟೀಕೆಗಳು ಕೊಹ್ಲಿಯತ್ತ ಕೇಳಿ ಬರುತ್ತಿದೆ. ಫಾರ್ಮ್‌ಗೆ ಮರಳು ಕೊಹ್ಲಿ ಅವಿರತ ಪ್ರಯತ್ನಗಳನ್ನು ನಡೆಸುತ್ತಿದ್ದರೂ ಅದಯ ಯಾವುದೂ ಕೂಡ ಕೆಲಸಕ್ಕೆ ಬರುತ್ತಿಲ್ಲ. ಹೀಗಾಗಿ ಭಿನ್ನವಾಗಿ ಯೋಚಿಸಿರುವ ಕೊಹ್ಲಿ ಒಂದು ತಿಂಗಳುಗಳ ಕಾಲ ಕ್ರಿಕೆಟ್ ಚಟುವಟಿಕೆಗಳಿಂದ ದೂರವುಳಿದು ಕುಟುಂಬದೊಂದಿಗೆ ಲಂಡನ್‌ನಲ್ಲಿ ಕಾಲ ಕಳೆಯಲು ನಿರ್ಧರಿಸಿದ್ದಾರೆ.
ಭಾನುವಾರ ನಡೆಯಲಿರುವ ಏಕದಿನ ಸರಣಿಯ ಅಂತಿಮ ಪಂದ್ಯ ವಿರಾಟ್ ಕೊಹ್ಲಿ ಬ್ರೇಕ್ ತೆಗೆದುಕೊಳ್ಳುವ ಮುನ್ನ ಆಡುವ ಅಂತಿಮ ಪಂದ್ಯವಾಗಿದೆ. ವೆಸ್ಟ್ ಇಂಡೀಸ್ ಪ್ರವಾಸದಿಂದ ವಿರಾಟ್ ಕೊಹ್ಲಿ ವಿಶ್ರಾಂತಿಯನ್ನು ಪಡೆದುಕೊಂಡಿದ್ದಾರೆ. ಫಾರ್ಮ್ ಸಮಸ್ಯೆಯಿಂದ ಬಳಲುತ್ತಿರುವ ವಿರಾಟ್ ಕೊಹ್ಲಿ ಮಾನಸಿಕವಾಗಿಯೂ ಸಾಕಷ್ಟು ಜರ್ಝರಿತವಾಗಿದ್ದಾರೆ ಎಂಬುದು ಅವರನ್ನು ಹತ್ತಿರದಿಂದ ಬಲ್ಲವರು ಹೇಳಿಕೊಂಡಿದ್ದಾರೆ.
ಈ ಕಾರಣಗಳಿಂದಾಗಿ ವಿರಾಟ್ ಕೊಹ್ಲಿ ಒಂದು ತಿಂಗಳ ಕಾಲ ಲಂಡನ್‌ನಲ್ಲಿಯೇ ಉಳಿದುಕೊಂಡು ಪತ್ನಿ ಅನುಷ್ಕಾ ಶರ್ಮಾ ಹಾಗೂ ಪುತ್ರಿಯ ಜೊತೆಗೆ ಕಾಲ ಕಳೆಯಲಿದ್ದಾರೆ. ಅದಾದ ಬಳಿಕ ಆಗಸ್ಟ್ ತಿಂಗಳಾಂತ್ಯದಲ್ಲಿ ನಡೆಯಲಿರುವ ಏಷ್ಯಾ ಕಪ್ ಟೂರ್ನಿಯಲ್ಲಿ ಭಾರತ ತಂಡದ ಪರವಾಗಿ ಕಣಕ್ಕಿಳಿಯಲಿದ್ದಾರೆ ಎನ್ನಲಾಗಿದೆ.
HanumanDassGD speaking with AnushkaSharma and imVkohli at KrishnaDas Kirtan in London.
— Go Dharmic (GoDharmic) July 15, 2022
Beautiful conversations about compassion, kindness, Maharaji's message of love and Go Dharmic's work.#loveall #feedall #kirtan #krishnadas #ViratKohli #AnushkaSharma #London #godharmic pic.twitter.com/UrkJxCCRvQ
ಕೊಹ್ಲಿಗೆ ಸಾಥ್ ನೀಡಲಿದ್ದಾರೆ ಪತ್ನಿ ಪುತ್ರಿ
ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಹಾಗೂ ಪುತ್ರಿ ವಮಿಕಾ ಈಗಾಗಲೇ ಲಂಡನ್‌ನಲ್ಲಿ ವಿರಾಟ್ ಕೊಹ್ಲಿ ಜೊತೆ ಸೇರಿಕೊಂಡಿದ್ದಾರೆ. ಮೂಲಗಳ ಮಾಹಿತಿಯ ಪ್ರಕಾರ ವಿರಾಟ್ ಕೊಹ್ಲಿ ತಾಯಿ ಸರೋಜ್ ಅವರು ಕೂಡ ಲಂಡನ್‌ನಲ್ಲಿ ಸೇರಿಕೊಳ್ಳಲಿದ್ದು ಗೌಪ್ಯ ಸ್ಥಳದಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಈ ಮೂಲಕ ತಮ್ಮ ಫಾರ್ಮ್ ವಿಚಾರವಾಗಿ ಕೆಲಿ ಬರುತ್ತಿರುವ ಟೀಕೆಗಳಿಂದಾದ ಒತ್ತಡದಿಂದ ಹೊರಬರುವ ಪ್ರಯತ್ನ ನಡೆಸಲಿದ್ದಾರೆ.

ಕೊಹ್ಲಿಗೆ ಲಾಭವಾಗಲಿದೆಯಾ ಈ ವಿರಾಮ?
ವಿರಾಟ್ ಕೊಹ್ಲಿ ಕಳಪೆ ಫಾರ್ಮ್‌ನಲ್ಲಿರುವ ಈ ಸಂದರ್ಭದಲ್ಲಿ ವಿಶ್ರಾಂತಿ ಪಡೆಯುತ್ತಿರುವ ವಿಚಾರವಾಗಿ ಬಹುತೇಕ ಕ್ರಿಕೆಟ್ ಪ್ರೇಮಿಗಳು ಖುಷಿ ವ್ಯಕ್ತಪಡಿಸಿದ್ದಾರೆ. ಹಾರ್ದಿಕ್ ಪಾಂಡ್ಯ ಫಾರ್ಮ್‌ನಿಂದ ಮರಳಿದಂತೆಯೇ ಕೊಹ್ಲಿಗೂ ಇದರಿಂದಾಗಿ ಸಹಾಯವಾಗಬಹುದು ಎನ್ನಲಾಗುತ್ತಿದೆ. ಹಾರ್ದಿಕ್ ಪಾಂಡ್ಯ ಕೂಡ ಫಾರ್ಮ್ ಹಾಗೂ ಫಿಟ್‌ನೆಸ್ ಸಮಸ್ಯೆಯಿಂದ ಬಳಲುತ್ತಿದ್ದಾಗ ಐದು ತಿಣಗಳ ಕಾಲ ವಿರಾಮವನ್ನು ಪಡೆದುಕೊಂಡಿದ್ದರು. ಬಳಿಕ ಬೆರಗಾಗುವ ರೀತಿಯಲ್ಲಿ ಕಮ್‌ಬ್ಯಾಕ್ ಮಾಡಲು ಯಶಸ್ವಿಯಾಗಿದ್ದರು.

ಭಾನುವಾರ ನಡೆಯಲಿರುವ ಏಕದಿನ ಸರಣಿಯ ಅಂತಿಮ ಪಂದ್ಯ
ಇನ್ನು ಭಾನುವಾರ ಭಾರತ ಹಾಗೂ ಇಂಗ್ಲೆಂಡ್ ತಂಡಗಳ ನಡುವಿನ ಏಕದಿನ ಸರಣಿಯ ಅಂತಿಮ ಪಂದ್ಯ ನಡೆಯಲಿದೆ. ಈ ಮೂಲಕ ಭಾರತದ ಇಂಗ್ಲೆಂಡ್ ಪ್ರವಾಸ ಅಂತ್ಯವಾಗಲಿದೆ. ಈ ಸರಣಿಯಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ತಲಾ ಒಂದೊಂದು ಪಂದ್ಯಗಳಲ್ಲಿ ಗೆಲುವು ಸಾಧಿಸಿದ್ದು ಸರಣಿ ಸಮಬಲದಲ್ಲಿದೆ. ಅಂತಿಮ ಪಂದ್ಯದಲ್ಲಿ ಗೆದ್ದ ತಂಡ ಸರಣಿಯನ್ನು ತನ್ನ ವಶಕ್ಕೆ ಪಡೆಯಲಿದೆ.

ಎರಡು ತಂಡಗಳ ಸ್ಕ್ವಾಡ್‌ಗಳು
ಭಾರತ ಏಕದಿನ ಸ್ಕ್ವಾಡ್: ರೋಹಿತ್ ಶರ್ಮಾ (ನಾಯಕ), ಶಿಖರ್ ಧವನ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ರಿಷಬ್ ಪಂತ್ (WK), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಯುಜುವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ಬೂಮ್ರಾ, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.
ಇಂಗ್ಲೆಂಡ್ ಏಕದಿನ ತಂಡ: ಜೋಸ್ ಬಟ್ಲರ್ (ನಾಯಕ / ವಿಕೆಟ್ ಕೀಪರ್), ಮೊಯಿನ್ ಅಲಿ, ಜಾನಿ ಬೈರ್‌ಸ್ಟೋವ್, ಹ್ಯಾರಿ ಬ್ರೂಕ್, ಬ್ರೈಡನ್ ಕಾರ್ಸೆ, ಸ್ಯಾಮ್ ಕರನ್, ಲಿಯಾಮ್ ಲಿವಿಂಗ್‌ಸ್ಟನ್, ಕ್ರೇಗ್ ಓವರ್‌ಟನ್, ಮ್ಯಾಥ್ಯೂ ಪಾರ್ಕಿನ್ಸನ್, ಜೋ ರೂಟ್, ಜೇಸನ್ ರಾಯ್, ಫಿಲ್ ಸಾಲ್ಟ್, ಬೆನ್ ಸ್ಟೋಕ್ಸ್, ರೀಸ್ ಟೋಪ್ಲಿ, ಡೇವಿಡ್ ವಿಲ್ಲಿ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications