Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Virat Kohli: ವಿರಾಟ್ ಕೊಹ್ಲಿ 94 ರನ್ ಬಾರಿಸಿದರೆ ಎಲೈಟ್‌ ಕ್ಲಬ್‌ಗೆ ಎಂಟ್ರಿ

ಫೆಬ್ರವರಿಯಲ್ಲಿ ಚಾಂಪಿಯನ್ಸ್‌ ಟ್ರೋಫಿ ನಡೆಯಲಿದೆ. ಈ ಟೂರ್ನಿಗೆ ಪೂರ್ವಾಭ್ಯಾಸ ಎಂಬಂತೆ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿ ನಡೆಯಲಿದೆ. ಈಗಾಗಲೇ ಭಾರತದಲ್ಲಿ ನಡೆಯಲಿರುವ ಇಂಗ್ಲೆಂಡ್‌ ವಿರುದ್ಧದ ಐದು ಪಂದ್ಯಗಳ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಆದರೆ ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಗೆ ಭಾರತ ತಂಡವನ್ನು ಪ್ರಕಟಿಸಿಲ್ಲ. ಈ ಸರಣಿಯಲ್ಲಿ ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮತ್ತೊಮ್ಮೆ ಅಂಗಳ ಪ್ರವೇಶಿಸಲಿದ್ದಾರೆ.

ಆಸ್ಟ್ರೇಲಿಯಾದಲ್ಲಿ ಮುಕ್ತಾಯವಾದ ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ ವಿರಾಟ್ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಅಲ್ಲದೆ ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಶತಕ ಸಾಧನೆಯನ್ನು ಮಾಡಿದ್ದು, ಬಿಟ್ಟರೆ, ಉಳಿದ ಪಂದ್ಯಗಳಲ್ಲಿ ನಿರಾಸೆ ಅನುಭವಿಸಿದ್ದಾರೆ. ಆಸ್ಟ್ರೇಲಿಯಾ ಪ್ರವಾಸದಲ್ಲಿ ಆಡಿದ ಒಟ್ಟು 5 ಪಂದ್ಯಗಳಲ್ಲಿ ವಿರಾಟ್‌ ಕೇವಲ 190 ರನ್‌ ಸಿಡಿಸಿದ್ದಾರೆ. ಹೀಗಾಗಿ ಇವರ ಫಾರ್ಮ್‌ ಸಹ ಟೀಕಾಕಾರರಿಗೆ ಆಹಾರವಾಗುತ್ತಿದೆ. ಈ ಟೀಕೆಗಳನ್ನು ಮೆಟ್ಟಿ ನಿಲ್ಲಲು ವಿರಾಟ್‌ಗೆ ಬೆಸ್ಟ್ ಚಾನ್ಸ್‌ ಸಿಗಲಿದೆ.

Virat Kohli Poised to Join ODI Cricket s 14 000-Run Elite Club

ಎಲೈಟ್‌ ಕ್ಲಬ್ ಮೇಲೆ ವಿರಾಟ್ ಕಣ್ಣು

ಫೆಬ್ರವರಿ 6 ರಿಂದ ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ಏಕದಿನ ಸರಣಿಯನ್ನು ಆಡಲಿದೆ. ಈ ಮೂರು ಪಂದ್ಯಗಳ ಸರಣಿಯಲ್ಲಿ ಟೀಮ್ ಇಂಡಿಯಾದ ಚೇಸಿಂಗ್ ಸ್ಟಾರ್ ಖ್ಯಾತಿಯ ವಿರಾಟ್ ಕೊಹ್ಲಿ ದೊಡ್ಡ ದಾಖಲೆಯನ್ನು ಬರೆಯುವ ಸನಿಹದಲ್ಲಿದ್ದಾರೆ. ವಿರಾಟ್ ಏಕದಿನ ಕ್ರಿಕೆಟ್‌ನಲ್ಲಿ 14000 ರನ್‌ ಬಾರಿಸುವ ಸಮಿಪ ನಿಂತಿದ್ದಾರೆ. ಈ ಮೂರು ಪಂದ್ಯಗಳ ಸರಣಿಯಲ್ಲಿ ವಿರಾಟ್ 94 ರನ್ ಗಳಿಸುವಲ್ಲಿ ಯಶಸ್ವಿಯಾದರೆ, ಈ ದಾಖಲೆಯನ್ನು ನಿರ್ಮಿಸಬಹುದು.

ಏಕದಿನ ಕ್ರಿಕೆಟ್‌ ಇತಿಹಾಸವನ್ನು ಒಮ್ಮೆ ತಿರುಗಿಸುತ್ತಾ ಸಾಗಿದರೆ, ಏಕದಿನ ಕ್ರಿಕೆಟ್‌ನಲ್ಲಿ 14000 ಕ್ಕೂ ಹೆಚ್ಚು ರನ್‌ಗಳನ್ನು ವಿಶ್ವದಲ್ಲೇ ಇಬ್ಬರು ಮಾತ್ರ ಸಾಧಿಸಿದ್ದಾರೆ. ಇದರಲ್ಲಿ ಮುಂಚೂಣಿಯಲ್ಲಿ ಕ್ರಿಕೆಟ್‌ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಹೆಸರು ಕಾಣಿಸಿಕೊಳ್ಳುತ್ತದೆ. ಇವರು ಏಕದಿನ ಕ್ರಿಕೆಟ್‌ನಲ್ಲಿ 18426 ರನ್ ಗಳಿಸಿದ್ದರೆ. ಇನ್ನು ಈ ಪಟ್ಟಿಯಲ್ಲಿ ಕಾಣಿಸಿಕೊಳ್ಳುವ ಎರಡನೇ ಹೆಸರು ಶ್ರೀಲಂಕಾದ ಕುಮಾರ್ ಸಂಗಕ್ಕಾರ. ಇವರ ಬುಟ್ಟಿಯಲ್ಲಿ 14234 ರನ್‌ಗಳಿವೆ. ಈಗ ವಿರಾಟ್‌ ಎಲೈಟ್‌ ಕ್ಲಬ್‌ ಸೇರುವ ಹತ್ತಿರದಲ್ಲಿ ನಿಂತಿದ್ದಾರೆ. ಈ ಸಾಧನೆಯನ್ನು ವಿರಾಟ್‌ ಎಷ್ಟು ಪಂದ್ಯಗಳಲ್ಲಿ ಪೂರ್ಣಗೊಳಿಸುತ್ತಾರೆ ಎಂಬುದು ಸಹ ಕುತೂಹಲ ಮೂಡಿಸಿದೆ.

Virat Kohli Poised to Join ODI Cricket s 14 000-Run Elite Club

ವಿರಾಟ್ ಸಾಧನೆ

ಟೀಮ್ ಇಂಡಿಯಾದ ಚೇಸಿಂಗ್ ಸ್ಟಾರ್ ಖ್ಯಾತಿಯ ವಿರಾಟ್‌ ಇಂಗ್ಲೆಂಡ್ ವಿರುದ್ಧವೂ ಸೀಮಿತ ಓವರ್ ಗಳ ಕ್ರಿಕೆಟ್‌ನಲ್ಲಿ ಸ್ಥಿರ ಪ್ರದರ್ಶನ ನೀಡಿರುವ ಆಟಗಾರ. ವಿರಾಟ್ ಇಂಗ್ಲೆಂಡ್ ವಿರುದ್ಧ 36 ಏಕದಿನ ಪಂದ್ಯಗಳನ್ನು ಆಡಿದ್ದು, 41.87ರ ಸರಾಸರಿಯಲ್ಲಿ 1340 ರನ್‌ ಸಿಡಿಸಿದ್ದಾರೆ. ಇದರಲ್ಲಿ 3 ಶತಕ ಹಾಗೂ 9 ಅರ್ಧಶತಕಗಳು ಸೇರಿವೆ. ಇನ್ನು ಭಾರತದಲ್ಲಿ ವಿರಾಟ್‌ 122 ಏಕದಿನ ಪಂದ್ಯಗಳನ್ನು ಆಡಿದ್ದು, 60.85ರ ಸರಾಸರಿಯಲ್ಲಿ 6268 ರನ್‌ ಸಿಡಿಸಿದ್ದರೆ. ಇದರಲ್ಲಿ 24 ಶತಕ ಹಾಗೂ 33 ಅರ್ಧಶತಕಗಳು ಸೇರಿವೆ.

Story first published: Tuesday, January 14, 2025, 8:00 [IST]
Other articles published on Jan 14, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+