'ನೀನು ಯಾರೆಂದು ನೆನಪಿರಲಿ' ಎಂದು ಮಧ್ಯರಾತ್ರಿ ಪೋಸ್ಟ್ ಹಾಕಿ ಇಂಗ್ಲೆಂಡ್‌ಗೆ ಎಚ್ಚರಿಕೆ ನೀಡಿದ ಕೊಹ್ಲಿ

ನ್ಯೂಜಿಲೆಂಡ್ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‍ಶಿಪ್ ಫೈನಲ್ ಪಂದ್ಯದಲ್ಲಿ ಸೋತ ಬಳಿಕ ಇಂಗ್ಲೆಂಡ್‌ನಲ್ಲಿಯೇ ಉಳಿದುಕೊಂಡಿರುವ ಟೀಮ್ ಇಂಡಿಯಾ ಆಗಸ್ಟ್ 4ರಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ 5 ಟೆಸ್ಟ್ ಪಂದ್ಯಗಳ ಸರಣಿಯನ್ನಾಡಲಿದೆ. ಈ ಸರಣಿಯನ್ನು ಗೆಲ್ಲುವ ವಿಶ್ವಾಸವನ್ನು ಈ ಹಿಂದೆಯೇ ವಿರಾಟ್ ಕೊಹ್ಲಿ ವ್ಯಕ್ತಪಡಿಸಿದ್ದರು ಹಾಗೂ ಅತ್ತ ಇಂಗ್ಲೆಂಡ್ ತಂಡ ಕಳೆದ ಭಾರತದ ಪ್ರವಾಸದಲ್ಲಿ ಕಂಡ ಹೀನಾಯ ಸೋಲಿನ ಸೇಡನ್ನು ತೀರಿಸಿಕೊಳ್ಳಲು ಕಾಯುತ್ತಿದೆ.
ಹೀಗಾಗಿ ಭಾರತ ಮತ್ತು ಇಂಗ್ಲೆಂಡ್ ತಂಡಗಳ ನಡುವೆ ನಡೆಯಲಿರುವ ಟೆಸ್ಟ್ ಸರಣಿ ದೊಡ್ಡ ಮಟ್ಟದ ನಿರೀಕ್ಷೆಯನ್ನು ಹುಟ್ಟು ಹಾಕುತ್ತಿದೆ. ಇದೇ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಗುರುವಾರ ಮಧ್ಯರಾತ್ರಿ ತಮ್ಮ ಸಾಮಾಜಿಕ ಜಾಲತಾಣ ಖಾತೆಗಳಲ್ಲಿ 2018ರ ತಮ್ಮ ಭಾವಚಿತ್ರವೊಂದನ್ನು ಬಳಸಿ "ನೀವು ಯಾರೆಂದು ನೆನಪಿಡಿ, ಬೇರೆಯವರು ಅದನ್ನು ನಿಮಗೆ ಮನವರಿಕೆ ಮಾಡಲು ಬಿಡಬೇಡಿ" ಎಂದು ಬರೆದುಕೊಂಡಿದ್ದಾರೆ.
ಹೀಗೆ 2018ರಲ್ಲಿ ಭಾರತ ಇಂಗ್ಲೆಂಡ್ ಪ್ರವಾಸ ಕೈಗೊಂಡಿದ್ದಾಗ ಮೊದಲ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಮೋಘ 149 ರನ್ ಬಾರಿಸಿ ಇಂಗ್ಲೆಂಡ್ ನೆಲದಲ್ಲಿ ವಿರಾಟ್ ಕೊಹ್ಲಿ ಆಡುವುದು ಅನುಮಾನ ಎನ್ನುತ್ತಿದ್ದವರ ಬಾಯಿ ಮುಚ್ಚಿಸಿದ್ದರು. ಅದೇ ಚಿತ್ರವನ್ನು ವಿರಾಟ್ ಕೊಹ್ಲಿ ಈ ಪೋಸ್ಟ್‌ನಲ್ಲಿ ಹಂಚಿಕೊಳ್ಳುವುದರ ಮೂಲಕ ಇಂಗ್ಲೆಂಡ್ ತಂಡಕ್ಕೆ ಎಚ್ಚರಿಕೆಯನ್ನು ರವಾನಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications