Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ಆಸ್ಟ್ರೇಲಿಯಾ: ಮೊದಲ ದಿನದ ಆಟಕ್ಕೆ ವಿರಾಟ್ ಕೊಹ್ಲಿ ಟ್ವಿಟ್ಟರ್‌ನಲ್ಲಿ ಪ್ರತಿಕ್ರಿಯೆ

Virat Kohli Praises team india after dominate Day 1 proceedings

ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನದ ಆಟದಲ್ಲಿ ಭಾರತ ಅದ್ಭುತವಾದ ಪ್ರದರ್ಶನವನ್ನು ನೀಡಿದೆ. ಆಸ್ಟ್ರೇಲಿಯಾವನ್ನು 195 ರನ್‌ಗಳಿಗೆ ಆಲೌಟ್ ಮಾಡುವಲ್ಲಿ ಭಾರತೀಯ ಬೌಲರ್‌ಗಳು ಯಶಸ್ವಿಯಾಗಿದ್ದು ಮೊದಲ ದಿನದಾಟದಲ್ಲಿ ಟೀಮ್ ಇಂಡಿಯಾ ಮೇಲುಗೈ ಸಾಧಿಸುವಂತೆ ಮಾಡಿದೆ. ಟೀಮ್ ಇಂಡಿಯಾದ ಈ ಪ್ರದರ್ಶನಕ್ಕೆ ನಾಯಕ ವಿರಾಟ್ ಕೊಹ್ಲಿ ಟ್ವೀಟ್‌ನಲ್ಲಿ ಪ್ರತಿಕ್ರಿಯಿಸಿದ್ದಾರೆ.

"ಮೊದಲ ದಿನ ನಮಗೆ ಶ್ರೇಷ್ಠವಾಗಿತ್ತು. ಬೌಲರ್‌ಗಳ ಕಡೆಯಿಂದ ಅದ್ಭುತವಾದ ಪ್ರದರ್ಶನ ಹಾಗೂ ಅದ್ಭುತವಾದ ಅಂತ್ಯ" ಎಂದು ವಿರಾಟ್ ಕೊಹ್ಲಿ ಟ್ವೀಟ್‌ನಲ್ಲಿ ಟೀಮ್ ಇಂಡಿಯಾದ ಪ್ರದರ್ಶನವನ್ನು ಪ್ರಶಂಸಿಸಿದ್ದಾರೆ. ವಿರಾಟ್ ಕೊಹ್ಲಿ ಟ್ವೀಟ್‌ಗೆ ಅಭಿಮಾನಿಗಳು ಪ್ರತಿಕ್ರಿಯಿಸುತ್ತಿದ್ದಾರೆ.

ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಮಾತ್ರವೇ ಲಭ್ಯವಾಗಿದ್ದರು. ಆ ಪಂದ್ಯದಲ್ಲಿ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆಯನ್ನು ಪಡೆದುಕೊಂಡಿತ್ತಾದರೂ ಎರಡನೇ ಇನ್ನಿಂಗ್ಸ್‌ನಲ್ಲಿ ಕೆಟ್ಟ ಪ್ರದರ್ಶನವನ್ನು ನೀಡಿ ಹೀನಾಯವಾಗಿ ಸೀಲು ಕಂಡಿತ್ತು.

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಪಿತೃತ್ವದ ರಜೆಯ ಹಿನ್ನೆಲೆಯಲ್ಲಿ ತವರಿಗೆ ಮರಳಿದ್ದಾರೆ. ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮ ಮುಂದಿನ ಜನವರಿ ತಿಂಗಳಿನಲ್ಲಿ ಮೊದಲ ಮಗುವಿಗೆ ಜನಮ್ ನಿಡಲಿದ್ದು ಆ ಹಿನ್ನೆಲೆಯಲ್ಲಿ ನಾಯಕ ವಿರಾಟ್ ಕೊಹ್ಲಿ ತವರಿಗೆ ವಾಪಾಸಾಗಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತದ ಬೌಲಿಂಗ್ ಶ್ರೇಷ್ಠ ಪ್ರದರ್ಶನವನ್ನು ನೀಡಿದೆ. ಜಸ್ಪ್ರೀತ್ ಬೂಮ್ರಾ ನಾಲ್ಕು ವಿಕೆಟ್ ಕಿತ್ತರೆ ಆರ್ ಅಶ್ವಿನ್ ಪ್ರಮುಖ ಮೂರು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಚೊಚ್ಚಲ ಪಂದ್ಯವನ್ನಾಡಿದ ಮೊಹಮ್ಮದ್ ಸಿರಾಜ 2 ಹಾಗೂ ರವೀಂದ್ರ ಜಡೇಜಾ ಒಂದು ವಿಕೆಟ್ ಪಡೆದು ಮಿಂಚಿದ್ದಾರೆ. ಭಾರತ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದು 36 ರನ್‌ಗಳಿಗೆ 1 ವಿಕೆಟ್ ಕಳೆದುಕೊಂಡಿದೆ

Story first published: Saturday, December 26, 2020, 16:04 [IST]
Other articles published on Dec 26, 2020
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+