Virat Kohli: ಅಭಿಮಾನಿಗಳಿಂದ ಅದ್ಧೂರಿ ವಿರಾಟ್ ಕೊಹ್ಲಿ ರಥಯಾತ್ರೆ; ವಿಡಿಯೋ ವೈರಲ್
ಜುಲೈ 8 ಸೋಮವಾರ, ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್ 2024 ಟ್ರೋಫಿ ಗೆದ್ದ ನಂತರ ಚುಟುಕು ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ಆದರೆ ನಿವೃತ್ತಿಯಾಗುವ ಮುನ್ನ ಭಾರತವನ್ನು ವಿಶ್ವ ಚಾಂಪಿಯನ್ ಪಟ್ಟಕ್ಕೇರಿಸಿರುವ ಹೆಗ್ಗಳಿಕೆ ಪಾತ್ರರಾಗಿದ್ದಾರೆ.
ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ವಿರಾಟ್ ಕೊಹ್ಲಿ 76 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಹೀಗಾಗಿ ಸಂಕಷ್ಟದಲ್ಲಿದ್ದ ಟೀಮ್ ಇಂಡಿಯಾ ಸವಾಲಿನ ಮೊತ್ತ ಕಲೆ ಹಾಕಿತ್ತು. ಹೀಗಾಗಿ ಭಾರತ ಚಾಂಪಿಯನ್ ಆದ ನಂತರ ಪಂದ್ಯದ ಶ್ರೇಷ್ಠ ಪ್ರಶಸ್ತಿಯನ್ನು ಗೆದ್ದಿದ್ದಾರೆ.

ಇದೇ ವೇಳೆ ವಿರಾಟ್ ಕೊಹ್ಲಿ ಅಭಿಮಾನಿಗಳು ಇಡೀ ದೇಶದ ಎಲ್ಲರ ಗಮನ ಸೆಳೆದಿದ್ದಾರೆ. ತಮ್ಮ ನೆಚ್ಚಿನ ಕ್ರಿಕೆಟಿಗನ ಮೇಲೆ ಇರುವ ಪ್ರೀತಿಯನ್ನು ವಿರಾಟ್ ಕೊಹ್ಲಿ ಅಭಿಮಾನಿಗಳು ವಿಭಿನ್ನವಾಗಿ ವ್ಯಕ್ತಪಡಿಸಿದ್ದಾರೆ.
ವಿರಾಟ್ ಕೊಹ್ಲಿಗಾಗಿ ಅಭಿಮಾನಿಗಳು ರಥಯಾತ್ರೆ ನಡೆಸಿದ್ದಾರೆ. ಇದರ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ವಿಡಿಯೋದಲ್ಲಿ ಕಿಂಗ್ ಕೊಹ್ಲಿ ಅಭಿಮಾನಿಗಳು ರಥಯಾತ್ರೆ ನಡೆಸುತ್ತಿರುವುದು ಸೆರೆಯಾಗಿದೆ.
ಈ ವಿಡಿಯೋ ಎಲ್ಲಿಯದು? ಯಾವ ಊರು? ಎಂಬುದು ಸ್ಪಷ್ಟವಾಗಿಲ್ಲ. ಆದರೆ ಅಭಿಮಾನಿಗಳು ವಿರಾಟ್ ಕೊಹ್ಲಿಗಾಗಿ ಯಾವ ಮಟ್ಟಕ್ಕೂ ಹೋಗಬಹುದು ಎಂಬುದನ್ನು ಸ್ಪಷ್ಟವಾಗಿ ಈ ರಥಯಾತ್ರೆ ಮೂಲಕ ತೋರಿಸಿದ್ದಾರೆ.
ವಿಡಿಯೋದಲ್ಲಿರುವಂತೆ ಬಸ್‌ನಿಂದ ರಥಯಾತ್ರೆ ಮಾಡಲಾಗಿದೆ. ಬಸ್ ತುಂಬ ಎಲ್ಲೆಂದರಲ್ಲಿ ವಿರಾಟ್ ಕೊಹ್ಲಿ ಅವರ ಫೋಟೋ ಮತ್ತು ಬ್ಯಾನರ್‌ಗಳಿವೆ. ಇದರೊಂದಿಗೆ ಇಡೀ ಬಸ್ಸಿಗೆ ತ್ರಿವರ್ಣ ಧ್ವಜವನ್ನು ಹೊದಿಸಲಾಗಿದೆ.
ಈ ಬಸ್‌ನಲ್ಲಿ ವಿರಾಟ್ ಕೊಹ್ಲಿ ಅಭಿಮಾನಿಗಳು ಟೀಮ್ ಇಂಡಿಯಾ ಜೆರ್ಸಿಯಲ್ಲಿ ಕಾಣಿಸಿಕೊಂಡಿದ್ದಾರೆ. ಕೆಲವು ಅಭಿಮಾನಿಗಳು ಬಸ್‌ನ ಮೇಲ್ಛಾವಣಿಯಲ್ಲಿ ಕಾಣಿಸಿಕೊಂಡರೆ ಕೆಲವು ಅಭಿಮಾನಿಗಳು ಸಹ ಒಳಗೆ ಕುಳಿತಿದ್ದಾರೆ. ವಿರಾಟ್‌ಗಾಗಿ ಅಭಿಮಾನಿಗಳಲ್ಲಿ ತುಂಬಿರುವ ಉತ್ಸಾಹವನ್ನು ಈ ವಿಡಿಯೋದಲ್ಲಿ ಕಾಣಬಹುದು.
2024ರ ಟಿ20 ವಿಶ್ವಕಪ್‌ನಲ್ಲಿ ಕೊಹ್ಲಿ ಪ್ರದರ್ಶನ
ವಿರಾಟ್ ಕೊಹ್ಲಿ 2024ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಅಸ್ಥಿರ ಪ್ರದರ್ಶನ ನೀಡಿದ್ದರು. ಆದರೇ ಫೈನಲ್‌ನಲ್ಲಿ ಕೊಹ್ಲಿ ಆಡಿದ ಇನ್ನಿಂಗ್ಸ್ ಭಾರತ ಚಾಂಪಿಯನ್ ಆಗಲು ನೆರವಾಗಿದೆ. ವಿರಾಟ್ ಕೊಹ್ಲಿ 8 ಪಂದ್ಯಗಳಲ್ಲಿ 1 ಅರ್ಧಶತಕದ ನೆರವಿನಿಂದ 151 ರನ್ ಗಳಿಸಿದ್ದರು.
ಟಿ20 ಕ್ರಿಕೆಟ್‌ನಲ್ಲಿ ವಿರಾಟ್ ಭಾರತದ ಪರ 125 ಪಂದ್ಯಗಳಲ್ಲಿ 1 ಶತಕ ಮತ್ತು 38 ಅರ್ಧಶತಕಗಳೊಂದಿಗೆ 4188 ರನ್ ಗಳಿಸಿದ್ದಾರೆ. ಈ ಅವಧಿಯಲ್ಲಿ ಕೊಹ್ಲಿ ಅತ್ಯುತ್ತಮ ಸ್ಕೋರ್ ಅಜೇಯ 122 ರನ್ ಆಗಿದೆ. ಟಿ20 ವೃತ್ತಿಜೀವನದಲ್ಲಿ ಕೊಹ್ಲಿ ಅವರ ಸರಾಸರಿ 48.7 ಮತ್ತು ಸ್ಟ್ರೈಕ್ ರೇಟ್ 137.0 ಹೊಂದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications