Virat Kohli: ಕಾಂಗರೂಗಳ ನಾಡಿನಲ್ಲಿ ಇತಿಹಾಸ ಸೃಷ್ಟಿಸಲು ವಿರಾಟ್ ತಯಾರು; ಪಾಂಟಿಂಗ್ ರೆಕಾರ್ಡ್ ಬ್ರೇಕ್ ಪಕ್ಕಾ!
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 5 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗಾಗಿ ಕ್ರಿಕೆಟ್ ಅಭಿಮಾನಿಗಳು ಕಾಯುತ್ತಿದ್ದಾರೆ. ಉಭಯ ತಂಡಗಳ ರೋಚಕ ಟೆಸ್ಟ್ ಸರಣಿ ನವೆಂಬರ್ 22 ರಿಂದ ಪರ್ತ್ ಸ್ಟೇಡಿಯಂನಲ್ಲಿ ಆರಂಭವಾಗಲಿದೆ. ಈ ಟೆಸ್ಟ್ ಸರಣಿಯಲ್ಲಿ ಉಭಯ ತಂಡಗಳ ಆಟಗಾರರು ಹಲವು ದಾಖಲೆಗಳನ್ನು ಸೃಷ್ಟಿಸುವ ಅವಕಾಶವನ್ನು ಹೊಂದಿದ್ದಾರೆ. ಈ ರೇಸ್‌ನಲ್ಲಿ ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಮುಂಚೂಣಿಯಲ್ಲಿದ್ದಾರೆ. ಕಾಂಗೂರಗಳ ನಾಡಿನಲ್ಲಿ ವಿರಾಟ್ ಕೊಹ್ಲಿ ಇತಿಹಾಸ ಸೃಷ್ಟಿಸಲು ಸಿದ್ದರಾಗಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಅವರಿಗೆ ಹಲವು ದಾಖಲೆಗಳನ್ನು ಮಾಡುವ ಅವಕಾಶವಿದೆ. ಅದರಲ್ಲಿ ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಂಟಿಂಗ್ ಅವರ ದಾಖಲೆಯನ್ನು ವಿರಾಟ್ ಕೊಹ್ಲಿ ಮುರಿಯುವ ತವಕದಲ್ಲಿದ್ದಾರೆ. ಪ್ರಸ್ತುತ ವಿರಾಟ್ ಕೊಹ್ಲಿ ಫಾರ್ಮ್‌ನಲ್ಲಿ ಇಲ್ಲದಿರಬಹುದು. ಆದರೆ ಆಸ್ಟ್ರೇಲಿಯಾ ವಿರುದ್ಧದ ಐದು ಪಂದ್ಯಗಳ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಅವರು ರನ್ ಮಳೆ ಸುರಿಯುವ ನಿರೀಕ್ಷೆಯಲ್ಲಿದ್ದಾರೆ. ಈ ಹಿಂದೆ ಆಸ್ಟ್ರೇಲಿಯಾದ ಪಿಚ್‌ಗಳಲ್ಲಿ ವಿರಾಟ್ ಕೊಹ್ಲಿ ಅದ್ಭುತ ಬ್ಯಾಟಿಂಗ್ ಮಾಡಿ ಗಮನ ಸೆಳೆದಿದ್ದಾರೆ.

ಪಾಂಟಿಂಗ್ ರೆಕಾರ್ಡ್ ಬ್ರೇಕ್
ಆಸ್ಟ್ರೇಲಿಯಾ ವಿರುದ್ಧ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ 350 ರನ್ ಗಳಿಸುವ ಮೂಲಕ ರಿಕಿ ಪಾಂಟಿಂಗ್ ದಾಖಲೆಯನ್ನು ಮುರಿಯಲಿದ್ದಾರೆ. ವಿರಾಟ್ ಕೊಹ್ಲಿ ಇನ್ನೂ 350 ರನ್ ಗಳಿಸಿದರೆ, ರಿಕಿ ಪಾಂಟಿಂಗ್ ಹಿಂದಿಕ್ಕಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ ಪಟ್ಟಿಯಲ್ಲಿ ಮೂರನೇ ಸ್ಥಾನಕ್ಕೆ ತಲುಪಲಿದ್ದಾರೆ. ಇದರೊಂದಿಗೆ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 27484 ರನ್ ಪೂರೈಸಲಿದ್ದಾರೆ. ಈಗಾಗಲೇ ನಿವೃತ್ತಿ ಘೋಷಿಸಿರುವ ರಿಕಿ ಪಾಂಟಿಂಕ್ 27483 ರನ್ ಗಳನ್ನು ಗಳಿಸಿದ್ದಾರೆ. ಸದ್ಯ ವಿರಾಟ್ ಕೊಹ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 27134 ರನ್ ಕಲೆ ಹಾಕಿದ್ದಾರೆ.
ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್‌ಗಳು
- ಸಚಿನ್ ತೆಂಡೂಲ್ಕರ್ (ಭಾರತ) - 34357 ರನ್
- ಕುಮಾರ್ ಸಂಗಕ್ಕಾರ (ಶ್ರೀಲಂಕಾ) - 28016 ರನ್
- ರಿಕಿ ಪಾಂಟಿಂಗ್ (ಆಸ್ಟ್ರೇಲಿಯಾ) - 27483 ರನ್
- ವಿರಾಟ್ ಕೊಹ್ಲಿ (ಭಾರತ) - 27134* ರನ್
- ಮಹೇಲಾ ಜಯವರ್ಧನೆ (ಶ್ರೀಲಂಕಾ) - 25957 ರನ್
- ಜಾಕ್ವೆಸ್ ಕಾಲಿಸ್ (ದಕ್ಷಿಣ ಆಫ್ರಿಕಾ) - 25534 ರನ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications