ಕೊಹ್ಲಿಗೆ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಬೀಳ್ಕೊಡುಗೆ ಪಂದ್ಯವನ್ನು ಬೇಡ ಎಂದು ತಡೆದದ್ದು ಇವರೇ!

ವಿದಾಯದ ಪಂದ್ಯ ಆಡಿ ಅಂತ BCCI ಹೇಳಿದ್ದಕ್ಕೆ Kohli ಖಡಕ್ಕಾಗಿ ಹೇಳಿದ್ದೇನು? | Oneindia Kannada

ಸದ್ಯ ಕ್ರಿಕೆಟ್ ಜಗತ್ತಿನಲ್ಲಿ ಅತಿ ದೊಡ್ಡ ಮಟ್ಟದ ವಿವಾದ ಹಾಗೂ ಚರ್ಚೆಗಳಿಗೆ ಈಡಾಗಿರುವ ಆಟಗಾರನೆಂದರೆ ಅದು ವಿರಾಟ್ ಕೊಹ್ಲಿ. ಹೌದು, ಕಳೆದ ವರ್ಷದ ಆರಂಭದಲ್ಲಿ ಭಾರತ ಏಕದಿನ, ಟಿ ಟ್ವೆಂಟಿ ಹಾಗೂ ಟೆಸ್ಟ್ ಈ ಮೂರೂ ಆವೃತ್ತಿಯ ತಂಡಗಳಿಗೂ ನಾಯಕನಾಗಿದ್ದ ವಿರಾಟ್ ಕೊಹ್ಲಿ ಈ ವರ್ಷದ ಜನವರಿ ತಿಂಗಳಿನಲ್ಲಿ ಈ ಎಲ್ಲಾ ತಂಡಗಳ ನಾಯಕತ್ವದ ಜವಾಬ್ದಾರಿಯನ್ನು ಕೂಡ ಕಳೆದುಕೊಂಡಿದ್ದಾರೆ.

ವಿರಾಟ್ ಕೊಹ್ಲಿ ಭಾರತ ಟೆಸ್ಟ್ ತಂಡದ ನಾಯಕತ್ವದಿಂದ ಕೆಳಗಿಳಿಯುವುದಕ್ಕೆ ಈ ಅಂಶಗಳೇ ಕಾರಣ!ವಿರಾಟ್ ಕೊಹ್ಲಿ ಭಾರತ ಟೆಸ್ಟ್ ತಂಡದ ನಾಯಕತ್ವದಿಂದ ಕೆಳಗಿಳಿಯುವುದಕ್ಕೆ ಈ ಅಂಶಗಳೇ ಕಾರಣ!

ಕಳೆದ ವರ್ಷ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಆರಂಭಕ್ಕೂ ಮುನ್ನ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವವನ್ನು ತ್ಯಜಿಸುವುದಾಗಿ ನಿರ್ಧಾರವನ್ನು ಕೈಗೊಂಡಿದ್ದ ವಿರಾಟ್ ಕೊಹ್ಲಿ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ಬಳಿಕ ನಾಯಕತ್ವವನ್ನು ತ್ಯಜಿಸಿದ್ದರು. ಹೀಗೆ ನಾಯಕತ್ವವನ್ನು ತ್ಯಜಿಸುವ ವೇಳೆ ಭಾರತ ಏಕದಿನ ಹಾಗೂ ಟೆಸ್ಟ್ ತಂಡಗಳ ನಾಯಕನಾಗಿ ಮುಂದುವರಿಯುತ್ತೇನೆ ಎಂಬ ಭರವಸೆಯನ್ನು ವಿರಾಟ್ ಕೊಹ್ಲಿ ನೀಡಿದ್ದರು. ಆದರೆ ಕೊಹ್ಲಿ ನೀಡಿದ್ದ ಈ ಭರವಸೆಗಳು ನಿಜವಾಗಲಿಲ್ಲ. ಬದಲಾಗಿ ವಿರಾಟ್ ಕೊಹ್ಲಿ ಟಿ ಟ್ವೆಂಟಿ ನಾಯಕತ್ವದಿಂದ ಕೆಳಗಿಳಿದ ಬೆನ್ನಲ್ಲೇ ಬಿಸಿಸಿಐ ಕೊಹ್ಲಿಯನ್ನು ಭಾರತ ಏಕದಿನ ತಂಡದ ನಾಯಕತ್ವದಿಂದ ಕೂಡ ವಜಾಗೊಳಿಸಿತು.

ಟೆಸ್ಟ್ ನಾಯಕತ್ವಕ್ಕೆ ಕೊಹ್ಲಿ ವಿದಾಯ: ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಗೆದ್ದಿದ್ದೆಷ್ಟು, ಸೋತಿದ್ದೆಷ್ಟು?ಟೆಸ್ಟ್ ನಾಯಕತ್ವಕ್ಕೆ ಕೊಹ್ಲಿ ವಿದಾಯ: ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಗೆದ್ದಿದ್ದೆಷ್ಟು, ಸೋತಿದ್ದೆಷ್ಟು?

ಹೀಗೆ ಭಾರತ ಏಕದಿನ ತಂಡದ ನಾಯಕತ್ವವನ್ನು ಕೂಡಾ ಕಳೆದುಕೊಂಡ ಕೊಹ್ಲಿ ಇದೀಗ ಭಾರತ ಟೆಸ್ಟ್ ತಂಡದ ನಾಯಕತ್ವಕ್ಕೆ ಕೂಡ ರಾಜಿನಾಮೆಯನ್ನು ನೀಡಿದ್ದಾರೆ. ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಟೀಮ್ ಇಂಡಿಯಾದ ಯಾವುದೇ ನಾಯಕನೂ ಕೂಡ ಸಾಧಿಸಿರದಂತಹ ಯಶಸ್ಸನ್ನು ಸಾಧಿಸಿರುವ ವಿರಾಟ್ ಕೊಹ್ಲಿ ಈ ದಿಢೀರ್ ನಿರ್ಧಾರ ಕೈಗೊಂಡಿದ್ದನ್ನು ಕಂಡ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಬೇಸರಕ್ಕೊಳಗಾಗಿದ್ದರು ಹಾಗೂ ಆಶ್ಚರ್ಯವನ್ನು ಕೂಡಾ ಪಟ್ಟಿದ್ದರು. ಅದರಲ್ಲಿಯೂ ವಿರಾಟ್ ಕೊಹ್ಲಿಗೆ ನಾಯಕನಾಗಿ ಅಂತಿಮ ಪಂದ್ಯವನ್ನಾಡಲು ಅವಕಾಶ ಮಾಡಿಕೊಟ್ಟು ಬೀಳ್ಕೊಡುಗೆ ಗೌರವವನ್ನು ನೀಡಲು ಮುಂದಾಗದ ಬಿಸಿಸಿಐ ವಿರುದ್ಧ ಭಾರತ ಕ್ರಿಕೆಟ್ ತಂಡದ ಅಭಿಮಾನಿಗಳು ದೊಡ್ಡ ಮಟ್ಟದಲ್ಲಿಯೇ ಆಕ್ರೋಶವನ್ನು ವ್ಯಕ್ತಪಡಿಸಿದರು. ಈ ವಿಷಯದ ಕುರಿತಾಗಿ ಮಾತನಾಡಿರುವ ಬಿಸಿಸಿಐನ ಅಧಿಕಾರಿಯೋರ್ವರು ಈ ಕೆಳಕಂಡಂತೆ ಮಾಹಿತಿಯನ್ನು ನೀಡಿದ್ದಾರೆ.

ವಿರಾಟ್ ಕೊಹ್ಲಿಗೆ ಬೆಂಗಳೂರಿನಲ್ಲಿ ಬೀಳ್ಕೊಡುಗೆ ಪಂದ್ಯವನ್ನು ನಡೆಸಲು ಬಿಸಿಸಿಐ ಸಿದ್ಧವಿತ್ತು

ವಿರಾಟ್ ಕೊಹ್ಲಿಗೆ ಬೆಂಗಳೂರಿನಲ್ಲಿ ಬೀಳ್ಕೊಡುಗೆ ಪಂದ್ಯವನ್ನು ನಡೆಸಲು ಬಿಸಿಸಿಐ ಸಿದ್ಧವಿತ್ತು

ಬಿಸಿಸಿಐನ ಅಧಿಕಾರಿಯೊಬ್ಬರು ನೀಡಿರುವ ಹೇಳಿಕೆಯ ಪ್ರಕಾರ ಬಿಸಿಸಿಐ ನಾಯಕ ವಿರಾಟ್ ಕೊಹ್ಲಿಗೆ ಬೀಳ್ಕೊಡುಗೆ ಪಂದ್ಯವನ್ನು ಬೆಂಗಳೂರಿನಲ್ಲಿ ನಡೆಸಲು ತೀರ್ಮಾನಿಸಿತ್ತಂತೆ. ನೂರನೇ ಟೆಸ್ಟ್ ಪಂದ್ಯದಲ್ಲಿ ನಾಯಕನಾಗಿ ತಂಡವನ್ನು ಮುನ್ನಡೆಸುವಂತೆ ಕೊಹ್ಲಿಗೆ ಬಿಸಿಸಿಐ ಸೂಚಿಸಿತ್ತಂತೆ ಹಾಗೂ ಈ ಪಂದ್ಯವನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಏರ್ಪಡಿಸಿ ಕೊಹ್ಲಿಗೆ ಗೌರವ ನೀಡಲು ಬಿಸಿಸಿಐ ತೀರ್ಮಾನವನ್ನು ಕೈಗೊಂಡಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಸಿಸಿಐನ ಆಫರ್ ತಳ್ಳಿ ಹಾಕಿದ ವಿರಾಟ್ ಕೊಹ್ಲಿ

ಬಿಸಿಸಿಐನ ಆಫರ್ ತಳ್ಳಿ ಹಾಕಿದ ವಿರಾಟ್ ಕೊಹ್ಲಿ

ಇನ್ನೂ ಮುಂದುವರಿದು ಮಾತನಾಡಿರುವ ಆ ಬಿಸಿಸಿಐನ ಅಧಿಕಾರಿ ಕೊಹ್ಲಿ ಬಿಸಿಸಿಐ ಕಡೆಯಿಂದ ಬಂದಿದ್ದ ಬೀಳ್ಕೊಡುಗೆ ಪಂದ್ಯದ ಪ್ರಸ್ತಾಪವನ್ನು ತಳ್ಳಿಹಾಕಿದರು ಎಂದಿದ್ದಾರೆ. ಈಗಾಗಲೇ 99 ಟೆಸ್ಟ್ ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿಗೆ ನೂರನೇ ಪಂದ್ಯದಲ್ಲಿ ಬೀಳ್ಕೊಡುಗೆ ಗೌರವ ನೀಡಲಿದ್ದೇವೆ ಎಂದು ಬಿಸಿಸಿಐ ಪ್ರಸ್ತಾಪವನ್ನು ಕೊಹ್ಲಿಗೆ ತಿಳಿಸಿದಾಗ, ವಿರಾಟ್ ಕೊಹ್ಲಿ ಬೇಡ ಎಂದು ಬೀಳ್ಕೊಡುಗೆ ಪಂದ್ಯದ ಆಯೋಜನೆಗೆ ತಡೆ ಒಡ್ಡಿದರು ಎಂದು ತಿಳಿಸಿದ್ದಾರೆ.

ವಿರಾಟ್ ಕೊಹ್ಲಿ ಟೆಸ್ಟ್ ಅಂಕಿ ಅಂಶ

ವಿರಾಟ್ ಕೊಹ್ಲಿ ಟೆಸ್ಟ್ ಅಂಕಿ ಅಂಶ

ಇತ್ತೀಚೆಗಷ್ಟೇ ಮುಕ್ತಾಯವಾದ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯವರೆಗೆ ವಿರಾಟ್ ಕೊಹ್ಲಿ ಒಟ್ಟು 99 ಟೆಸ್ಟ್ ಪಂದ್ಯಗಳನ್ನಾಡಿದ್ದು, 7962 ಟೆಸ್ಟ್ ರನ್ ಕಲೆಹಾಕಿದ್ದಾರೆ. ಟೆಸ್ಟ್ ಕ್ರಿಕೆಟ್‍ನಲ್ಲಿ 254 ವಿರಾಟ್ ಕೊಹ್ಲಿ ಗಳಿಸಿರುವ ಗರಿಷ್ಠ ರನ್ ಆಗಿದೆ. ಹಾಗೂ ವಿರಾಟ್ ಕೊಹ್ಲಿ 27 ಟೆಸ್ಟ್ ಶತಕ ಮತ್ತು 28 ಟೆಸ್ಟ್ ಅರ್ಧಶತಕಗಳನ್ನು ಬಾರಿಸಿದ್ದಾರೆ.

For Quick Alerts
ALLOW NOTIFICATIONS
For Daily Alerts
Story first published: Monday, January 17, 2022, 14:53 [IST]
Other articles published on Jan 17, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X