Virat Kohli message: ಕೋವಿಡ್ 19 ನಿಯಮಗಳನ್ನು ಪಾಲಿಸುವಂತೆ ಮನವಿ ಮಾಡಿದ ವಿರಾಟ್ ಕೊಹ್ಲಿ

ದೇಶಾದ್ಯಂತ ಕೋರೋನಾ ವೈರಸ್‌ನ ಎರಡನೇ ಅಲೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಆರ್‌ಸಿಬಿ ನಾಯಕ ವಿರಾಟ್ ಕೊಹ್ಲಿ ವಿಡೊಯೋ ಸಂದೇಶವನ್ನು ನೀಡಿದ್ದಾರೆ. ನಾಗರೀಕರು ಕೊರೊನಾ ವೈರಸ್ ನಿಯಂತ್ರಣಕ್ಕೆ ಸರ್ಕಾರ ಕೈಗೊಂಡ ನಿಯಮಗಳನ್ನು ಪಾಲಿಸುವ ಮೂಲಕ ಈ ಸಾಂಕ್ರಾಮಿಕ ರೋಗದ ತಡೆಗೆ ಕೈಜೋಡಿಸಬೇಕು ಎಂದಿದ್ದಾರೆ.
ಈ ವಿಡಿಯೋವನ್ನು ಡೆಲ್ಲಿ ಪೊಲೀಸರು ತಮ್ಮ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸಾಮಾಜಿಕ ಅಂತರವನ್ನು ಪಾಲಿಸಿ, ಮಾಸ್‌ಕ್ ಧರಿಸಿ ಹಾಗೂ ಯಾವಾಗಲೂ ಕೈಗಳನ್ನು ಶುಚಿಯಾಗಿಟ್ಟುಕೊಳ್ಳಿ ಎಂದು ವಿರಾಟ್ ಕೊಹ್ಲಿ ಈ ವಿಡಿಯೋದಲ್ಲಿ ಮನವಿಯನ್ನು ಮಾಡಿದ್ದಾರೆ.
"ನಿಮಗೆ ತಿಳಿದಿರುವಂತೆ ಕೊರೊನಾ ವೈರಸ್ ಪ್ರಕರಣಗಳು ದೇಶದಲ್ಲಿ ಹೆಚ್ಚಾಗಿದೆ. ಹೀಗಾಗಿ ಅಗತ್ಯ ವಸ್ತುಗಳಿಗಾಗಿ, ಅಗತ್ಯ ಕರ್ತವ್ಯಗಳಿಗೆ ತೆರಳುವುದಾದರೆ ಮಾಸ್ಕ್ ಧರಿಸಿಕೊಳ್ಳಿ. ಸಮಾಜಿಕ ಅಂತರವನ್ನು ಪಾಲಿಸಿ ಹಾಗೂ ನಿಮ್ಮ ಕೈಗಳನ್ನು ಸ್ಯಾನಿಟೈಸ್ ಮಾಡಿಕೊಳ್ಳುತ್ತಿರಿ. ಈ ಮುನ್ನಚ್ಚರಿಕಾ ಕ್ರಮಗಳು ಸಾಕಷ್ಟು ಅಗತ್ಯವಾಗಿದೆ. ಎರಡನೇ ಅಲೆಯನ್ನು ನಾವು ಸದೃಢವಾಗಿ ಎದುರಿಸಬೇಕಾದರೆ ಪೊಲೀಸರು ಹಾಗೂ ಸರ್ಕಾರಕ್ಕೆ ಸಾಥ್ ನೀಡಬೇಕಿದೆ. ನೀವು ಸುರಕ್ಷಿತವಾಗಿದ್ದರೆ ದೇಶ ಸುರಕ್ಷಿತವಾಗಿರುತ್ತದೆ" ಎಂದು ಕೊಹ್ಲಿ ವಿಡಿಯೋದಲ್ಲಿ ಮನವಿ ಮಾಡಿದ್ದಾರೆ.
ಕೊರೊನಾ ಅಲೆ ದೇಶದ ರಾಜಧಾನಿ ದೆಹಲಿಯಲ್ಲಿ ಸಾಕಷ್ಟು ಪ್ರಮಾಣದಲ್ಲಿ ಏರಿಕೆಯಾಗಿತ್ತಿದ್ದು ಅಲ್ಲಿನ ಸರ್ಕಾರ ಆರು ದಿನಗಳ ಸಂಪೂರ್ಣ ಲಾಕ್‌ಡೌನ್ ಘೋಷಿಸಿದೆ.
ಸದ್ಯ ವಿರಾಟ್ ಕೊಹ್ಲಿ ಐಪಿಎಲ್‌ನಲ್ಲಿ ಭಾಗಿಯಾಗಿದ್ದು ಆರ್‌ಸಿಬಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿದ್ದಾರೆ. ಆರ್‌ಸಿಬಿ ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ಆಡಿದ ಮೊದಲ ಮೂರು ಪಂದ್ಯಗಳಲ್ಲಿ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications