
ಮಗುವಿನ ಫೋಟೋ ತೆಗೆಯದಂತೆ ವಿರುಷ್ಕಾ ದಂಪತಿ ಮನವಿ
ಈ ಹಿಂದೆ ಅನುಷ್ಕಾ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಸಾಮಾಜಿಕ ಮಾಧ್ಯಮದಲ್ಲಿ ವಿಶೇಷ ಮನವಿ ಮಾಡಿಕೊಂಡಿದ್ದರು. ನಮ್ಮ ಮಗುವಿನ ಖಾಸಗಿತನ ರಕ್ಷಿಸಬೇಕಿದೆ, ಅದಕ್ಕಾಗಿ ನಿಮ್ಮ ಸಹಕಾರ ಬೇಕು, ಮಗುವಿನ ಫೋಟೋ ತೆಗೆಯಬೇಡಿ, ಸೂಕ್ತ ಸಂದರ್ಭದಲ್ಲಿ ನಾವೇ ಅದನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತೇವೆ ಎಂದು ವಿರುಷ್ಕಾ ದಂಪತಿ ಕೇಳಿಕೊಂಡಿದ್ದರು.

ಏಕದಿನ ಕ್ರಿಕೆಟ್ ನಾಯಕತ್ವ ಕಳೆದುಕೊಂಡಿರುವ ವಿರಾಟ್ ಕೊಹ್ಲಿ
ಈಗಾಗಲೇ ಟಿ20 ನಾಯಕತ್ವದಿಂದ ಕೆಳಗಿಳಿದಿದ್ದ ವಿರಾಟ್ ಕೊಹ್ಲಿ ಇತ್ತೀಚೆಗಷ್ಟೇ ಏಕದಿನ ಫಾರ್ಮೆಟ್‌ನಲ್ಲೂ ನಾಯಕತ್ವ ಕಳೆದುಕೊಂಡಿದ್ದಾರೆ. ವಿರಾಟ್ ಕೊಹ್ಲಿ ಸ್ಥಾನದಲ್ಲಿ , ಐಪಿಎಲ್‌ನ ಚಾಂಪಿಯನ್ ಕ್ಯಾಪ್ಟನ್ ರೋಹಿತ್ ಶರ್ಮಾರನ್ನು ನೇಮಿಸಿರುವುದಾಗಿ ಬಿಸಿಸಿಐ, ಭಾರತೀಯ ಟೆಸ್ಟ್ ತಂಡವನ್ನ ಪ್ರಕಟಿಸುವ ಜೊತೆಗೆ ನಾಯಕತ್ವ ಬದಲಾವಣೆಯನ್ನು ತಿಳಿಸಿತು.
ಸೆಂಚುರಿಯನ್‌ನಲ್ಲಿ ಬಾಕ್ಸಿಂಗ್ ಡೇ ಎನ್‌ಕೌಂಟರ್‌ನಿಂದ ಪ್ರಾರಂಭವಾಗುವ ಮೂರು ಟೆಸ್ಟ್‌ಗಳಿಗೆ 18 ಸದಸ್ಯರ ತಂಡವನ್ನು ಬಿಸಿಸಿಐ ಇತ್ತೀಚೆಗೆ ಘೋಷಿಸಿತ್ತು. ಈ ಮೊದಲು ಸರಣಿಯ ಮೊದಲ ಎರಡು ಟೆಸ್ಟ್‌ಗಳನ್ನು ಜೋಹಾನ್ಸ್‌ಬರ್ಗ್ ಮತ್ತು ಪ್ರಿಟೋರಿಯಾದಲ್ಲಿ ನಿಗದಿಪಡಿಸಲಾಗಿತ್ತು. ಆದ್ರೆ ಈ ವೆನ್ಯೂಗಳನ್ನ ಮತ್ತೆ ಪರಿಷ್ಕರಿಸಿದ್ದು, ಸೆಂಚುರಿಯನ್ ಮೈದಾನದಲ್ಲಿ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 26ರಂದು ನಡೆಯಲಿದೆ. ಇನ್ನು ಎರಡನೇ ಪಂದ್ಯವು ಹೊಸ ವರ್ಷದಲ್ಲಿ, ಅಂದರೆ 2022 ರಿಂದ ಆರಂಭವಾಗಲಿದೆ.
#NationStandsWithDada: ಸೌರವ್ ಗಂಗೂಲಿಗೆ ಸಾಮಾಜಿಕ ಜಾಲತಾಣಗಳಲ್ಲಿ ಬೆಂಬಲ ಸೂಚಿಸಿದ ಅಭಿಮಾನಿಗಳು

ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ ವೇಳಾಪಟ್ಟಿ ಹೀಗಿದೆ
ಮೊದಲ ಟೆಸ್ಟ್: ಡಿಸೆಂಬರ್ 26-30, ಸೂಪರ್‌ಸ್ಪೋರ್ಟ್ಸ್ ಪಾರ್ಕ್, ಸೆಂಚುರಿಯನ್
ಎರಡನೇ ಟೆಸ್ಟ್: ಜನವರಿ 3-7, ವಾಂಡರರ್ಸ್ ಕ್ರೀಡಾಂಗಣ, ಜೋಹಾನ್ಸ್‌ಬರ್ಗ್
ಮೂರನೇ ಟೆಸ್ಟ್: ಜನವರಿ 11-15, ನ್ಯೂಲ್ಯಾಂಡ್ಸ್, ಕೇಪ್ ಟೌನ್
Flashback 2021: ಈ ವರ್ಷ ದಾಂಪತ್ಯ ಜೀವನಕ್ಕೆ ಕಾಲಿಟ್ಟ 7 ಭಾರತದ ಕ್ರಿಕೆಟಿಗರು

ಏಕದಿನ ಸರಣಿ ವೇಳಾಪಟ್ಟಿ
ಭಾರತವು ಮೂರು ಏಕದಿನ ಪಂದ್ಯಗಳನ್ನು ಸಹ ಆಡುತ್ತದೆ. ಆದರೆ ಬಿಸಿಸಿಐ ಮೊದಲೇ ಘೋಷಿಸಿದಂತೆ ನಾಲ್ಕು ಪಂದ್ಯಗಳ ಟಿ20 ಸರಣಿಯನ್ನು ಮತ್ತೆ ನಿಗದಿಪಡಿಸಲಾಗುತ್ತದೆ.
ಮೊದಲ ಏಕದಿನ: ಜನವರಿ 19 , ಬೆಟ್ವೇ, ಸಮಯ - 2.00 PM
ಎರಡನೇ ಏಕದಿನ: ಜನವರಿ 21, ಪಾರ್ಕ್, ಪಾರ್ಲ್, ಸಮಯ - 2.00 PM
ಮೂರನೇ ಏಕದಿನ: ಜನವರಿ 23, ನ್ಯೂಲ್ಯಾಂಡ್ಸ್, ಕೇಪ್ ಟೌನ್, ಸಮಯ - 2.00 PM

ಟೀಂ ಇಂಡಿಯಾ ಟೆಸ್ಟ್ ಸ್ಕ್ವಾಡ್
ವಿರಾಟ್ ಕೊಹ್ಲಿ (ನಾಯಕ), ಕೆಎಲ್ ರಾಹುಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಶ್ರೇಯಸ್ ಅಯ್ಯರ್, ಹನುಮ ವಿಹಾರಿ, ಪ್ರಿಯಾಂಕ್ ಪಾಂಚಾಲ್, ರಿಷಬ್ ಪಂತ್ (ವಿಕೆಟ್ ಕೀಪರ್), ವೃದ್ಧಿಮಾನ್ ಸಹಾ (ವಿಕೆಟ್ ಕೀಪರ್), ಆರ್ ಅಶ್ವಿನ್, ಜಯಂತ್ ಯಾದವ್, ಇಶಾಂತ್ ಶರ್ಮಾ, ಮೊ. ಶಮಿ, ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಸಿರಾಜ್.
ಸ್ಟ್ಯಾಂಡ್ ಬೈ ಆಟಗಾರರು: ನವದೀಪ್ ಸೈನಿ, ಸೌರಭ್ ಕುಮಾರ್, ದೀಪಕ್ ಚಾಹರ್, ಅರ್ಜಾನ್ ನಾಗ್ವಾಸ್ವಾಲ್ಲಾ


Click it and Unblock the Notifications
