ದಕ್ಷಿಣ ಆಫ್ರಿಕಾ ಸರಣಿ ಸೋಲಿನ ಬೆನ್ನಲ್ಲೇ 3ನೇ ಪಂದ್ಯದ ಆ ಘಟನೆ ಕುರಿತು ಬೇಸರಗೊಂಡ ಕೊಹ್ಲಿ

ವೈರಲ್ ಆಯ್ತು ವಾಮಿಕ ವಿರಾಟ್ ಫೋಟೋ | Oneindia Kannada

ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವಿನ ಏಕದಿನ ಸರಣಿ ಜನವರಿ 23ರಂದು ನಡೆದ ತೃತೀಯ ಏಕದಿನ ಪಂದ್ಯದ ಮೂಲಕ ಮುಕ್ತಾಯಗೊಂಡಿತು. ಕಳೆದ ಡಿಸೆಂಬರ್ ತಿಂಗಳಿನಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡಿದ್ದ ಟೀಮ್ ಇಂಡಿಯಾ ಹರಿಣಗಳ ವಿರುದ್ಧ ಮೊದಲಿಗೆ 3 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಭಾಗವಹಿಸಿತ್ತು.

ದ್ರಾವಿಡ್ ಕೇವಲ ಬಿಲ್ಡಪ್ ಕೋಚ್ ಎನಿಸಿಕೊಳ್ಳಬಾರದೆಂದರೆ ಈ ಕೆಲಸ ಮಾಡಲಿ ಎಂದು ಎಚ್ಚರಿಸಿದ ಮಾಜಿ ಕ್ರಿಕೆಟಿಗ!ದ್ರಾವಿಡ್ ಕೇವಲ ಬಿಲ್ಡಪ್ ಕೋಚ್ ಎನಿಸಿಕೊಳ್ಳಬಾರದೆಂದರೆ ಈ ಕೆಲಸ ಮಾಡಲಿ ಎಂದು ಎಚ್ಚರಿಸಿದ ಮಾಜಿ ಕ್ರಿಕೆಟಿಗ!

ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲಿಗೆ ನಡೆದ ಟೆಸ್ಟ್ ಸರಣಿಯ ಪ್ರಥಮ ಪಂದ್ಯದಲ್ಲಿ ನಾಯಕತ್ವವನ್ನು ನಿರ್ವಹಿಸಿದ್ದರು ಹಾಗೂ ಆ ಪಂದ್ಯದಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿತ್ತು. ಆದರೆ ದ್ವಿತೀಯ ಟೆಸ್ಟ್ ಪಂದ್ಯದ ವೇಳೆ ಗಾಯದ ಸಮಸ್ಯೆಯಿಂದಾಗಿ ವಿರಾಟ್ ಕೊಹ್ಲಿ ತಂಡದಿಂದ ಹೊರಗುಳಿದರು. ಹೀಗಾಗಿ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್ ಕೊಹ್ಲಿ ಅನುಪಸ್ಥಿತಿಯಲ್ಲಿ ನಾಯಕನಾಗಿ ತಂಡವನ್ನು ಮುನ್ನಡೆಸಿದರು ಹಾಗೂ ಈ ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯ ಸೋಲನ್ನು ಕಂಡಿತು. ಹೀಗೆ ಕೆಎಲ್ ರಾಹುಲ್ ತಾವು ನಾಯಕನಾಗಿ ಮುನ್ನಡೆಸಿದ ಮೊದಲ ಅಂತರರಾಷ್ಟ್ರೀಯ ಟೆಸ್ಟ್ ಪಂದ್ಯದಲ್ಲಿ ಕೆಟ್ಟ ಆರಂಭವನ್ನು ಪಡೆದುಕೊಂಡರು. ನಂತರ ನಡೆದ ತೃತೀಯ ಟೆಸ್ಟ್ ಪಂದ್ಯಕ್ಕೆ ವಿರಾಟ್ ಕೊಹ್ಲಿ ಮರಳಿ ತಂಡ ಸೇರಿದರು ಆದರೆ, ಈ ಪಂದ್ಯದಲ್ಲಿಯೂ ಕೂಡಾ ಟೀಮ್ ಇಂಡಿಯಾ ಸೋಲನ್ನು ಅನುಭವಿಸಿತು. ಹೀಗೆ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ 1-2 ಪಂದ್ಯಗಳ ಅಂತರದಲ್ಲಿ ಟೀಮ್ ಇಂಡಿಯಾ ಸೋತಿತು.

ಭಾರತ ಟೆಸ್ಟ್ ತಂಡದ ನೂತನ ನಾಯಕ ಇವರೇ; ಘೋಷಣೆ ಯಾವಾಗ ಎಂಬುದೂ ಕೂಡ ಫಿಕ್ಸ್: ಬಿಸಿಸಿಐಭಾರತ ಟೆಸ್ಟ್ ತಂಡದ ನೂತನ ನಾಯಕ ಇವರೇ; ಘೋಷಣೆ ಯಾವಾಗ ಎಂಬುದೂ ಕೂಡ ಫಿಕ್ಸ್: ಬಿಸಿಸಿಐ

ಹೀಗೆ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾ ಹೀನಾಯವಾಗಿ ಸೋತ ಬೆನ್ನಲ್ಲೇ ವಿರಾಟ್ ಕೊಹ್ಲಿ ಭಾರತ ಟೆಸ್ಟ್ ತಂಡದ ನಾಯಕತ್ವಕ್ಕೆ ರಾಜೀನಾಮೆಯನ್ನು ಘೋಷಿಸಿದರು. ಹೀಗೆ ರಾಜಿನಾಮೆ ಸಲ್ಲಿಸುವುದರ ಮೂಲಕ ಭಾರೀ ಚರ್ಚೆಗೀಡಾಗಿದ್ದ ವಿರಾಟ್ ಕೊಹ್ಲಿ ತುಂಬಾ ವರ್ಷಗಳ ನಂತರ ಓರ್ವ ಆಟಗಾರನಾಗಿ ಮಾತ್ರ ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಏಕದಿನ ಸರಣಿಯಲ್ಲಿ ಭಾಗವಹಿಸಿದರು.

ಕ್ಯಾಮೆರಾ ಕಣ್ಣಿಗೆ ಬಿದ್ದ ವಮಿಕಾ, ಕೊಹ್ಲಿ ಬೇಸರ

ಕ್ಯಾಮೆರಾ ಕಣ್ಣಿಗೆ ಬಿದ್ದ ವಮಿಕಾ, ಕೊಹ್ಲಿ ಬೇಸರ

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಅರ್ಧಶತಕ ಬಾರಿಸಿ ಮಿಂಚಿದ್ದ ವಿರಾಟ್ ಕೊಹ್ಲಿ ದ್ವಿತೀಯ ಏಕದಿನ ಪಂದ್ಯದಲ್ಲಿ ಶೂನ್ಯಕ್ಕೆ ಔಟ್ ಆದರು ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಕೂಡ ಅರ್ಧಶತಕ ಬಾರಿಸಿ ಮಿಂಚಿದರು. ಇನ್ನು ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ಅಂತಿಮ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅರ್ಧ ಶತಕ ಬಾರಿಸಿದಾಗ ಪೆವಿಲಿಯನ್ ಒಳಗಿದ್ದ ಮಗಳಾದ ವಮಿಕಾಳನ್ನು ನೋಡಿ ವಿರಾಟ್ ಕೊಹ್ಲಿ ಮೈದಾನದಲ್ಲಿಯೇ ಬ್ಯಾಟ್ ಉಪಯೋಗಿಸಿ ತೊಟ್ಟಿಲು ಸಂಭ್ರಮಾಚರಣೆಯನ್ನು ಮಾಡಿದ್ದರು. ಈ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಮತ್ತು ಮಗಳು ವಮಿಕಾ ಪಂದ್ಯ ಪ್ರಸಾರ ಮಾಡುತ್ತಿದ್ದ ಕ್ಯಾಮೆರಾ ಕಣ್ಣಿಗೆ ಸೆರೆ ಸಿಕ್ಕಿದ್ದರು. ಇದೇ ಮೊದಲ ಬಾರಿಗೆ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದ ವಮಿಕಾಳ ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಕೆಲವೇ ನಿಮಿಷಗಳಲ್ಲಿ ವೈರಲ್ ಆಗಿಬಿಟ್ಟವು. ಈ ಕುರಿತಾಗಿಯೇ ಇದೀಗ ವಿರಾಟ್ ಕೊಹ್ಲಿ ಅಸಮಾಧಾನವನ್ನು ಹೊರಹಾಕಿದ್ದಾರೆ.

ಅನುಷ್ಕಾ ವಿರುದ್ಧ ಅಸಮಾಧಾನ

ಅನುಷ್ಕಾ ವಿರುದ್ಧ ಅಸಮಾಧಾನ

ಇದೇ ಮೊದಲ ಬಾರಿಗೆ ಕೊಹ್ಲಿ ಮಗಳ ಮುಖ ದರ್ಶನ ಪಡೆದ ವಿರಾಟ್ ಕೊಹ್ಲಿ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂತಸವನ್ನು ವ್ಯಕ್ತಪಡಿಸಿದರು. ಹಾಗೂ ಇದೇ ಸಂದರ್ಭದಲ್ಲಿ ಕೆಲವರು ಅನುಷ್ಕಾ ಶರ್ಮಾ ಕುರಿತಾಗಿ ಅಸಮಾಧಾನವನ್ನು ಹೊರಹಾಕಿದರು. ಏಕೆಂದರೆ ಈ ಹಿಂದೆ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ ದಂಪತಿ ತಮ್ಮ ಮಗಳ ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವುದಿಲ್ಲ ಹಾಗೂ ಯಾರೂ ಕೂಡ ಆಕೆಯ ಫೋಟೋಗಳನ್ನು ತೆಗೆದು ಹರಿ ಬಿಡಬೇಡಿ ಎಂದು ಮನವಿಯನ್ನೂ ಮಾಡಿಕೊಂಡಿದ್ದರು.

ಮಗಳ ಫೋಟೋ ಹರಡಬೇಡಿ ಎಂದ ಕೊಹ್ಲಿ

ಮಗಳ ಫೋಟೋ ಹರಡಬೇಡಿ ಎಂದ ಕೊಹ್ಲಿ

ಅಷ್ಟೇ ಅಲ್ಲದೇ ತಮ್ಮ ಮಗಳನ್ನು ಹೊರಗೆ ಕರೆತಂದಾಗ ಮುಖವನ್ನು ಯಾವಾಗಲೂ ಮುಚ್ಚಿಕೊಳ್ಳುತ್ತಿದ್ದ ಕೊಹ್ಲಿ ದಂಪತಿ ಮಗಳ ಫೋಟೋ ಇತರರಿಗೆ ಸಿಗದ ಹಾಗೆ ತಡೆಯುತ್ತಿದ್ದರು. ಆದರೆ ಈ ಪಂದ್ಯದ ವೇಳೆ ಕೊಹ್ಲಿಯ ಬ್ಯಾಟಿಂಗ್ ತೋರಿಸಲು ಮಗಳನ್ನು ಕರೆತಂದ ಅನುಷ್ಕಾ ಶರ್ಮಾ ಮಗಳ ಸಮೇತ ಕ್ಯಾಮೆರಾ ಕಣ್ಣಿಗೆ ಸಿಕ್ಕಿಬಿದ್ದಿದ್ದಾರೆ. ಹೀಗೆ ಕೊಹ್ಲಿ ಮಗಳ ಮುಖ ವೈರಲ್ ಆಗುತ್ತಿದ್ದಂತೆ ಈ ಕುರಿತಾಗಿ ಪ್ರತಿಕ್ರಿಯಿಸಿರುವ ವಿರಾಟ್ ಕೊಹ್ಲಿ ಹಾಗೂ ಅನುಷ್ಕಾ ಶರ್ಮಾ ತಮ್ಮ ಇನ್ಸ್ಟಾಗ್ರಾಂ ಖಾತೆಗಳ ಸ್ಟೋರಿಗಳಲ್ಲಿ ಮಗಳ ಫೋಟೋಗಳನ್ನು ಶೇರ್ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಕ್ಯಾಮೆರಾ ತಮ್ಮನ್ನು ಸೆರೆ ಹಿಡಿಯುತ್ತಿದೆ ಎಂಬ ವಿಷಯ ತಿಳಿಯದೇ ಈ ಘಟನೆ ನಡೆದು ಹೋಗಿದೆ ಯಾರೂ ಕೂಡ ಚಿತ್ರಗಳನ್ನು ಹಂಚಿಕೊಳ್ಳಬೇಡಿ ಎಂದು ಮನವಿ ಮಾಡಿದ್ದಾರೆ.

For Quick Alerts
Subscribe Now
For Quick Alerts
ALLOW NOTIFICATIONS
For Daily Alerts
Story first published: Monday, January 24, 2022, 13:43 [IST]
Other articles published on Jan 24, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X