Virat Kohli Practice: ಲಂಡನ್‌ನಲ್ಲಿ ಅಭ್ಯಾಸ ಆರಂಭಿಸಿ ವಿರಾಟ್ ಕೊಹ್ಲಿ
ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಮತ್ತೆ ಅಭ್ಯಾಸ ಆರಂಭಿಸಿದ್ದಾರೆ. ಏಕದಿನ ಸರಣಿಯನ್ನು ಗಮನದಲ್ಲಿಟ್ಟುಕೊಂಡು ವಿರಾಟ್ ಲಂಡನ್‌ನಲ್ಲಿ ತಮ್ಮ ಅಭ್ಯಾಸವನ್ನು ಪ್ರಾರಂಭಿಸಿದ್ದಾರೆ. ಈ ಫೋಟೋಗಳು ಸಾಮಾಜಿಕ ತಾಣದಲ್ಲಿ ಸಖತ್ ವೈರಲ್ ಆಗುತ್ತಿವೆ. ಕೊಹ್ಲಿ ಅವರೊಂದಿಗೆ ಫೋಟೋದಲ್ಲಿ ಗುಜರಾತ್ ಟೈಟನ್ಸ್ ಸಹಾಯಕ ಕೋಚ್ ನಯೀಮ್ ಅಮಿನ್ ಅವರನ್ನು ಸಹ ಕಾಣಬಹುದಾಗಿದೆ.
ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಟೆಸ್ಟ್ ಹಾಗೂ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ ವಿದಾಯ ಹೇಳಿದ್ದಾರೆ. ಹೀಗಾಗಿ ಇವರು ಭಾರತದ ಪರ ಕೇವಲ ಏಕದಿನ ಸರಣಿಗಳಲ್ಲಿ ಮಾತ್ರ ಬ್ಯಾಟ್ ಮಾಡುವುದನ್ನು ನೋಡಬಹುದಾಗಿದೆ. ಅಕ್ಟೋಬರ್‌ನಲ್ಲಿ ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ವೇಳೆ ವಿರಾಟ್ ಕೊಹ್ಲಿ ಕಣಕ್ಕೆ ಇಳಿಯಬಹುದು ಎಂದು ಅಂದಾಜಿಸಲಾಗಿದೆ. ಹೀಗಾಗಿ ವಿರಾಟ್ ಲಂಡನ್‌ನಲ್ಲಿ ಅಭ್ಯಾಸವನ್ನು ಆರಂಭಿಸಿದ್ದಾರೆ.

ಈ ಬಗ್ಗೆ ವಿರಾಟ್ ಕೊಹ್ಲಿ ಫೋಟೋ ಒಂದನ್ನು ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಹಾಕಿಕೊಂಡಿದ್ದಾರೆ. ಅಲ್ಲದೆ ಅಭ್ಯಾಸಕ್ಕೆ ಸಹಾಯ ಮಾಡಿದಕ್ಕೆ ಧನ್ಯವಾದಗಳು ಸಹೋದರ. ನಿಮ್ಮನ್ನು ನೋಡಲು ಖುಷಿ ಆಗುತ್ತದೆ ಎಂದು ವಿರಾಟ್ ಬರೆದುಕೊಂಡಿದ್ದಾರೆ. ವಿರಾಟ್ ಕೊಹ್ಲಿ ಅಭ್ಯಾಸದ ವೇಳೆ ಬೂದಿ ಬಣ್ಣದ ಟಿಶರ್ಟ್ ಹಾಕಿಕೊಂಡಿದ್ದನ್ನು ಕಾಣಬಹುದಾಗಿದೆ. ಇದೇ ಮೊದಲ ಬಾರಿಗೆ ವಿರಾಟ್ ತಮ್ಮ ನಿವೃತ್ತಿಯ ಬಳಿಕ ಒಳಾಂಗಣ ಕ್ರೀಡಾಂಗಣದಲ್ಲಿ ಅಭ್ಯಾಸ ಮಾಡುವುದಿರು.
ವಿರಾಟ್ ಯಾವಾಗ ಅಂಗಳಕ್ಕೆ ಇಳಯಲಿದ್ದಾರೆ?
ಈ ಫಟೋ ಸಾಮಾಜಿಕ ತಾಣದಲ್ಲಿ ಹಾಕುತ್ತಿದ್ದಂತೆ ಭಾರೀ ಸದ್ದು ಮಾಡಿದೆ. ಅಭಿಮಾನಿಗಳು ಈ ಫೊಟೋಗೆ ತರಹೆವಾರಿ ಕಮೆಂಟ್ ಮಾಡಿದದಾರೆ. ಕೊಹ್ಲಿ ಅಕ್ಟೋಬರ್ 19ರಿಂದ 25ರ ವರೆಗೆ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಏಕದಿನ ಸರಣಿಯಲ್ಲಿ ತಂಡದ ಭಾಗವಾಗಲಿದ್ದಾರೆ. ಈ ಸರಣಿ ಮೊದಲು ಅಗಸ್ಟ್‌ನಲ್ಲಿ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಬಳಿಕ ಇದನ್ನು ಮುಂದೂಡಲಾಗಿದೆ. ವಿರಾಟ್ ಕೊಹ್ಲಿ ಅವರು ಜೂನ 3ರಂದು ಆರ್‌ಸಿಬಿ ಐಪಿಎಲ್ ಫೈನಲ್ ಪಂದ್ಯವನ್ನು ಆಡಿದ್ದಾಗ ಮೈದಾನದಲ್ಲಿ ಕಾಣಿಸಿಕೊಂಡಿದ್ದರು. ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ವಿರಾಟ್ ಕೊಹ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 43 ರನ್‌ಗಳ ಅಮೋಘ ಇನಿಂಗ್ಸ್ ಕಟ್ಟಿ ತಂಡಕ್ಕೆ ಆಧಾರವಾಗಿದ್ದರು.

ಬಾರ್ಡರ್ ಗವಾಸ್ಕರ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದರಿಂದ ಟೀಕೆಗಳಿಗೆ ಗುರಿಯಾಗಿದ್ದರು. ಹೀಗಾಗಿ ತಮ್ಮ ಫಾರ್ಮ್ ಮತ್ತೆ ಪಡೆಯಲು ವಿರಾಟ್ ದೆಹಲಿ ತಂಡದೊಂದಿಗೆ ರಣಜಿ ಟೂರ್ನಿಯ ಪಂದ್ಯವನ್ನು ಆಡಿದ್ದರು. ಈ ಮೂಲಕ ಇವರು ಇಂಗ್ಲೆಂಡ್ ಪ್ರವಾಸ ಬೆಳೆಸಲಿದ್ದಾರೆ ಎಂಬ ಮಾತುಗಳು ಸಹ ಕೇಳಿ ಬಂದಿದ್ದವು. ಆದರೆ ವಿರಾಟ್ ಕೊಹ್ಲಿ ಇಂಗ್ಲೆಂಡ್ ಪ್ರವಾಸಕ್ಕೆ ತಂಡವನ್ನು ಪ್ರಕಟಿಸುವ ಮುನ್ನವೇ ಟೆಸ್ಟ್ ಕ್ರಿಕೆಟ್‌ಗೂ ವಿದಾಯವನ್ನು ಹೇಳಿದರು. ಇನ್ನು ವೆಸ್ಟ್ ಇಂಡೀಸ್‌ನ ಬಾರ್ಬಡೋಸ್ ನಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತ ಪ್ರಶಸ್ತಿ ಗೆಲ್ಲುತ್ತಿದ್ದಂತೆ ವಿರಾಟ್ ಕೊಹ್ಲಿ, ರವೀಂದ್ರ ಜಡೇಜಾ, ರೋಹಿತ್ ಶರ್ಮಾ ಚುಟುಕು ಫಾರ್ಮೆಟ್‌ನಿಂದ ದೂರ ಸರೆದಿದ್ದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications