Virat Kohli: ವಿರಾಟ್ ಕೊಹ್ಲಿ ಬಾರಿಸಿದ ಸಿಕ್ಸರ್‌ಗೆ ಟೀಮ್ ಇಂಡಿಯಾ ಡ್ರೆಸ್ಸಿಂಗ್ ರೂಮ್ ಗೋಡೆ ಛಿದ್ರ!: ಇಲ್ಲಿದೆ ವಿಡಿಯೋ
ಸೆಪ್ಟೆಂಬರ್ 19 ರಿಂದ ಭಾರತ ಹಾಗೂ ಬಾಂಗ್ಲಾದೇಶಗಳ ನಡುವೆ ಟೆಸ್ಟ್ ಸರಣಿಯ ಮೊದಲ ಪಂದ್ಯ ನಡೆಯಲಿದೆ. ಈ ಪಂದ್ಯಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಈಗಾಗಲೇ ಅಭ್ಯಾಸ ಆರಂಭಿಸಿದ್ದಾರೆ. ಈ ಸರಣಿಯಲ್ಲಿ ಎಲ್ಲರ ಕಣ್ಣು ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಅವರ ಮೇಲೆ ನೆಟ್ಟಿದೆ. ಇವರು ಅಭ್ಯಾಸದ ವೇಳೆ ಅಬ್ಬರಿಸಿದ್ದು, ಬಾಂಗ್ಲಾ ಬೌಲರ್‌ಗಳಿಗೆ ಟೆನ್ಷನ್ ಆರಂಭವಾಗಿದೆ.
ಟೀಮ್ ಇಂಡಿಯಾದ ಚೇಸಿಂಗ್ ಸ್ಟಾರ್ ವಿರಾಟ್ ಕೊಹ್ಲಿ ಕೂಡ ಟೆಸ್ಟ್ ತಂಡಕ್ಕೆ ಮರಳಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಪಂದ್ಯಕ್ಕೆ ಸಜ್ಜಾಗಲು ಟೀಂ ಇಂಡಿಯಾದ ಎಲ್ಲಾ ಆಟಗಾರರು ಚೆನ್ನೈ ತಲುಪಿದ್ದು, ಅಭ್ಯಾಸ ಆರಂಭಿಸಿದ್ದಾರೆ. ಅಭ್ಯಾಸದ ವೇಳೆ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್, ಡ್ರೆಸ್ಸಿಂಗ್ ರೂಮಿನ ಗೋಡೆಯನ್ನು ಒಡೆದಿರುವ ವಿಡಿಯೋ ವೈರಲ್ ಆಗುತ್ತಿದೆ.

ಆಗಿದ್ದೇನು?
ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಚೆನ್ನೈನ ಎಂ.ಎ ಚಿದಂಬರಂ ಕ್ರೀಡಾಗಣದಲ್ಲಿ ಅಭ್ಯಾಸ ನಡೆಸಿದರು. ಈ ವೇಳೆ ಅವರು ಓಪನ್ ನೆಟ್ಸ್‌ನಲ್ಲಿ ಬ್ಯಾಟಿಂಗ್ ಮಾಡಿದರು. ಅಲ್ಲದೆ ಬಿಗ್ ಹಿಟ್‌ಗಳನ್ನು ಬಾರಿಸಿ ಗಮನ ಸೆಳೆದರು. ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನವೇ ವಿರಾಟ್ ಭರ್ಜರಿ ಲಯಕ್ಕೆ ಮರಳುವ ಸೂಚನೆ ನೀಡಿದ್ದಾರೆ. ಕೊಹ್ಲಿ ನೆಟ್ಸ್‌ನಲ್ಲೂ ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಭಾನುವಾರದಂದು, ವಿರಾಟ್ ಕೊಹ್ಲಿ ಅವರು ಸ್ಪಿನ್ ಬೌಲಿಂಗ್ ವಿರುದ್ಧ ಲಾಂಗ್ ಶಾಟ್‌ಗಳನ್ನು ಅಭ್ಯಾಸ ಮಾಡಿದರು. ಈ ವೇಳೆ ಅವರ ಒಂದು ಶಾಟ್ ಡ್ರೆಸ್ಸಿಂಗ್ ರೂಮಿನ ಗೋಡೆ ಒಡೆದಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
259 ದಿನಗಳ ಬಳಿಕ ಟೆಸ್ಟ್ ಆಡಲಿರುವ ವಿರಾಟ್
ವಿರಾಟ್ ಕೊಹ್ಲಿ ಜನೆವರಿ 4, 2024 ರಂದು ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ತಮ್ಮ ಕೊನೆಯ ಟೆಸ್ಟ್ ಪಂದ್ಯವನ್ನು ಆಡಿದ್ದರು. ಇದಾದ ಬಳಿಕ ಕೊಹ್ಲಿ ಟೆಸ್ಟ್ ಪಂದ್ಯವನ್ನು ಆಡಿರಲಿಲ್ಲ. ವೈಯಕ್ತಿಕ ಕಾರಣಗಳನ್ನು ನೀಡಿ ಇವರು ಇಂಗ್ಲೆಂಡ್ ವಿರುದ್ಧದ 5 ಟೆಸ್ಟ್ ಪಂದ್ಯಗಳ ಸರಣಿಯಿಂದ ಹೊರಗುಳಿದಿದ್ದರು. ಈಗ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ಭರ್ಜರಿ ಕಮ್ ಬ್ಯಾಕ್ ಮಾಡುವ ಸೂಚನೆ ನೀಡಿದ್ದಾರೆ.
27000 ರನ್ ಪೂರೈಸುವ ಅವಕಾಶ
ಟೀಮ್ ಇಂಡಿಯಾದ ಚೇಸಿಂಗ್ ಸ್ಟಾರ್ ವಿರಾಟ್ ಕೊಹ್ಲಿ ಬಾಂಗ್ಲಾ ವಿರುದ್ಧದ ಟೆಸ್ಟ್‌ನಲ್ಲಿ ಮತ್ತೊಂದು ಅಮೋಘ ಸಾಧನೆ ಮಾಡುವ ಹೊಸ್ತಿಲಿನಲ್ಲಿ ನಿಂತಿದ್ದಾರೆ. ಇವರು ಈ ಸರಣಿಯಲ್ಲಿ ತಮ್ಮ ಆರಾಧ್ಯ ದೈವ ಸಚಿನ್ ತೆಂಡೂಲ್ಕರ್ ಅವರ ದೊಡ್ಡ ದಾಖಲೆಯನ್ನು ಮುರಿಯುವ ಸನಿಹದಲ್ಲಿದ್ದಾರೆ. ಕೊಹ್ಲಿ ತಮ್ಮ ಅಂತಾರಾಷ್ಟ್ರೀಯ ವೃತ್ತಿಜೀವನದಲ್ಲಿ ಇದುವರೆಗೆ 591 ಇನ್ನಿಂಗ್ಸ್‌ಗಳಲ್ಲಿ 26942 ರನ್ ಗಳಿಸಿದ್ದಾರೆ. ಈ ಸರಣಿಯಲ್ಲಿ ಕೊಹ್ಲಿ 58 ರನ್ ಬಾರಿಸಿದ್ದೇ ಆದಲ್ಲಿ 27 ಸಾವಿರ ರನ್‌ಗಳ ಗಡಿ ಮುಟ್ಟುತ್ತಾರೆ. ಈ ಮೂಲಕ ಕಡಿಮೆ ಇನಿಂಗ್ಸ್‌ಗಳಲ್ಲಿ ಈ ದಾಖಲೆ ಮಾಡಿದ ಹಿರಿಮೆ ತಮ್ಮದಾಗಿಸಿಕೊಳ್ಳಲಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications