For Quick Alerts
ALLOW NOTIFICATIONS  
For Daily Alerts
 

Virat kohli: ಟಿ20 ಕ್ರಿಕೆಟ್‌ ನಿವೃತ್ತಿಯ ಹಿಂದಿನ ಅಸಲಿ ಕಾರಣ ತಿಳಿಸಿದ ವಿರಾಟ್ ಕೊಹ್ಲಿ

ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಐಪಿಎಲ್ 2025 ರಲ್ಲಿ ಅಬ್ಬರಿಸುತ್ತಿದ್ದಾರೆ. ಐಪಿಎಲ್ 2025 ರಲ್ಲಿ ಅತಿ ಹೆಚ್ಚು ರನ್ ಗಳಿಸಿದ ಬ್ಯಾಟರ್ಸ್ ಪೈಕಿ ಮೂರನೇ ಒಬ್ಬರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಅವರು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ ಮಾಡಿರುವ ಬಗ್ಗೆ ಮಾತನಾಡಿದ್ದಾರೆ. ಕಳೆದ ವರ್ಷ ಬಾರ್ಬಡೋಸ್‌ನಲ್ಲಿ ನಡೆದ 2024 ರ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಪ್ರಶಸ್ತಿ ಗೆಲುವಿನಲ್ಲಿ ವಿರಾಟ್ ಕೊಹ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಈ ಐತಿಹಾಸಿಕ ಗೆಲುವಿನ ಬಳಿಕ ಕೊಹ್ಲಿ ಟಿ20 ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಅವರೊಂದಿಗೆ ರೋಹಿತ್ ಶರ್ಮಾ ಮತ್ತು ರವೀಂದ್ರ ಜಡೇಜಾ ಕೂಡ ನಿವೃತ್ತಿ ಘೋಷಣೆ ಮಾಡಿದ್ದರು.

ಕಳೆದ ವರ್ಷ ಭಾರತ ಟಿ20 ವಿಶ್ವಕಪ್ ಗೆದ್ದ ನಂತರ ವಿರಾಟ್ ಕೊಹ್ಲಿ ಚುಟುಕು ಕ್ರಿಕೆಟ್ ತೊರೆಯಲು ಏಕೆ ನಿರ್ಧರಿಸಿದರು ಎಂಬುದನ್ನು ಈಗ ಬಹಿರಂಗಪಡಿಸಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಫೈನಲ್‌ನಲ್ಲಿ ಕೊಹ್ಲಿ ಹೀರೋ ಆಗಿದ್ದರು. ಅವರು 59 ಎಸೆತಗಳಲ್ಲಿ 76 ರನ್ ಗಳಿಸಿ ಮ್ಯಾಚ್ ವಿನ್ನಿಂಗ್ ಇನ್ನಿಂಗ್ಸ್ ಆಡಿದರು. ಇದರಿಂದಾಗಿ ಭಾರತ 7 ರನ್‌ಗಳಿಂದ ಗೆದ್ದಿತು. 2007 ರ ನಂತರ ಮೊದಲ ಬಾರಿಗೆ ಭಾರತ ಟಿ20 ವಿಶ್ವಕಪ್ ಗೆದ್ದಿತು.

Virat Kohli revealed the real reason behind T20 cricket retirement

ಕೊಹ್ಲಿ ಕೊಟ್ಟ ಕಾರಣ

ವಿರಾಟ್ ಕೊಹ್ಲಿ ಆರ್‌ಸಿಬಿ ಪಾಡ್‌ಕ್ಯಾಸ್ಟ್‌ನಲ್ಲಿ ಟಿ20 ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸುವ ನಿರ್ಧಾರದ ಬಗ್ಗೆ ಮಾತನಾಡಿದ್ದಾರೆ. "ನನಗೆ ಯಾವುದೇ ರೀತಿಯಲ್ಲಿ ವಿಷಯಗಳು ಬದಲಾಗಿಲ್ಲ ಅಂದುಕೊಂಡಿದ್ದೇನೆ. ಸಂಪೂರ್ಣವಾಗಿ ಸಿದ್ಧರಾಗಿರುವ ಹೊಸ ಆಟಗಾರರ ಗುಂಪು ಇದೆ. ಅವರಿಗೆ ಸಮಯ ಬೇಕು, ಅಭಿವೃದ್ಧಿ ಹೊಂದಲು, ಒತ್ತಡವನ್ನು ನಿಭಾಯಿಸಲು, ಪ್ರಪಂಚದ ವಿವಿಧ ಭಾಗಗಳಲ್ಲಿ ಆಡಲು ಮತ್ತು ವಿಶ್ವಕಪ್ ಬಂದಾಗ ಅವರು ಸಿದ್ಧರಿದ್ದಾರೆಂದು ಭಾವಿಸುವಷ್ಟು ಪಂದ್ಯಗಳನ್ನು ಆಡಲು ಅವರಿಗೆ 2 ವರ್ಷಗಳು ಬೇಕಾಗುತ್ತವೆ. ಇದಕ್ಕಾಗಿ ಸಂಪೂರ್ಣ ತಿಳುವಳಿಕೆಯೊಂದಿಗೆ ನಿವೃತ್ತಿಯ ನಿರ್ಧಾರವನ್ನು ತೆಗೆದುಕೊಳ್ಳಬೇಕಾಯಿತು ಎಂದು ವಿರಾಟ್ ಕೊಹ್ಲಿ ಹೇಳಿದ್ದಾರೆ.

ಟಿ20 ಅಂತರರಾಷ್ಟ್ರೀಯ ವೃತ್ತಿಜೀವನ

ವಿರಾಟ್ ಕೊಹ್ಲಿ ಭಾರತ ಪರ ಒಟ್ಟು 125 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಈ ಅವಧಿಯಲ್ಲಿ ಅವರು 48.69 ಸರಾಸರಿಯಲ್ಲಿ 4188 ರನ್ ಗಳಿಸಿದ್ದಾರೆ. ಅವರು ಟಿ20 ಶತಕವನ್ನೂ ಗಳಿಸಿದ್ದಾರೆ. ಇದರೊಂದಿಗೆ ಅವರು ವಿಶ್ವದ ಮೂರನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. ಈ ಪಟ್ಟಿಯಲ್ಲಿ ಭಾರತದ ನಾಯಕ ರೋಹಿತ್ ಶರ್ಮಾ 4231 ರನ್‌ಗಳೊಂದಿಗೆ ಅಗ್ರಸ್ಥಾನದಲ್ಲಿದ್ದರೆ, ಪಾಕಿಸ್ತಾನದ ಬಾಬರ್ ಅಜಮ್ 4223 ರನ್‌ಗಳೊಂದಿಗೆ ಎರಡನೇ ಸ್ಥಾನದಲ್ಲಿದ್ದಾರೆ.

ಐಪಿಎಲ್ ಗರಿಷ್ಠ ರನ್ ಸ್ಕೋರರ್

ವಿರಾಟ್ ಕೊಹ್ಲಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತರಾಗಿರಬಹುದು. ಆದರೆ ಅವರು ಐಪಿಎಲ್‌ನಲ್ಲಿ ಸಾಕಷ್ಟು ರನ್‌ಗಳನ್ನು ಗಳಿಸುತ್ತಿದ್ದಾರೆ. ಐಪಿಎಲ್ 2025 ರಲ್ಲಿ, ವಿರಾಟ್ ಕೊಹ್ಲಿ ಇದುವರೆಗೆ ಆಡಿದ 10 ಪಂದ್ಯಗಳಲ್ಲಿ 6 ಅರ್ಧಶತಕಗಳನ್ನು ಗಳಿಸಿದ್ದು, 443 ರನ್‌ಗಳೊಂದಿಗೆ ಅತಿ ಹೆಚ್ಚು ರನ್ ಗಳಿಸಿದ ಮೂರನೇ ಆಟಗಾರರಾಗಿದ್ದಾರೆ. ಅವರ ಪ್ರದರ್ಶನವು ಬೆಂಗಳೂರು ತಂಡವು 14 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿರಲು ನೆರವಾಗಿದೆ. ಮೊದಲ ಐಪಿಎಲ್ ಸೀಸನ್‌ನಿಂದ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭಾಗವಾಗಿದ್ದಾರೆ. ಆದರೆ, ಆರ್‌ಸಿಬಿ ತಂಡಕ್ಕೆ ಇನ್ನೂ ಐಪಿಎಲ್ ಪ್ರಶಸ್ತಿ ಗೆಲ್ಲಲು ಸಾಧ್ಯವಾಗಿಲ್ಲ. ಇಂತಹ ಪರಿಸ್ಥಿತಿಯಲ್ಲಿ, ಆರ್‌ಸಿಬಿ ಈ ಸೀಸನ್‌ನಲ್ಲಿ ಟ್ರೋಫಿ ಎತ್ತಿಹಿಡಿಯುವ ವಿಶ್ವಾಸದಲ್ಲಿದೆ.

Story first published: Friday, May 2, 2025, 20:03 [IST]
Other articles published on May 2, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+