Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ನಿಯಮ ಮೀರಿದ ವಿರಾಟ್ ಕೊಹ್ಲಿ; ಇಡೀ ಭಾರತ ತಂಡಕ್ಕೆ ಬಿಸಿಸಿಐ ಕಠಿಣ ಎಚ್ಚರಿಕೆ: ಅನುಭವಿ ಮಾಡಿದ ತಪ್ಪೇನು?

ಏಷ್ಯಾಕಪ್ ಟೂರ್ನಿಗೆ ದಿನಗಣನೆ ಇರುವಾಗ ಟೀಮ್ ಇಂಡಿಯಾ ಆಟಗಾರರು ಬೆಂಗಳೂರಿನ ಎನ್‌ಸಿಎನಲ್ಲಿ ತರಬೇತಿ ಶಿಬಿರದಲ್ಲಿ ಭಾಗಿಯಾಗಿದ್ದಾರೆ. ಪ್ರತಿಷ್ಠಿತ ಟೂರ್ನಿಗೆ ಭಾರತೀಯ ಆಟಗಾರರು ಭರ್ಜರಿ ಸಿದ್ಧತೆ ನಡೆಸುತ್ತಿದ್ದಾರೆ. ಈ ಟೂರ್ನಿಗೂ ಮುನ್ನ ಟೀಮ್ ಇಂಡಿಯಾ ಆಟಗಾರರು ಯೋ ಯೋ ಟೆಸ್ಟ್‌ನಲ್ಲಿ ಭಾಗಿಯಾಗಿದ್ದಾರೆ. ಈ ವಿಚಾರದಲ್ಲಿ ಮಾಜಿ ನಾಐಕ ವಿರಾಟ್ ಕೊಹ್ಲಿ ಅವರ ನಡೆಗೆ ಬಿಸಿಸಿಐ ಅಸಮಾಧಾನಗೊಂಡಿದ್ದು ಕೊಹ್ಲಿಗೆ ಮಾತಿನ ಎಚ್ಚರಿಕೆ ನೀಡಲಾಗಿದೆ.

ಟೀಮ್ ಇಂಡಿಯಾದ ಕ್ರಿಕೆಟ್ ಆಟಗಾರರ ಫಿಟ್‌ನೆಸ್ ಪರೀಕ್ಷೆಯ ಮಾನದಂಡವಾಗಿರುವ ಯೋ ಯೋ ಪರೀಕ್ಷೆಯನ್ನು ಏಷ್ಯಾಕಪ್ ಟೂರ್ನಿಗೂ ಮುನ್ನ ನಡೆಸಲಾಗಿದೆ. ಗುರುವಾರ ವಿರಾಟ್ ಕೊಹ್ಲಿ ಈ ಯೋ ಯೋ ಟೆಸ್ಟ್‌ನಲ್ಲಿ ಭಾಗಿಯಾಗಿದ್ದರು. ಆದರೆ ಅದಾದ ಬಳಿಕ ವಿರಾಟ್ ಕೊಹ್ಲಿ ತಮ್ಮ ಯೋ ಯೋ ಪರೀಕ್ಷೆಯ ಅಂಕಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ವಿರಾಟ್ ಕೊಹ್ಲಿಯ ಈ ನಡೆಗೆ ಬಿಸಿಸಿಐ ಅಸಮಾಧಾನಗೊಂಡಿದೆ.

Virat Kohli reveals Yo-Yo test score: BCCI warning to Team India players

ಏಷ್ಯಾ ಕಪ್ ಟೂರ್ನಿಗೆ ಪ್ರವಾಸ ಕೈಗೊಳ್ಳುವ ಮುನ್ನ ಬೆಂಗಳೂರಿನ ಆಲೂರಿನಲ್ಲಿ ಟೀಮ್ ಇಂಡಿಯಾ ಆಟಗಾರರು ಆರು ದಿನಗಳ ತರಬೇತಿ ಶಿಬಿದಲ್ಲಿ ಭಾಗಿಯಾಗಿದ್ದಾರೆ. ಮಾಜಿ ನಾಯಕ ಕೊಹ್ಲಿ ಸೇರಿದಂತೆ ಬಹುತೇಕ ಎಲ್ಲಾ ಆಟಗಾರರು ಕೂಡ ಫಿಟ್‌ನೆಸ್ ಪರೀಕ್ಷೆಗೆ ಒಳಗಾಗಿದ್ದಾರೆ.

ವಿರಾಟ್ ಕೊಹ್ಲಿ ಗುರುವಾರ ತಮ್ಮ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಯೋ ಯೋ ಟೆಸ್ಟ್ ಬಳಿಕದ ಫೋಟೋವನ್ನು ಹಂಚಿಕೊಂಡಿದ್ದರು. ಈ ಸಂದರ್ಭದಲ್ಲಿ ಕೊಹ್ಲಿ ತಮ್ಮ ಯೋ ಯೋ ಟೆಸ್ಟ್‌ನ ಅಂಕವನ್ನು ಕೂಡ ಬಹಿರಂಗಪಡಿಸಿದ್ದರು. "ಯೋ ಯೋ ಪರೀಕ್ಷೆ ಮುಗಿಸಿರುವ ಖುಷಿ" ಎಂದು ಬರೆದುಕೊಂಡಿರುವ ವಿರಾಟ್ ಕೊಹ್ಲಿ ಈ ಪರೀಕ್ಷೆಯಲ್ಲಿ 17.2 ಅಂಕವನ್ನು ಪಡೆದುಕೊಂಡಿರುವುದಾಗಿ ತಿಳಿಸಿದ್ದರು. ಆದರೆ ನಿಯಮದ ಪ್ರಕಾರ ಯೋ ಯೋ ಟೆಸ್ಟ್‌ನ ಅಂಕಗಳನ್ನು ಬಹಿರಂಗಪಡಿಸುವಂತಿಲ್ಲ. ಹಾಗಾಗಿ ಬಿಸಿಸಿಐ ವಿರಾಟ್ ಕೊಹ್ಲಿಗೆ ಮೌಕಿಕವಾಗಿ ಎಚ್ಚರಿಕೆ ನೀಡಿದೆ.

ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿಯ ಪ್ರಕಾರ ಬಿಸಿಸಿಐ ಆಟಗಾರರಿಗೆ ಈ ಬಗ್ಗೆ ಎಚ್ಚರಿಕೆಯನ್ನು ನೀಡಿದೆ. ಇಂಥಾ ಗೌಪ್ಯ ಮಾಹಿತಿಯನ್ನು ಬಹಿರಂಗಪಡಿಸಬಾರದು ಹಾಗೂ ಇದು ಒಪ್ಪಂದದ ಉಲ್ಲಂಘನೆ ಎಂದು ಪರಿಗಣಿಸುವುದಾಗಿ ಎಚ್ಚರಿಕೆ ನೀಡಿದೆ ಎನ್ನಲಾಗಿದೆ. ಈ ಬಗ್ಗೆ ಬಿಸಿಸಿಐ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

"ಸಾಮಾಜಿಕ ಜಾಲತಾಣದಲ್ಲಿ ಯಾವುದೇ ಗೌಪ್ಯ ಮಾಹಿತಿಗಳನ್ನು ಹಂಚಿಕೊಳ್ಳದಂತೆ ಸೂಚನೆ ನೀಡಲಾಗಿದೆ. ಅವರು ಅಭ್ಯಾಸದ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳಬಹುದು. ಆದರೆ ಅಂಕಗಳನ್ನು ಹಂಚಿಕೊಳ್ಳುವುದು ಒಪ್ಪಂದದ ನಿಯಮಗಳನ್ನು ಮೀರಿಂದಂತಾಗುತ್ತದೆ" ಎಂದು ಬಿಸಿಸಿಐ ಅಧಿಕಾರಿ ಮಾಹಿತಿ ನೀಡಿದ್ದಾರೆ.

ಇನ್ನು ಯೋ ಯೋ ಪರೀಕ್ಷೆ ತೇರ್ಗಡೆಯಾಗಲು ಕನಿಷ್ಠ 16.5 ಅಂಕಗಳನ್ನು ಪಡೆಯಬೇಕಿದೆ ಎನ್ನಲಾಗಿದೆ. ವಿರಾಟ್ ಕೊಹ್ಲಿ ಮಾತ್ರವಲ್ಲದೆ ರೋಹಿತ್ ಶರ್ಮಾ ಮತ್ತು ಹಾರ್ದಿಕ್ ಪಾಂಡ್ಯ ಕೂಡ ಯೋ-ಯೋ ಪರೀಕ್ಷೆಯಲ್ಲಿ ಯಶಸ್ವಿಯಾಗಿ ತೇರ್ಗಡೆಯಾಗಿದ್ದಾರೆ ಎಂದು ವರದಿಯಾಗಿದೆ.

Story first published: Friday, August 25, 2023, 10:27 [IST]
Other articles published on Aug 25, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+