Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಇಂಗ್ಲೆಂಡ್ ಪ್ರವಾಸಕ್ಕೆ ಟೀಮ್ ಇಂಡಿಯಾ ಭರ್ಜರಿ ಅಭ್ಯಾಸ: ವಿಡಿಯೋ

Virat Kohli, Rishabh Pant, Jasprit Bumrah sweat it out at gym ahead of England tour
Ind vs NZ Team India ಸಿದ್ಧತೆಯ ವಿಡಿಯೋ ವೈರಲ್ | Oneindia Kannada

ಮುಂಬೈ: ಜೂನ್ 3ಕ್ಕೆ ಟೀಮ್ ಇಂಡಿಯಾ ಇಂಗ್ಲೆಂಡ್‌ಗೆ ಪ್ರಯಾಣ ಬೆಳೆಸಲಿದೆ. ಸದ್ಯ ಆಟಗಾರರು, ಕೋಚಿಂಗ್ ಬಳಗ, ಬೆಂಬಲ ಸಿಬ್ಬಂದಿ ಎಲ್ಲರೂ ಮುಂಬೈಯಲ್ಲಿ ಕ್ವಾರಂಟೈನ್ ಪಾಲಿಸುತ್ತಿದ್ದಾರೆ. ಇಂಗ್ಲೆಂಡ್‌ನಲ್ಲಿ ನಡೆಯಲಿರುವ ಐಸಿಸಿ ವರ್ಲ್ಡ್ ಟೆಸ್ಟ್ ಚಾಂಪಿಯನ್‌ಶಿಪ್ ಮತ್ತು ಇಂಗ್ಲೆಂಡ್ ವಿರುದ್ಧದ ಸರಣಿಗೆ ತಂಡ ಭರ್ಜರಿ ಸಿದ್ಧತೆ ನಡೆಸುತ್ತಿದೆ.

ಇಂಗ್ಲೆಂಡ್‌ಗೆ ಹೋಗಲಿರುವ ಭಾರತ ತಂಡ ಅಲ್ಲಿ ನ್ಯೂಜಿಲೆಂಡ್ ವಿರುದ್ಧ ಜೂನ್ 18-22ರ ವರೆಗೆ ಐಸಿಸಿ ವರ್ಲ್ಡ್ ಟೆಸ್ಟ್ ಚಾಂಪಿಯನ್‌ಶಿಪ್‌ ಫೈನಲ್ ಪಂದ್ಯ ಆಡಲಿದೆ. ಆ ಬಳಿಕ ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಪಾಲ್ಗೊಳ್ಳಲಿದೆ.

ಇಂಗ್ಲೆಂಡ್ ಪ್ರವಾಸ ಸರಣಿಯತ್ತ ಕ್ರಿಕೆಟ್ ಅಭಿಮಾನಿಗಳ ಎಲ್ಲರ ಚಿತ್ತ ಇರುವುದರಿಂದ ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಮೇ 31ರ ಸೋಮವಾರ ಒಂದು ವಿಡಿಯೋ ಹಾಕಿಕೊಂಡಿದೆ. ಇದರಲ್ಲಿ ಭಾರತೀಯ ಆಟಗಾರರು ಭರ್ಜರಿ ಸಿದ್ಧತೆ ನಡೆಸುತ್ತಿರುವ ಚಿತ್ರಣವಿದೆ.

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ, ವೇಗಿ ಜಸ್‌ಪ್ರೀತ್‌ ಬೂಮ್ರಾ, ವಿಕೆಟ್ ಕೀಪರ್ ಕಮ್ ಬ್ಯಾಟ್ಸ್‌ಮನ್‌ ರಿಷಭ್ ಪಂತ್ ಮತ್ತು ಉಪ ನಾಯಕ ಅಜಿಂಕ್ಯ ರಹಾನೆ ಮೊದಲಾದವರು ಜಿಮ್‌ನಲ್ಲಿ ಬೆವರಿಳಿಸುತ್ತಿರುವ ದೃಶ್ಯವಿದೆ. 'ಭಾರತ ತಂಡ ಟೆಸ್ಟ್ ಚಾಂಪಿಯನ್‌ಶಿಪ್‌ಗಾಗಿ ಸಿದ್ಧತೆ ನಡೆಸುತ್ತಿದೆ' ಎಂದು ಬರೆದುಕೊಂಡಿದೆ.

Story first published: Monday, May 31, 2021, 18:41 [IST]
Other articles published on May 31, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+