For Quick Alerts
ALLOW NOTIFICATIONS  
For Daily Alerts
 

ಆಸ್ಟ್ರೇಲಿಯಾ ಪ್ರವಾಸಕ್ಕೆ ಇಂದು ಭಾರತ ತಂಡ ಪ್ರಕಟ? ವಿರಾಟ್, ರೋಹಿತ್‌ಗೆ ಸ್ಥಾನ?

ಟೀಮ್ ಇಂಡಿಯಾದ ಅಭಿಮಾನಿಗಳಿಗೆ ಗುಡ್‌ ನ್ಯೂಸ್‌.. ತಂಡದ ಸೂಪರ್ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್‌ ಶರ್ಮಾ ಅಂಗಳಕ್ಕೆ ಇಳಿಯುವ ಬಗ್ಗೆ ಒಳ್ಳೆಯ ಸುದ್ದಿಗಳು ಬರುತ್ತಿವೆ. ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರು ಈಗಾಗಲೇ ಟಿ20 ಹಾಗೂ ಟೆಸ್ಟ್‌ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ. ಉಭಯ ಆಟಗಾರರು ಏಕದಿನ ಕ್ರಿಕೆಟ್‌ನಲ್ಲಿ ತಂಡವನ್ನು ಪ್ರತಿನಿಧಿಸಲಿದ್ದಾರೆ. ಈ ಇಬ್ಬರೂ ಸೂಪರ್ ಸ್ಟಾರ್ ಆಟಗಾರರು ಆಸ್ಟ್ರೇಲಿಯಾ ಪ್ರವಾಸದಲ್ಲಿ ಮೈದಾನಕ್ಕೆ ಇಳಿಯಲಿದ್ದಾರೆ.

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಚಾಂಪಿಯನ್ಸ್‌ ಟ್ರೋಫಿಯ ಬಳಿಕ ಒಂದೇ ಒಂದು ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿಲ್ಲ. ಈ ಇಬ್ಬರೂ ಆಟಗಾರರು ಆಸ್ಟ್ರೇಲಿಯಾ ಪ್ರವಾಸದಲ್ಲಿ ಏಕದಿನ ಸರಣಿಯನ್ನು ಆಡಲು ಸಜ್ಜಾಗಿದ್ದಾರೆ. ಈ ಪ್ರವಾಸಕ್ಕೆ ಭಾರತ ತಂಡವನ್ನು ಶನಿವಾರ (ಅ.4) ರಂದು ಪ್ರಕಟಿಸುವ ಸಾಧ್ಯತೆ ಇದೆ. ಈ ಇಬ್ಬರೂ ಆಟಗಾರರು ಏಕದಿನ ಸರಣಿಯಲ್ಲಿ ತಂಡದ ಪರ ಕಣಕ್ಕೆ ಇಳಿಯುವುದು ಫಿಕ್ಸ್ ಆಗಿದೆ.

Virat Kohli Rohit Sharma set for ODI return on Australia tour squad likely today

ಅಮೆರಿಕ ಹಾಗೂ ವೆಸ್ಟ್‌ ಇಂಡೀಸ್ ಆತಿಥ್ಯದಲ್ಲಿ ನಡೆದಿದ್ದ ಟಿ20 ವಿಶ್ವಕಪ್‌ನಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸುತ್ತಿದ್ದಂತೆ ಚುಟುಕು ಫಾರ್ಮೆಟ್‌ಗೆ ನಿವೃತ್ತಿ ಘೋಷಿಸಿದ್ದರು. ಇನ್ನು ಐಪಿಎಲ್‌ ಸಮಯದಲ್ಲಿ ಉಭಯ ಆಟಗಾರರು ಟೆಸ್ಟ್‌ ಫಾರ್ಮೆಟ್‌ಗೆ ವಿದಾಯ ಹೇಳಿದರು. ರೋಹಿತ್‌ ಶರ್ಮಾ ಅವರ ಬಳಿಕ ಟಿ20 ಫಾರ್ಮೆಟ್‌ನಲ್ಲಿ ಸೂರ್ಯಕುಮಾರ್ ಯಾದವ್ ತಂಡವನ್ನು ಮುನ್ನಡೆಸುತ್ತಿದ್ದು, ಈ ವೇಳೆ ತಂಡ ಏಷ್ಯಾ ಕಪ್‌ ಟಿ20 ಟೂರ್ನಿಯಲ್ಲಿ ಚಾಂಪಿಯನ್‌ ಪಟ್ಟವನ್ನು ಸಹ ಅಲಂಕರಿಸಿದೆ. ಇನ್ನು ಟೆಸ್ಟ್ ತಂಡವನ್ನು ಶುಭಮನ್‌ ಗಿಲ್‌ ಮುನ್ನಡೆಸುತ್ತಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ಪಂದ್ಯಗಳು ಯಾವಾಗ?

ಭಾರತ ಸದ್ಯ ವೆಸ್ಟ್‌ ಇಂಡೀಸ್ ವಿರುದ್ಧ ಟೆಸ್ಟ್‌ ಸರಣಿಯನ್ನು ಆಡುತ್ತಿದೆ. ಈ ಟೆಸ್ಟ್‌ ಸರಣಿ ಮುಗಿದ ಬಳಿಕ ಟೀಮ್ ಇಂಡಿಯಾ ಆಸ್ಟ್ರೇಲಿಯಾ ಪ್ರವಾಸವವನ್ನು ಬೆಳೆಸಲಿದೆ. ಆಸ್ಟ್ರೇಲಿಯಾ ಪ್ರವಾಸದಲ್ಲಿ ಭಾರತ ಅಕ್ಟೋಬರ್‌ 19 ರಿಂದ ನವೆಂಬರ್ 8 ವರೆಗೆ ಸರಣಿ ಆಡಲಿದೆ. ಪ್ರವಾಸದ ಆರಂಭದಲ್ಲಿ ಮೂರು ಪಂದ್ಯಗಳ ಏಕದಿನ ಸರಣಿ ನಡೆಯಲಿದ್ದು, ಈ ಸರಣಿಗೆ ವಿರಾಟ್, ರೋಹಿತ್‌ ಕಣಕ್ಕೆ ಇಳಿಯುವ ನಿರೀಕ್ಷೆ ಇದೆ.

Virat Kohli Rohit Sharma set for ODI return on Australia tour squad likely today

ಟೀಮ್ ಇಂಡಿಯಾವನ್ನು ಏಕದಿನ ಸರಣಿಗಳಲ್ಲಿ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸುವ ಸಾಧ್ಯತೆ ಇದೆ. ಇನ್ನು ರನ್‌ ಮಷಿನ್‌ ಖ್ಯಾತಿಯ ವಿರಾಟ್ ಕೊಹ್ಲಿ ಸಹ ತಂಡಕ್ಕೆ ಎಂಟ್ರಿ ನೀಡಲಿದ್ದಾರೆ. ಇನ್ನು ಸ್ಟಾರ್‌ ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ ಗಾಯಕ್ಕೆ ತುತ್ತಾಗಿದ್ದು, ಈ ಸರಣಿಗೆ ಅಲಭ್ಯರಾಗಿದ್ದಾರೆ. ಈ ಸರಣಿಯ ಬಳಿಕ ವಿರಾಟ್‌, ರೋಹಿತ್‌ ಏಕದಿನ ಸರಣಿಗೆ ಗುಡ್ ಬಾಯ್‌ ಹೇಳುವ ಬಗ್ಗೆ ಚರ್ಚೆಗಳು ಕೇಳಿ ಬರುತ್ತಿವೆ. ಈ ಇಬ್ಬರು ಆಟಗಾರರು 2027ರಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನಲ್ಲಿ ತಂಡವನ್ನು ಪ್ರತಿನಿಧಿಸುವ ಕನಸು ಹೊಂದಿದ್ದಾರೆ.

Story first published: Saturday, October 4, 2025, 8:05 [IST]
Other articles published on Oct 4, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+