ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಕೊಹ್ಲಿ ಗೈರು ಕೆಎಲ್ ರಾಹುಲ್ ಹಾಗೂ ಪೂಜಾರಾಗೆ ಸಿಕ್ಕ ಅವಕಾಶ: ಹರ್ಭಜನ್ ಸಿಂಗ್

Virat Kohlis absence can open window of opportunity for KL Rahul says Harbhajan

ಆಸ್ಟ್ರೇಲಿಯಾ ವಿರುದ್ಧದ ಕೊನೆಯ ಮೂರು ಟೆಸ್ಟ್ ಪಂದ್ಯಗಳಿಗೆ ವಿರಾಟ್ ಕೊಹ್ಲಿ ಗೈರಾಗಲಿರುವುದು ಸಾಕಷ್ಟು ಚರ್ಚೆಯ ವಿಷಯವಾಗಿದೆ. ಆಸ್ಟ್ರೇಲಿಯಾ ಹಾಲಿ ಮಾಜಿ ಆಟಗಾರರು ಈ ಬಗ್ಗೆ ಭಾರೀ ಪ್ರಮಾಣದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಈಗ ಭಾರತದ ಅನುಭವಿ ಆಟಗಾರ ಹರ್ಭಜನ್ ಸಿಂಗ್ ಕೂಡ ಈ ವಿಚಾರವಾಗಿ ಪ್ರತಿಕ್ರಿಯಿಸಿದ್ದಾರೆ.

ಸ್ಪೋರ್ಟ್ಸ್‌ತಕ್‌ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಹರ್ಭಜನ್ ಸಿಂಗ್ ಮಾತನಾಡುತ್ತಾ ಈ ಬೆಳವನೆಇಗೆಯ ಬಗ್ಗೆ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. ಟೀಮ್ ಇಂಡಿಯಾ ಟೆಸ್ಟ್ ತಂಡದಲ್ಲಿ ಮರಳಿ ಸ್ಥಾನವನ್ನು ಪಡೆದುಕೊಂಡಿರುವ ಕೆಎಲ್ ರಾಹುಲ್ ಅವರಂತಾ ಆಟಗಾರರಿಗೆ ನಾಯಕನ ಗೈರು ಉತ್ತಮ ವೇದಿಕೆಯನ್ನು ಒದಗಿಸಲಿದೆ ಎಂದಿದ್ದಾರೆ ಹರ್ಭಜನ್ ಸಿಂಗ್.

ಭಾರತ vs ಆಸ್ಟ್ರೇಲಿಯಾ: NCAನಲ್ಲಿ ತರಬೇತಿ ಆರಂಭಿಸಿದ ಇಶಾಂತ್ ಶರ್ಮಾಭಾರತ vs ಆಸ್ಟ್ರೇಲಿಯಾ: NCAನಲ್ಲಿ ತರಬೇತಿ ಆರಂಭಿಸಿದ ಇಶಾಂತ್ ಶರ್ಮಾ

ಹರ್ಭಜನ್ ಸಿಂಗ್ ಅಭಿಪ್ರಾಯದ ಪ್ರಕಾರ ಕೆಎಲ್ ರಾಹುಲ್ ಜೊತೆಗೆ ಚೇತೇಶ್ವರ್ ಪೂಜಾರ ಮತ್ತು ರೋಹಿತ್ ಶರ್ಮಾ ಅವರಿಗೆ ಆಸ್ಟ್ರೇಲಿಯಾ ವಿರುದ್ಧದ ಈ ಪ್ರವಾಸದಲ್ಲಿ ತಮ್ಮ ಛಾಪು ಮೂಡಿಸಲು ಚಿನ್ನದಂತಾ ಅವಕಾಶವಾಗಿರಲಿದೆ ಎಂದಿದ್ದಾರೆ. ಇದೇ ಸಂದರ್ಭದಲ್ಲಿ ರೋಹಿತ್ ಶರ್ಮಾ ಅಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆರಂಭಿಕನಾಗಿ ಕಣಕ್ಕಿಳಿಯುವುದು ಬಹುದೊಡ್ಡ ಸಂಗತಿ ಎಂದಿದ್ದಾರೆ.

"ವಿರಾಟ್ ಕೊಹ್ಲಿ ಗೈರನ್ನು ನಾವು ಇದೇ ದೃಷ್ಟಕೋನದಿಂದ ನೋಡಬೇಕಿದೆ. ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರ ದೊಡ್ಡ ಆಟಗಾರರು. ತಮ್ಮನ್ನು ತಾವು ಸಾಭೀತುಪಡಿಸಲು ಇದೊಂದು ಅತ್ಯತ್ತಮ ಅವಕಾಶ. ರೋಹಿತ್ ಶರ್ಮಾ ಟೆಸ್ಟ್ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದರೆ ಅದು ಕೂಡ ದೊಡ್ಡ ಸಂಗತಿಯಾಗಿರಲಿದೆ" ಎಂದು ಹರ್ಭಜನ್ ಹೇಳಿದ್ದಾರೆ.

ಟೀಮ್ ಇಂಡಿಯಾದ ನಾಯಕತ್ವ ವಿಭಜನೆ ಬಗ್ಗೆ ಅಭಿಪ್ರಾಯ ಮಂಡಿಸಿದ ಶೋಯೆಬ್ ಅಖ್ತರ್ಟೀಮ್ ಇಂಡಿಯಾದ ನಾಯಕತ್ವ ವಿಭಜನೆ ಬಗ್ಗೆ ಅಭಿಪ್ರಾಯ ಮಂಡಿಸಿದ ಶೋಯೆಬ್ ಅಖ್ತರ್

ತಂಡ ಒಂದು ಸಂಗತಿಯನ್ನು ನೆನಪಿನಲ್ಲಿಟ್ಟುಕೊಂಡರೆ ಸಾಕು. ತಾವು ಬಂದಿರುವುದು ಗೆಲುವು ಸಾಧಿಸಲು ಮತ್ತು ಕಳೆದ ಬಾರಿ ಮಾಡಿದ ಸಾಧನೆಯನ್ನು ಪುನರಾವರ್ತಿಸಲು ಎಂದು ಹರ್ಭಜನ್ ಸಿಂಗ್ ಹೇಳಿದ್ದಾರೆ. ಕಳೆದ ಬಾರಿಯ ಆಸ್ಟ್ರೇಲಿಯಾ ಪ್ರವಾಸದಲ್ಲಿ ಚೇತೇಶ್ವರ್ ಪೂಜಾರ ಅತಿ ಹೆಚ್ಚು ರನ್ ಗಳಿಸಿದ ಆಟಗಾರನಾಗಿದ್ದಾರೆ.

Story first published: Friday, November 20, 2020, 14:24 [IST]
Other articles published on Nov 20, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X