ದ.ಆಫ್ರಿಕಾ ಏಕದಿನ ಸರಣಿಯಿಂದ ಕೊಹ್ಲಿ ಹೊರಗುಳಿಯುವುದು ವಾಮಿಕಾಗಾಗಿ ಎಂಬುದು ಶುದ್ಧ ಸುಳ್ಳು!

ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿಯುವವರೆಗೂ ಜೇನಿನ ಗೂಡಿನಂತಿದ್ದ ಟೀಮ್ ಇಂಡಿಯಾ ಇದೀಗ ಗೊಂದಲಗಳ ಗೂಡಾಗಿ ಬದಲಾಗಿದೆ. ಹೌದು, ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯವರೆಗೂ ಭಾರತದ ಎಲ್ಲಾ ಕ್ರಿಕೆಟ್ ಮಾದರಿಗಳಿಗೂ ವಿರಾಟ್ ಕೊಹ್ಲಿಯೇ ಏಕೈಕ ನಾಯಕನಾಗಿದ್ದರು. ಆದರೆ ಟೂರ್ನಿ ಆರಂಭವಾಗುವುದಕ್ಕೂ ಕೆಲ ದಿನಗಳ ಮುನ್ನ ಅಭಿಮಾನಿಗಳಿಗೆ ಬಹಿರಂಗ ಪತ್ರವೊಂದನ್ನು ಬರೆಯುವುದರ ಮೂಲಕ ತಾನು ಭಾರತ ಟಿ ಟ್ವೆಂಟಿ ತಂಡದ ನಾಯಕತ್ವವನ್ನು ತ್ಯಜಿಸುವ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿಸಿದ್ದರು.
ಹೀಗೆ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವವನ್ನು ತ್ಯಜಿಸುವ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ ಎಂದಿದ್ದ ವಿರಾಟ್ ಕೊಹ್ಲಿ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ನಂತರ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವದಿಂದ ಕೆಳಗಿಳಿಯಲಿದ್ದು, ಭಾರತ ಏಕದಿನ ಮತ್ತು ಟೆಸ್ಟ್ ತಂಡಗಳ ನಾಯಕನಾಗಿ ಮುಂದುವರೆಯುತ್ತೇನೆ ಎಂಬ ಸ್ಪಷ್ಟನೆಯನ್ನು ಕೂಡ ಅದೇ ವೇಳೆ ತಿಳಿಸಿದ್ದರು. ಆದರೆ ವಿರಾಟ್ ಕೊಹ್ಲಿ ಮಾತಿನ ಪ್ರಕಾರ ಏನೂ ನಡೆಯಲಿಲ್ಲ, ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಮುಗಿದ ಬೆನ್ನಲ್ಲೇ ನಡೆದ ನ್ಯೂಜಿಲೆಂಡ್ ವಿರುದ್ಧದ ಟಿ ಟ್ವೆಂಟಿ ಮತ್ತು ಟೆಸ್ಟ್ ಸರಣಿಗಳ ನಂತರ ಬಿಸಿಸಿಐ ಭಾರತ ಏಕದಿನ ತಂಡಕ್ಕೆ ರೋಹಿತ್ ಶರ್ಮಾ ಅವರನ್ನು ನೂತನ ನಾಯಕನಾಗಿ ಆಯ್ಕೆ ಮಾಡಿರುವುದಾಗಿ ಪ್ರಕಟನೆಯನ್ನು ಮಾಡಿತು.
ಹೌದು, ನ್ಯೂಜಿಲೆಂಡ್ ವಿರುದ್ಧದ ಸರಣಿಗಳು ಮುಗಿದ ನಂತರ ಭಾರತ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಳ್ಳಬೇಕಾಗಿದ್ದರಿಂದ ಈ ಪ್ರವಾಸಕ್ಕೆ ಭಾರತ ತಂಡವನ್ನು ಪ್ರಕಟಿಸಿದ ಬಿಸಿಸಿಐ ರೋಹಿತ್ ಶರ್ಮಾ ಭಾರತ ಏಕದಿನ ತಂಡದ ನೂತನ ನಾಯಕ ಎಂಬ ವಿಚಾರವನ್ನು ಕೂಡ ಇದೇ ವೇಳೆ ಹಂಚಿಕೊಂಡಿತು. ಹೀಗೆ ವಿರಾಟ್ ಕೊಹ್ಲಿಯಿಂದ ಬಲವಂತವಾಗಿ ಬಿಸಿಸಿಐ ಭಾರತ ಏಕದಿನ ತಂಡದ ನಾಯಕತ್ವವನ್ನು ಕಸಿದುಕೊಂಡು ರೋಹಿತ್ ಶರ್ಮಾ ಹೆಗಲಿಗೆ ಹಾಕಿದೆ ಎಂಬ ದೊಡ್ಡ ಆಪಾದನೆ ಬಿಸಿಸಿಐ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಕೇಳಿ ಬಂತು. ಬಿಸಿಸಿಐನ ಈ ನಿರ್ಧಾರದಿಂದ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಡುವೆ ಮನಸ್ತಾಪ ಉಂಟಾಗಿದೆ ಎಂಬ ಸುದ್ದಿಗಳು ಕೂಡ ಹೆಚ್ಚಾಗಿ ಹರಿದಾಡುತ್ತಿದ್ದು, ರೋಹಿತ್ ಶರ್ಮಾ ಗಾಯದ ಸಮಸ್ಯೆಗೊಳಗಾಗಿರುವ ಕಾರಣ ನೀಡಿ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಹೊರಗುಳಿದದ್ದು ಈ ವಿವಾದದ ಬೆಂಕಿಗೆ ತುಪ್ಪ ಸುರಿದಂತಾಗಿದೆ.
ಇನ್ನು ರೋಹಿತ್ ಶರ್ಮಾ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಗಾಯದ ಸಮಸ್ಯೆಯಿಂದಾಗಿ ಹೊರಗುಳಿದ ಬೆನ್ನಲ್ಲೇ ಇದೀಗ ವಿರಾಟ್ ಕೊಹ್ಲಿ ಕೂಡ ವೈಯಕ್ತಿಕ ಕಾರಣಗಳಿಂದ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಗೈರಾಗಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ಹೌದು, ವಿರಾಟ್ ಕೊಹ್ಲಿ ತನ್ನ ಮಗಳಾದ ವಾಮಿಕಾಳ ಮೊದಲ ವರ್ಷದ ಹುಟ್ಟುಹಬ್ಬ ಇರುವ ಕಾರಣ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿಯಲಿದ್ದಾರೆ ಎಂಬ ಸುದ್ದಿ ಇದೀಗ ವೈರಲ್ ಆಗುತ್ತಿದೆ. ಆದರೆ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿಯುತ್ತಿರುವುದಕ್ಕೂ ಹಾಗೂ ವಮಿಕಾಗೂ ಯಾವುದೇ ಸಂಬಂಧವಿಲ್ಲ ಮತ್ತು ಇದೆಲ್ಲಾ ಟೀಮ್ ಇಂಡಿಯಾ ಒಳಗಿನ ಮನಸ್ತಾಪದಿಂದ ನಡೆಯುತ್ತಿರುವ ವಿದ್ಯಮಾನಗಳಷ್ಟೇ ಎಂಬ ಸಂಶಯವನ್ನು ಹುಟ್ಟು ಹಾಕುತ್ತಿವೆ ಈ ಕೆಳಕಂಡ ಅಂಶಗಳು..

ವಾಮಿಕಾ ಹುಟ್ಟುಹಬ್ಬಕ್ಕೂ, ಕೊಹ್ಲಿ ಏಕದಿನ ಸರಣಿಯಿಂದ ಹೊರಗುಳಿಯುವುದಕ್ಕೂ ಸಂಬಂಧವೇ ಇಲ್ಲ!
ಸದ್ಯ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಪಾಲ್ಗೊಳ್ಳುವುದಿಲ್ಲ ಎನ್ನುವ ಸುದ್ದಿ ದೊಡ್ಡ ಮಟ್ಟದಲ್ಲಿ ವೈರಲ್ ಆಗಿದ್ದು, ವಿರಾಟ್ ಕೊಹ್ಲಿವಾಮಿಕಾ ಹುಟ್ಟುಹಬ್ಬವನ್ನು ಆಚರಣೆ ಮಾಡುವ ಕಾರಣದಿಂದಾಗಿ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿಯುತ್ತಿದ್ದಾರೆ ಎನ್ನಲಾಗುತ್ತಿದೆ. ಆದರೆವಾಮಿಕಾ ಹುಟ್ಟುಹಬ್ಬ ಜನವರಿ 11ರಂದು ಇದ್ದು, ವಿರಾಟ್ ಕೊಹ್ಲಿ ಜನವರಿ 19ರಿಂದ ಆರಂಭವಾಗಲಿರುವ ಏಕದಿನ ಸರಣಿಯಿಂದ ಹೊರಗುಳಿದು ಹುಟ್ಟುಹಬ್ಬ ಆಚರಿಸಲು ಹೇಗೆ ಸಾಧ್ಯ ಎಂಬ ಅನುಮಾನ ಇದೀಗ ಮೂಡಿಬರುತ್ತಿದೆ. ಹಾಗೆ ನೋಡಿದರೆ ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯವಾಮಿಕಾ ಹುಟ್ಟುಹಬ್ಬದ ದಿನದಂದೇ ಆರಂಭವಾಗಲಿದೆ, ಹೀಗಾಗಿ ವಿರಾಟ್ ಕೊಹ್ಲಿವಾಮಿಕಾ ಹುಟ್ಟುಹಬ್ಬವನ್ನು ಆಚರಿಸುವ ಸಲುವಾಗಿ ರಜೆ ತೆಗೆದುಕೊಳ್ಳಬೇಕೆಂದರೆ ದಕ್ಷಿಣ ಆಫ್ರಿಕಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದಿಂದ ಹೊರಗುಳಿಯಬೇಕು. ಅದನ್ನು ಬಿಟ್ಟು ಜನವರಿ 19ರಿಂದ ಆರಂಭವಾಗಲಿರುವ ಏಕದಿನ ಸರಣಿಯಿಂದ ಹೊರಗುಳಿಯುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಕ್ರಿಕೆಟ್ ಅಭಿಮಾನಿಗಳು ಮಾತನಾಡಿಕೊಳ್ಳುತ್ತಿದ್ದಾರೆ.

ಇಬ್ಬರ ನಡುವೆ ಇದೆ ವೈಮನಸ್ಸು!
ವಿರಾಟ್ ಕೊಹ್ಲಿ ತನ್ನ ಮಗಳ ಹುಟ್ಟುಹಬ್ಬವನ್ನು ಆಚರಿಸುವ ಸಲುವಾಗಿ ಏಕದಿನ ಸರಣಿಯಿಂದ ಹೊರಗುಳಿಯಲಿದ್ದಾರೆ ಎಂದು ಹರಿದಾಡುತ್ತಿರುವುದು ಸರಿಯಾದ ಕಾರಣವಲ್ಲ ಎಂಬುದು ತಿಳಿದ ನಂತರ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಡುವೆ ವೈಮನಸ್ಸು ಇರುವುದು ನಿಜ ಎಂಬ ಅನುಮಾನ ಇದೀಗ ಮತ್ತಷ್ಟು ಹೆಚ್ಚಾಗತೊಡಗಿದೆ. ರೋಹಿತ್ ಶರ್ಮಾ ಟೆಸ್ಟ್ ಸರಣಿಯಿಂದ ಹೊರಗುಳಿದ ಕಾರಣ ವಿರಾಟ್ ಕೊಹ್ಲಿ ಏಕದಿನ ಸರಣಿಯಿಂದ ಹೊರಗುಳಿಯಲು ಮುಂದಾದ್ರಾ ಎಂಬ ಅನುಮಾನ ಇದೀಗ ಹೆಚ್ಚಾಗಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ಸರಣಿಗಳ ವೇಳಾಪಟ್ಟಿ
ಮೊದಲಿಗೆ ಇತ್ತಂಡಗಳ ನಡುವೆ ಟೆಸ್ಟ್ ಸರಣಿ ನಡೆಯಲಿದ್ದು ಇದರ ವೇಳಾ ಪಟ್ಟಿ ಈ ಕೆಳಕಂಡಂತಿದೆ
ಮೊದಲ ಟೆಸ್ಟ್: ಡಿಸೆಂಬರ್ 26-30, ಸೂಪರ್‌ಸ್ಪೋರ್ಟ್ಸ್ ಪಾರ್ಕ್, ಸೆಂಚುರಿಯನ್
ಎರಡನೇ ಟೆಸ್ಟ್: ಜನವರಿ 3-7, ವಾಂಡರರ್ಸ್ ಕ್ರೀಡಾಂಗಣ, ಜೋಹಾನ್ಸ್‌ಬರ್ಗ್
ಮೂರನೇ ಟೆಸ್ಟ್: ಜನವರಿ 11-15, ನ್ಯೂಲ್ಯಾಂಡ್ಸ್, ಕೇಪ್ ಟೌನ್
ಹೀಗೆ 3 ಪಂದ್ಯಗಳ ಟೆಸ್ಟ್ ಸರಣಿ ಮುಗಿದ ನಂತರ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದ್ದು ಅದರ ವೇಳಾಪಟ್ಟಿ ಹೀಗಿದೆ
ಮೊದಲ ಏಕದಿನ: ಜನವರಿ 19 , ಬೆಟ್ವೇ, ಸಮಯ - 2.00 PM
ಎರಡನೇ ಏಕದಿನ: ಜನವರಿ 21, ಪಾರ್ಕ್, ಪಾರ್ಲ್, ಸಮಯ - 2.00 PM
ಮೂರನೇ ಏಕದಿನ: ಜನವರಿ 23, ನ್ಯೂಲ್ಯಾಂಡ್ಸ್, ಕೇಪ್ ಟೌನ್, ಸಮಯ - 2.00 PM
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications