ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಕೊಹ್ಲಿ ವೈಫಲ್ಯವೇ ದೊಡ್ಡ ಸಮಸ್ಯೆ ಎಂದು ಹೇಳಿಕೆ ನೀಡಿದ ವಿವಿಎಸ್ ಲಕ್ಷ್ಮಣ್

Virat Kohlis Form Biggest Letdown For Indian Team: Vvs Laxman

ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಟೀಮ್ ಇಂಡಿಯಾ ವೈಟ್‌ವಾಶ್ ಮುಖಭಂಗಕ್ಕೆ ಈಡಾಗಿದೆ. ಈ ಹೀನಾಯ ಸೋಲನ್ನು ಈಗ ಮಾಜಿ ಆಟಗಾರರು ವಿಮರ್ಶೆಗೆ ಒಳಪಡಿಸಿದ್ದಾರೆ. ಇದೀಗ ಟೀಮ್ ಇಂಡಿಯಾ ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ಈ ಸೋಲಿಗೆ ಕಾರಣಗಳನ್ನು ಹೇಳಿದ್ದಾರೆ.

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇಡೀ ಸರಣಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನವನ್ನು ನೀಡಿದ್ದಾರೆ. ಈ ಕಳಪೆ ಆಟವೇ ತಂಡದ ಪ್ರದರ್ಶನದ ಮೇಲೆ ಪ್ರಭಾವ ಬೀರಿತು ಎಂದು ಮಾಜಿ ಆಟಗಾರ ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ.

ಭಾರತ vs ನ್ಯೂಜಿಲೆಂಡ್ ಟೆಸ್ಟ್: ಬ್ಯಾಟಿಂಗ್ ವೈಫಲ್ಯದ ಬಗ್ಗೆ ಕೊಹ್ಲಿ ಮಾತುಭಾರತ vs ನ್ಯೂಜಿಲೆಂಡ್ ಟೆಸ್ಟ್: ಬ್ಯಾಟಿಂಗ್ ವೈಫಲ್ಯದ ಬಗ್ಗೆ ಕೊಹ್ಲಿ ಮಾತು

ಈ ಸರಣಿಯಲ್ಲಿ ಅತಿ ಹೆಚ್ಚು ಚರ್ಚೆಗೊಳಪಟ್ಟಿರುವ ಇಬ್ಬರು ಪ್ರಮುಖ ಆಟಗಾರರೆಂದರೆ ಅದು ವಿರಾಟ್ ಕೊಹ್ಲಿ ಮತ್ತು ವೇಗಿ ಜಸ್ಪ್ರೀತ್ ಬೂಮ್ರಾ. ಬ್ಯಾಟಿಂಗ್ ವಿಭಾಗದಲ್ಲಿ ವಿರಾಟ್ ಕೊಹ್ಲಿ ವೈಫಲ್ಯವನ್ನು ಅನುಭವಿಸಿದರೆ ಬೌಲಿಂಗ್‌ನಲ್ಲಿ ಜಸ್ರಿತ್ ಬೂಮ್ರಾ ಕಳಪೆ ಆಟ ಉತ್ತಮವಾಗಿರಲಿಲ್ಲ ಎಂದು ವಿವಿಎಸ್ ಲಕ್ಷ್ಮಣ್ ಹೇಳಿದ್ದಾರೆ.

ವಿರಾಟ್ ಕೊಹ್ಲಿ ವಿಶ್ವಶ್ರೇಷ್ಠ ಆಟಗಾರ. ಆತನ ಕಳಪೆ ಫಾರ್ಮ್ ಖಂಡಿತವಾಗಿಯೂ ಟೀಮ್ ಇಂಡಿಯಾ ಬ್ಯಾಟಿಂಗ್ ವಿಭಾಗದ ಮೇಲೆ ಕೆಟ್ಟ ಪರಿಣಾಮವನ್ನು ಬೀರುತ್ತದೆ. ಎರಡು ಟೆಸ್ಟ್ ಪಂದ್ಯಗಳಿಂದ 10ಕ್ಕಿಂತ ಕಡಿಮೆ ಸರಾಸರ ಪಡೆದುಕೊಂಡಿದ್ದಾರೆ ಎಂದರೆ ಅದು ಪ್ರವಾಸಿ ತಂಡಕ್ಕೆ ಬಹಳ ಕಠಿಣವಾಗಿರುತ್ತದ ಎಂದು ಹೇಳಿದ್ದಾರೆ ವಿವಿಎಸ್ ಲಕ್ಷ್ಮಣ್.

ಇದೇ ಸಂದರ್ಭದಲ್ಲಿ ವಿವಿಎಸ್ ಲಕ್ಷ್ಮಣ್ ಕ್ರೈಸ್ಟ್‌ಚರ್ಚ್‌ ಟೆಸ್ಟ್‌ನಲ್ಲಿ ಬೂಮ್ರಾ ಪ್ರದರ್ಶನದ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ. ಕ್ರೈಸ್ಟ್‌ಚರ್ಚ್ ಪಂದ್ಯದಲ್ಲಿ ಬೂಮ್ರಾ ಅದ್ಭುತವಾಗಿ ಪ್ರದರ್ಶನವನ್ನು ನೀಡಿದ್ದಾರೆ, ಈ ಮೂಲಕ ನ್ಯೂಜಿಲೆಂಡ್ ಮೇಲೆ ಒತ್ತಡವನ್ನು ಹಾಕುವಲ್ಲಿ ಯಶಸ್ವಿಯಾದರು. ಆದರೆ ಅದನ್ನು ಬ್ಯಾಟ್ಸ್‌ಮನ್‌ಗಳು ಮುಂದುವರಿಸಿಕೊಂಡು ಹೋಗುವಲ್ಲಿ ವಿಫಲರಾದರು ಎಂದು ಲಕ್ಷ್ಮಣ್ ಹೇಳಿದ್ದಾರೆ.

Story first published: Monday, March 2, 2020, 15:54 [IST]
Other articles published on Mar 2, 2020
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X