ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಕೊಹ್ಲಿ ನನಗಾಗಿ 3ನೇ ಕ್ರಮಾಂಕ ಬಿಟ್ಟರು; ಕಿವೀಸ್ ವಿರುದ್ಧದ ಉತ್ತಮ ಪ್ರದರ್ಶನದ ನಂತರ ಯಾದವ್ ಪ್ರತಿಕ್ರಿಯೆ

Virat Kohli sacrificed his No.3 position for me says Suryakumar Yadav

ಈ ಬಾರಿಯ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಇತ್ತೀಚೆಗಷ್ಟೇ ಮುಕ್ತಾಯವಾಗಿದ್ದು, ನ್ಯೂಜಿಲೆಂಡ್ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ನಡೆದ ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಆಸ್ಟ್ರೇಲಿಯಾ ಭರ್ಜರಿ ಜಯ ಸಾಧಿಸುವುದರ ಮೂಲಕ ಇದೇ ಚೊಚ್ಚಲ ಬಾರಿಗೆ ಐಸಿಸಿ ಟಿ ಟ್ವೆಂಟಿ ವಿಶ್ವಕಪ್ ಟ್ರೋಫಿಯನ್ನು ಎತ್ತಿ ಹಿಡಿದಿದೆ.

ಐಸಿಸಿ ಟಿ20 ಶ್ರೇಯಾಂಕ ಪಟ್ಟಿ: ರಾಹುಲ್ ಸ್ಥಾನ ಕಸಿದ ರಿಜ್ವಾನ್, 8ನೇ ಸ್ಥಾನದಲ್ಲಿ ಮುಂದುವರಿದ ಕೊಹ್ಲಿಐಸಿಸಿ ಟಿ20 ಶ್ರೇಯಾಂಕ ಪಟ್ಟಿ: ರಾಹುಲ್ ಸ್ಥಾನ ಕಸಿದ ರಿಜ್ವಾನ್, 8ನೇ ಸ್ಥಾನದಲ್ಲಿ ಮುಂದುವರಿದ ಕೊಹ್ಲಿ

ಇನ್ನು ಈ ಬಾರಿಯ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡಿ ಲೀಗ್ ಹಂತದಲ್ಲಿ ವಿರಾಟ್ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾಗೆ ಸೋಲುಣಿಸುವುದರ ಮೂಲಕ ಸೆಮಿಫೈನಲ್ ಹಂತವನ್ನು ತಲುಪಿ ಬಲಿಷ್ಠ ಇಂಗ್ಲೆಂಡ್ ವಿರುದ್ಧ ಭರ್ಜರಿ ಜಯ ಸಾಧಿಸಿ, ಫೈನಲ್ ಸುತ್ತಿಗೆ ಲಗ್ಗೆ ಇಟ್ಟಿದ್ದ ನ್ಯೂಜಿಲೆಂಡ್ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲನ್ನು ಅನುಭವಿಸಿ ತನ್ನ ಚೊಚ್ಚಲ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿಯುವ ಕನಸನ್ನು ನನಸು ಮಾಡಿಕೊಳ್ಳಲಾಗದೇ ಟೂರ್ನಿಯಿಂದ ಹೊರಬಿತ್ತು. ಹೀಗೆ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ರನ್ನರ್ ಅಪ್ ಆಗಿ ಹೊರಹೊಮ್ಮಿದ ಬೆನ್ನಲ್ಲೇ ನ್ಯೂಜಿಲೆಂಡ್ ಭಾರತ ಪ್ರವಾಸವನ್ನು ಕೈಗೊಂಡಿದ್ದು 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಯನ್ನು ಆಡಲಿದೆ.

'ನಾಯಕನಾಗಿ ತಂಡವನ್ನು ಮುನ್ನಡೆಸುವೆ'; 9 ವರ್ಷಗಳ ಹಿಂದೆ ನಾಯಕತ್ವದ ಬಗ್ಗೆ ರೋಹಿತ್ ಮಾಡಿದ್ದ ಟ್ವೀಟ್ ವೈರಲ್!'ನಾಯಕನಾಗಿ ತಂಡವನ್ನು ಮುನ್ನಡೆಸುವೆ'; 9 ವರ್ಷಗಳ ಹಿಂದೆ ನಾಯಕತ್ವದ ಬಗ್ಗೆ ರೋಹಿತ್ ಮಾಡಿದ್ದ ಟ್ವೀಟ್ ವೈರಲ್!

ಈಗಾಗಲೇ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ 3 ಪಂದ್ಯಗಳ ಟಿ ಟ್ವೆಂಟಿ ಸರಣಿಗೆ ಚಾಲನೆ ದೊರೆತಿದ್ದು, ಇತ್ತಂಡಗಳ ನಡುವಿನ ಮೊದಲ ಟಿ ಟ್ವೆಂಟಿ ಪಂದ್ಯ ನವೆಂಬರ್‌ 17ರ ಬುಧವಾರದಂದು ಜೈಪುರ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 20 ಓವರ್‌ಗಳಲ್ಲಿ 6 ವಿಕೆಟ್ ನಷ್ಟಕ್ಕೆ 164 ರನ್ ಗಳಿಸಿತು. ಇನ್ನು ನ್ಯೂಜಿಲೆಂಡ್ ತಂಡ ನೀಡಿದ 165 ರನ್‌ಗಳ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ 19.4 ಓವರ್‌ಗಳಲ್ಲಿ 166 ರನ್ ಗಳಿಸುವುದರ ಮೂಲಕ 5 ವಿಕೆಟ್‍ಗಳ ಜಯವನ್ನು ಸಾಧಿಸಿ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯಲ್ಲಿ 1-0 ಅಂತರದಿಂದ ಮುನ್ನಡೆಯನ್ನು ಸಾಧಿಸಿದೆ. ಇನ್ನು ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡುವುದರ ಮೂಲಕ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ಸೂರ್ಯಕುಮಾರ್ ಯಾದವ್ ಪಂದ್ಯ ಮುಗಿದ ನಂತರ ಮಾತನಾಡಿದ್ದು, ವಿರಾಟ್ ಕೊಹ್ಲಿ ಕುರಿತು ಈ ಕೆಳಕಂಡಂತೆ ಹೇಳಿಕೆ ನೀಡಿದ್ದಾರೆ..

ಕೊಹ್ಲಿ ನನಗಾಗಿ ಮೂರನೇ ಕ್ರಮಾಂಕ ಬಿಟ್ಟುಕೊಟ್ಟಿದ್ದು ನನಗಿನ್ನೂ ನೆನಪಿದೆ ಎಂದ ಸೂರ್ಯಕುಮಾರ್ ಯಾದವ್

ಕೊಹ್ಲಿ ನನಗಾಗಿ ಮೂರನೇ ಕ್ರಮಾಂಕ ಬಿಟ್ಟುಕೊಟ್ಟಿದ್ದು ನನಗಿನ್ನೂ ನೆನಪಿದೆ ಎಂದ ಸೂರ್ಯಕುಮಾರ್ ಯಾದವ್

ಕಳೆದ ಬಾರಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಉತ್ತಮ ಪ್ರದರ್ಶನ ನೀಡುವುದರ ಮೂಲಕ ಟೀಮ್ ಇಂಡಿಯಾದಲ್ಲಿ ಸ್ಥಾನ ಗಿಟ್ಟಿಸಿಕೊಂಡಿದ್ದ ಸೂರ್ಯಕುಮಾರ್ ಯಾದವ್ ಇದೇ ವರ್ಷ ಭಾರತ ಪ್ರವಾಸವನ್ನು ಕೈಗೊಂಡಿದ್ದ ಇಂಗ್ಲೆಂಡ್ ವಿರುದ್ಧದ ಟಿ ಟ್ವೆಂಟಿ ಸರಣಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದರು. ಆ ಸಮಯದಲ್ಲಿ ಭಾರತಕ್ಕೆ ಟ್ವೆಂಟಿ ತಂಡದ ನಾಯಕನಾಗಿದ್ದ ವಿರಾಟ್ ಕೊಹ್ಲಿ ತಮ್ಮ ಮೂರನೇ ಕ್ರಮಾಂಕವನ್ನು ಸೂರ್ಯಕುಮಾರ್ ಯಾದವ್ ಅವರಿಗೆ ಬಿಟ್ಟುಕೊಟ್ಟು ತಾವು ನಾಲ್ಕನೇ ಕ್ರಮಾಂಕದಲ್ಲಿ ಕಣಕ್ಕಿಳಿದಿದ್ದರು. ಈ ವಿಷಯದ ಕುರಿತು ಮೆಲುಕು ಹಾಕಿದ ಸೂರ್ಯಕುಮಾರ್ ಯಾದವ್ ವಿರಾಟ್ ಕೊಹ್ಲಿ ತನಗೆ ಮೂರನೇ ಕ್ರಮಾಂಕವನ್ನು ಬಿಟ್ಟು ಕೊಟ್ಟದ್ದನ್ನು ನೆನಪು ಮಾಡಿಕೊಂಡಿದ್ದಾರೆ.

ಯಾವುದೇ ಕ್ರಮಾಂಕದಲ್ಲಾದರೂ ನಾನು ಕಣಕ್ಕಿಳಿಯಬಲ್ಲೆ

ಯಾವುದೇ ಕ್ರಮಾಂಕದಲ್ಲಾದರೂ ನಾನು ಕಣಕ್ಕಿಳಿಯಬಲ್ಲೆ

ಇನ್ನೂ ಮುಂದುವರಿದು ಮಾತನಾಡಿದ ಸೂರ್ಯಕುಮಾರ್ ಯಾದವ್ ತನಗೆ ನಿರ್ದಿಷ್ಟವಾದ ಕ್ರಮಾಂಕವೇ ಬೇಕು ಎಂದೇನಿಲ್ಲ, ಯಾವುದೇ ಕ್ರಮಾಂಕದಲ್ಲಿ ಕಣಕ್ಕಿಳಿಸಿದರೂ ಆಡಬಲ್ಲೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಮುಂಬೈ ಇಂಡಿಯನ್ಸ್ ಪರ ಕಳೆದ 2 - 3 ವರ್ಷಗಳಿಂದ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದು ಅಭ್ಯಾಸವಾಗಿದೆ, ಆದರೆ ವಿವಿಧ ಕ್ರಮಾಂಕದಲ್ಲಿ ಕಣಕ್ಕಿಳಿಯುವ ಇಚ್ಛೆ ತನ್ನಲ್ಲಿದೆ ಎಂಬುದನ್ನು ಸೂರ್ಯಕುಮಾರ್ ಯಾದವ್ ಹೇಳಿಕೊಂಡಿದ್ದಾರೆ.

ಆಪತ್ಬಾಂಧವನಾದ ಸೂರ್ಯಕುಮಾರ್ ಯಾದವ್

ಆಪತ್ಬಾಂಧವನಾದ ಸೂರ್ಯಕುಮಾರ್ ಯಾದವ್

ಜೈಪುರದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳ ನಡುವೆ ನಡೆದ ಮೊದಲ ಟಿ ಟ್ವೆಂಟಿ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಮೂರನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಿ 40 ಎಸೆತಗಳಲ್ಲಿ 62 ರನ್ ಕಲೆಹಾಕಿ ಉತ್ತಮ ಪ್ರದರ್ಶನವನ್ನು ನೀಡಿದರು. ಮೂರನೇ ಕ್ರಮಾಂಕದಲ್ಲಿ ಸೂರ್ಯಕುಮಾರ್ ಯಾದವ್ ತೋರಿದ ಜವಾಬ್ದಾರಿಯುತ ಪ್ರದರ್ಶನಕ್ಕೆ ಪಂದ್ಯಶ್ರೇಷ್ಠ ಪ್ರಶಸ್ತಿ ಲಭಿಸಿತು ಮತ್ತು ಟೀಮ್ ಇಂಡಿಯಾಗೆ ಜಯ ಕೂಡ ಸಿಕ್ಕಿತು. ಸೂರ್ಯಕುಮಾರ್ ಯಾದವ್ ಅವರ ಈ ಇನ್ನಿಂಗ್ಸ್‌ನಲ್ಲಿ 6 ಬೌಂಡರಿ ಮತ್ತು 3 ಸಿಕ್ಸರ್ ಕೂಡ ಸೇರಿದ್ದವು.

ಗೇಮ್ ಪ್ಲ್ಯಾನ್ ಸಕ್ಸಸ್ ಆಗಿದ್ದು ಹೇಗೆ ಅಂತಾ ಹೇಳಿದ ರೋಹಿತ್ | Oneindia Kannada

Story first published: Thursday, November 18, 2021, 13:53 [IST]
Other articles published on Nov 18, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X