ವಿರಾಟ್ ದಾಖಲೆ: ಟೆಸ್ಟ್ ಕ್ರಿಕೆಟ್‌ನಲ್ಲಿ 8,000 ರನ್, 900 ಬೌಂಡರಿ

ಮೊಹಾಲಿಯಲ್ಲಿ ನಡೆಯುತ್ತಿರುವ ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ ಪಂದ್ಯದಲ್ಲಿ ಐತಿಹಾಸಿಕ 100ನೇ ಟೆಸ್ಟ್ ಪಂದ್ಯವನ್ನಾಡುತ್ತಿರುವ ವಿರಾಟ್ ಕೊಹ್ಲಿ, ತಮ್ಮ ವಿಶೇಷ ಟೆಸ್ಟ್ ಪಂದ್ಯದಲ್ಲಿ 8,000 ರನ್ ಪೂರೈಸಿದ ಸಾಧನೆ ಮಾಡಿದ್ದಾರೆ. 169 ಇನ್ನಿಂಗ್ಸ್‌ನಲ್ಲಿ 8 ಸಾವಿರ ಗಡಿ ತಲುಪುವ ಮೂಲಕ ಈ ಸಾಧನೆ ಮಾಡಿದ ಭಾರತದ 6ನೇ ಕ್ರಿಕೆಟಿಗ ಎಂಬ ಸಾಧನೆ ಮಾಡಿದ್ದಾರೆ.
100ನೇ ಟೆಸ್ಟ್ ಪಂದ್ಯವನ್ನಾಡುತ್ತಿರುವ ವಿರಾಟ್ 50.65 ರನ್ ಸರಾಸರಿಯಲ್ಲಿ 8000ಕ್ಕೂ ಅಧಿಕ ರನ್ ಗಳಿಸಿದ್ದಾರೆ. 27 ಶತಕ ಮತ್ತು 7 ದ್ವಿತಶತಕ ಸಿಡಿಸಿರುವ ವಿರಾಟ್ ಹೆಸರಿನಲ್ಲಿ 28 ಅರ್ಧಶತಕಗಳು ಸಹ ಇದೆ.
ಇನ್ನೊಂದು ವಿಶೇಷ ಅಂದ್ರೆ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ 900 ಬೌಂಡರಿಗಳ ಸಿಡಿಸಿದ ಸಾಧನೆ ಮಾಡಿದ್ದಾರೆ.
ಲಂಕಾ ವಿರುದ್ಧ ಮೊದಲ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಕೊಹ್ಲಿ 76 ಎಸೆತಗಳಲ್ಲಿ 45 ರನ್ ಕಲೆಹಾಕುವ ಮೂಲಕ ತನ್ನ ಇನ್ನಿಂಗ್ಸ್ ಮುಗಿಸಿದ್ರು. ಮೂರನೇ ವಿಕೆಟ್‌ಗೆ ಹನುಮ ವಿಹಾರಿ ಜೊತೆಗೂಡಿ 90 ರನ್‌ಗಳ ಜೊತೆಯಾಟವಾಡಿದ ಈ ಜೋಡಿ ಕೊಹ್ಲಿ ಔಟ್ ಆಗುವ ಮೂಲಕ ಬೇರ್ಪಟ್ಟಿತು.
ವಿರಾಟ್ 45 ರನ್‌ಗಳಿಸಿ ಉತ್ತಮವಾಗಿ ಆಡುತ್ತಿದ್ದಾಗ, ಎಡಗೈ ಸ್ಪಿನ್ನರ್ ಲಸಿತ್ ಎಂಬುಲ್ದೇನಿಯ ಸ್ಪಿನ್ ದಾಳಿಯನ್ನ ಅರಿಯದೇ ಕ್ಲೀನ್ ಬೌಲ್ಡ್ ಆಗಿದ್ದಾರೆ. ಈ ಮೂಲಕ ತಮ್ಮ 100ನೇ ಟೆಸ್ಟ್‌ನಲ್ಲಿ ಕೊಹ್ಲಿ ಶತಕವನ್ನ ಎದುರು ನೋಡುತ್ತಿದ್ದ ಅಭಿಮಾನಿಗಳು ನಿರಾಸೆ ಅನುಭವಿಸಿದ್ದಾರೆ. ಇದ್ರ ಬೆನ್ನಲ್ಲೇ ಅರ್ಧಶತಕ ದಾಖಲಿಸಿದ್ದ ಹನುಮ ವಿಹಾರಿ 58 ರನ್‌ಗೆ ವಿಶ್ವ ಫರ್ನಾಂಡೊ ಬೌಲಿಂಗ್‌ನಲ್ಲಿ ಬೌಲ್ಡ್ ಆಗಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications