Virat Kohli: ಕಿವೀಸ್ ವಿರುದ್ಧ ಮೈದಾನಕ್ಕೆ ಇಳಿಯುತ್ತಿದ್ದಂತೆ ವಿರಾಟ್ ದಾಖಲೆ
ಟೀಮ್ ಇಂಡಿಯಾ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ಭಾನುವಾರ ನಡೆಯಲಿದೆ. ಚಾಂಪಿಯನ್ಸ್ ಟ್ರೋಫಿ ಎ ಗುಂಪಿನ ಪಂದ್ಯದ ಮೇಲೆ ವಿಶ್ವದ ಚಿತ್ತ ನೆಟ್ಟಿದೆ. ಇದು ಲೀಗ್ ಹಂತದ ಕೊನೆಯ ಪಂದ್ಯವಾಗಿರಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿದ ತಂಡ ಈ ಗುಂಪಿನಲ್ಲಿ ಅಗ್ರ ಸ್ಥಾನೀಯವಾಗಿ ಸೆಮಿಫೈನಲ್ ಹಂತವನ್ನು ಪ್ರವೇಶಿಸಲಿದೆ. ಹೀಗಾಗಿ ಈ ಪಂದ್ಯ ರೋಚಕತೆ ಹೆಚ್ಚಿಸಿದೆ. ಈ ಪಂದ್ಯದಲ್ಲಿ ಎಲ್ಲರ ಕಣ್ಣುಗಳು ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರ ಮೇಲೆ ನೆಟ್ಟಿರಲಿವೆ. ವಿರಾಟ್ ಕೊಹ್ಲಿ ಕಿವೀಸ್ ವಿರುದ್ಧದ ಪಂದ್ಯದಲ್ಲಿ ಅಂಗಳಕ್ಕೆ ಇಳಿಯುತ್ತಿದ್ದಂತೆ ದಾಖಲೆ ಬರೆಯಲಿದ್ದಾರೆ.
ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿ ದಾಖಲೆ ಬರೆದಿರುವ ವಿರಾಟ್ ಕೊಹ್ಲಿ, ವೇಗವಾಗಿ 14 ಸಾವಿರ ರನ್‌ಗಳನ್ನು ಕಲೆ ಹಾಕಿದ ಹಿರಿಮೆ ತಮ್ಮದಾಗಿಸಿಕೊಂಡಿದ್ದಾರೆ. ಕಳೆದ ಕೆಲವು ತಿಂಗಳಿನಿಂದ ಫಾರ್ಮ್‌ನಿಂದ ಕಂಗೆಟ್ಟಿದ್ದ ವಿರಾಟ್, ಲಯಕ್ಕೆ ಮರಳಿದ್ದು ಅಭಿಮಾನಿಗಳಿಗೆ ಖುಷಿ ನೀಡಿದೆ. ಇವರು ಭಾನುವಾರ, ಚಾಂಪಿಯನ್ಸ್ ಟ್ರೋಫಿಯಲ್ಲಿ ಮೈದಾನಕ್ಕೆ ಇಳಿಯುತ್ತಿದ್ದಂತೆ ದಾಖಲೆಯ ಪುಟಕ್ಕೆ ಎಂಟ್ರಿ ಪಡೆಯಲಿದ್ದಾರೆ.

ವಿರಾಟ್ ಬರೆಯಲಿರುವ ದಾಖಲೆ ಏನು?
ಹಲವು ದಾಖಲೆಗಳನ್ನು ಬರೆದಿರುವ ವಿರಾಟ್ ಕೊಹ್ಲಿ ಮತ್ತೊಂದು ದೊಡ್ಡ ದಾಖಲೆಯನ್ನು ಬರೆಯುವ ಕನಸಿನಲ್ಲಿದ್ದಾರೆ. ಈ ದಾಖಲೆಯನ್ನು ಭಾರತದ ಪರ ಏಕದಿನ ಕ್ರಿಕೆಟ್‌ನಲ್ಲಿ ಕೇವಲ 6 ಆಟಗಾರರು ಮಾತ್ರ ಸಾಧಿಸಿದ್ದಾರೆ. ಈ ಮೂಲಕ ಕೊಹ್ಲಿ ವಿಶೇಷ ಕ್ಲಬ್ ಸೇರಲು ಸಿದ್ಧರಾಗಿದ್ದಾರೆ. ಹೌದು.. ಭಾರತದ ಪರ 300 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ ಹೆಗ್ಗಳಿಕೆಯನ್ನು ವಿರಾಟ್ ತಮ್ಮದಾಗಿಸಿಕೊಳ್ಳಲಿದ್ದಾರೆ.
ಈಗಾಗಲೇ ವಿರಾಟ್ ಏಕದಿನ ಕ್ರಿಕೆಟ್‌ನಲ್ಲಿ 299 ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ 58ರ ಸರಾಸರಿಯಲ್ಲಿ 14085 ರನ್ ಸಿಡಿಸಿದ್ದಾರೆ. ಇದರಲ್ಲಿ 51 ಶತಕ ಹಾಗೂ 73 ಅರ್ಧಶತಕಗಳು ಸೇರಿವೆ. ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಅಂಗಳಕ್ಕೆ ಇಳಿಯುತ್ತಿದ್ದಂತೆ ದಾಖಲೆಯ ಪುಟಕ್ಕೆ ಎಂಟ್ರಿ ನೀಡಲಿದ್ದಾರೆ.

ಒಟ್ಟಾರೆ ವಿಶ್ವದಲ್ಲಿ ಅತಿ ಹೆಚ್ಚು ಏಕದಿನ ಪಂದ್ಯಗಳನ್ನು ಆಡಿದ ಆಟಗಾರರ ಪಟ್ಟಿಯನ್ನು ನೋಡಿದಾಗ ಈ ಪಟ್ಟಿಯಲ್ಲಿ ಟೀಮ್ ಇಂಡಿಯಾದ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಹೆಸರು ಮುಂಚೂಣಿಯಲ್ಲಿದೆ. ಇವರು 463 ಏಕದಿನ ಪಂದ್ಯಗಳನ್ನು ಆಡಿದ ಹಿರಿಮೆ ಹೊಂದಿದ್ದಾರೆ.
ಭಾರತದ ಪರ ಹೆಚ್ಚು ಏಕದಿನ ಪಂದ್ಯ ಆಡಿದ ಪ್ಲೇಯರ್ಸ್
ಸಚಿನ್ ತೆಂಡೂಲ್ಕರ್, 463
ಮಹೇಂದ್ರ ಸಿಂಗ್ ಧೋನಿ, 347
ರಾಹುಲ್ ದ್ರಾವಿಡ್, 340
ಮೊಹಮ್ಮದ್ ಅಜರುದ್ಧಿನ್, 334
ಸೌರವ್ ಗಂಗೂಲಿ, 308
ವಿಶ್ವದಲ್ಲಿ ಅತಿ ಹೆಚ್ಚು ಏಕದಿನ ಪಂದ್ಯಗಳನ್ನು ಆಡಿದ ಆಟಗಾರರು
ಸಚಿನ್ ತೆಂಡೂಲ್ಕರ್ (ಭಾರತ), 463
ಮಹೇಲ್ ಜಯವರ್ಧನೆ (ಶ್ರೀಲಂಕಾ), 448
ಸನತ್ ಜಯಸೂರ್ಯ (ಶ್ರೀಲಂಕಾ), 445
ಕುಮಾರ್ ಸಂಗಾಕ್ಕರ್ (ಶ್ರೀಲಂಕಾ), 404
ಶಾಹಿದ್ ಆಫ್ರಿದಿ (ಪಾಕಿಸ್ತಾನ), 398
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications