ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಿಂದ ಹೊರಗುಳಿಯಲಿರುವ ವಿರಾಟ್ ಕೊಹ್ಲಿ: ವರದಿ

Virat kohli
Virat Kohli ನಾಯಕತ್ವದಿಂದ ಕೆಳಗಿಯುತ್ತಿದ್ದಂತೆ ಶಾಕಿಂಗ್ ನ್ಯೂಸ್ ಕೊಟ್ಟ Ravindra Jadeja | Oneindia Kannada

ಟೀಂ ಇಂಡಿಯಾದ ಲಿಮಿಟೆಡ್ ಓವರ್ ಕ್ಯಾಪ್ಟನ್ ರೋಹಿತ್ ಶರ್ಮಾ, ದಕ್ಷಿಣ ಆಫ್ರಿಕಾ ಪ್ರವಾಸಕ್ಕೂ ಮುನ್ನವೇ ಗಾಯಾಳುವಾಗಿ ತಂಡದಿಂದ ಹೊರಬಿದ್ದಿರುವುದು ಈಗಾಗಲೇ ಟೀಂ ಇಂಡಿಯಾಗೆ ಆಘಾತ ಮೂಡಿಸಿದೆ. ಇದ್ರ ಬೆನ್ನಲ್ಲೇ ಏಕದಿನ ಸರಣಿಯಿಂದ ವಿರಾಟ್ ಕೊಹ್ಲಿ ಹೊರಗುಳಿಯಲಿದ್ದಾರೆ ಎಂಬ ಸುದ್ದಿ ಹರಿದಾಡತೊಡಗಿದೆ.

ಹಿಟ್‌ಮ್ಯಾನ್ ರೋಹಿತ್ ಶರ್ಮಾ ಹ್ಯಾಮ್‌ಸ್ಟ್ರಿಂಗ್‌ನಿಂದಾಗಿ ಮೂರು ಪಂದ್ಯಗಳ ಟೆಸ್ಟ್ ಪಂದ್ಯದಿಂದ ಹೊರಗುಳಿಯಲಿದ್ದಾರೆ ಎನ್ನಲಾಗಿದೆ. ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ ಕಳೆದ ಒಂದು ವಾರದಿಂದ ಅಭ್ಯಾಸ ನಡೆಸುತ್ತಿದ್ದ ರೋಹಿತ್ ಅಭ್ಯಾಸದ ವೇಳೆ ಗಾಯಗೊಂಡಿರುವುದು ಬೆಳಕಿಗೆ ಬಂದಿದೆ. ಅವರು ಮೂರು ಪಂದ್ಯಗಳ ಏಕದಿನ ಸರಣಿಗೆ ಲಭ್ಯವಾಗುತ್ತಾರೆಯೇ ಅಥವಾ ಇಲ್ಲವೋ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಇದ್ರ ಬೆನ್ನಲ್ಲೇ ಕೊಹ್ಲಿ ಕೂಡ ಏಕದಿನ ಕ್ರಿಕೆಟ್ ಸರಣಿಯಲ್ಲಿ ಭಾಗವಹಿಸುವುದು ಅನುಮಾನ ಎನ್ನಲಾಗಿದೆ.

ಜನವರಿ ತಿಂಗಳಿನಲ್ಲಿ ಕುಟುಂಬದೊಂದಿಗೆ ಕಾಲ ಕಳೆಯಲಿರುವ ಕೊಹ್ಲಿ

ಜನವರಿ ತಿಂಗಳಿನಲ್ಲಿ ಕುಟುಂಬದೊಂದಿಗೆ ಕಾಲ ಕಳೆಯಲಿರುವ ಕೊಹ್ಲಿ

ಇತ್ತೀಚಿನ ಅಪ್‌ಡೇಟ್ ಪ್ರಕಾರ ದಕ್ಷಿಣ ಆಫ್ರಿಕಾದ ವಿರುದ್ಧ ಮುಂಬರುವ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ ಭಾಗವಹಿಸುವುದಿಲ್ಲ ಎಂದು ಹೇಳಲಾಗುತ್ತಿದೆ. ಜನವರಿ ತಿಂಗಳಲ್ಲಿ ಕೊಹ್ಲಿ ತಮ್ಮ ಕುಟುಂಬದೊಂದಿಗೆ ರಜಾದಿನವನ್ನು ಕಳೆಯಲು ಯೋಜಿಸಿದ್ದಾರೆ ಎಂದು ವರದಿಯಾಗಿದೆ. ಈ ಏಕದಿನ ಸರಣಿ ವೇಳೆಯಲ್ಲಿ ಕೊಹ್ಲಿ ಮಗು ವಾಮಿಕಾಳ ಮೊದಲ ಜನ್ಮದಿನವಿರುವ ಕಾರಣ ವಿರಾಟ್‌ ಕುಟುಂಬದೊಂದಿಗೆ ಕಾಲಕಳೆಯಲು ಯೋಜಿಸಿರಬಹುದು ಎನ್ನಲಾಗಿದೆ.

ಭಾರತ vs ದ.ಆಫ್ರಿಕಾ: ಗಾಯದ ನೆಪ ಹೇಳಿ ಬೇಕಂತಲೇ ಟೆಸ್ಟ್ ಸರಣಿಯಿಂದ ಹೊರಬಿದ್ರಾ ರೋಹಿತ್?

ವಿರಾಟ್ ಕೊಹ್ಲಿ - ರೋಹಿತ್ ನಡುವೆ ವೈಮನಸ್ಸು ಶುರುವಾಗಿದ್ಯಾ?

ವಿರಾಟ್ ಕೊಹ್ಲಿ - ರೋಹಿತ್ ನಡುವೆ ವೈಮನಸ್ಸು ಶುರುವಾಗಿದ್ಯಾ?

ಕ್ರಿಕೆಟ್ ಪಂಡಿತರ ಲೆಕ್ಕಾಚಾರದ ಪ್ರಕಾರ, ಟೀಂ ಇಂಡಿಯಾ ಲಿಮಿಟೆಡ್ ಓವರ್‌ನ ಹೊಸ ನಾಯಕ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ನಡುವೆ ವೈಮನಸ್ಸು ಶುರುವಾದಂತಿದ್ದು, ಟೀಂ ಇಂಡಿಯಾ ಡ್ರೆಸ್ಸಿಂಗ್ ರೂಂ ಮೊದಲಿನಂತಿಲ್ಲ ಎನ್ನಲಾಗಿದೆ. ರೋಹಿತ್ ಶರ್ಮಾರನ್ನ ಹೊಸ ಏಕದಿನ ಕ್ರಿಕೆಟ್ ಫಾರ್ಮೆಟ್ ನಾಯಕನಾಗಿ ಬಿಸಿಸಿಐ ಘೋಷಿಸಿದ ಬಳಿಕ ಇವರಿಬ್ಬರ ನಡುವಿನ ಸಂಬಂಧ ಮತ್ತಷ್ಟು ಹಳಸಿರಬಹುದು ಎಂದು ಅಂದಾಜಿಸಲಾಗಿದೆ.

ಈಗಾಗಲೇ ರೋಹಿತ್ ಶರ್ಮಾ ಗಾಯಗೊಂಡಿರುವುದು, ಟೆಸ್ಟ್‌ ಸರಣಿಯಷ್ಟೇ ಅಲ್ಲದೆ ಏಕದಿನ ಸರಣಿ ವೇಳೆಗೆ ಚೇತರಿಸಿಕೊಳ್ಳುತ್ತಾರ ಎಂಬ ಯಾವುದೇ ಸುಳಿವು ಇಲ್ಲ. ಹೀಗಾಗಿ ಕೊಹ್ಲಿಯೇನಾದ್ರೂ ಏಕದಿನ ಸರಣಿಯಿಂದ ಹೊರಗುಳಿದಿದ್ದೇ ಆದಲ್ಲಿ ಭಾರತ ತಂಡವನ್ನ ಯಾರು ಮುನ್ನಡೆಸಲಿದ್ದಾರೆ ಎಂಬ ಪ್ರಶ್ನೆ ಹುಟ್ಟಿಕೊಳ್ಳಲಿದೆ.

ಏಕದಿನ ಕ್ರಿಕೆಟ್‌ನ ಗ್ರೇಟೆಸ್ಟ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ

ಏಕದಿನ ಕ್ರಿಕೆಟ್‌ನ ಗ್ರೇಟೆಸ್ಟ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ ಇತಿಹಾಸದಲ್ಲಿ ಶ್ರೇಷ್ಠ ಬ್ಯಾಟ್ಸ್‌ಮನ್‌ಗಳಲ್ಲಿ ಒಬ್ಬರು. ಭಾರತೀಯ ಬ್ಯಾಟಿಂಗ್ ಅದ್ಭುತ ಆಟಗಾರ ಕೊಹ್ಲಿ ಏಕದಿನ ಸ್ವರೂಪದಲ್ಲಿ 6 ನೇ ಅತಿ ಹೆಚ್ಚು ರನ್ ಗಳಿಸಿದ ಆಟಗಾರರಾಗಿದ್ದಾರೆ. 59.07 ರ ಬ್ಯಾಟಿಂಗ್ ಸರಾಸರಿಯಲ್ಲಿ 12, 169 ರನ್‌ಗಳನ್ನು ಕಲೆಹಾಕಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ಶತಕ ಸಿಡಿಸಿದ 2ನೇ ಆಟಗಾರನಾಗಿರುವ ಕೊಹ್ಲಿ 43 ಶತಕಗಳ ಸರದಾರನಾಗಿದ್ದಾರೆ.

ಶೀಘ್ರದಲ್ಲೇ ಭಾರತ ತಂಡವು ICC ಟ್ರೋಫಿಯನ್ನು ಮುಡಿಗೇರಿಸಿಕೊಳ್ಳಲಿದೆ: ಸೌರವ್‌ ಗಂಗೂಲಿ ಭವಿಷ್ಯ

ಇನ್ನು ಕೊಹ್ಲಿ ಏಕದಿನ ಮಾದರಿಯಲ್ಲಿ 62 ಅರ್ಧಶತಕಗಳನ್ನು ಗಳಿಸಿದ್ದಾರೆ. 33 ವರ್ಷ ವಯಸ್ಸಿನ ಬಲಗೈ ಆಟಗಾರ ಏಕದಿನ ಫಾರ್ಮೆಟ್‌ನಲ್ಲಿ 10,000 ರನ್‌ಗಳ ಗಡಿಯನ್ನು ಅತಿವೇಗವಾಗಿ ತಲುಪಿದ ಬ್ಯಾಟ್ಸ್‌ಮನ್ ಕೂಡ ಆಗಿದ್ದಾರೆ . ಕೇವಲ 205 ನೇ ಇನ್ನಿಂಗ್ಸ್‌ನಲ್ಲಿ ಅವರ 10,000 ರನ್‌ಗಳಿಸಿದ್ದಾರೆ.

ಭಾರತ-ದಕ್ಷಿಣ ಆಫ್ರಿಕಾ ಕ್ರಿಕೆಟ್ ಸರಣಿಯ ವೇಳಾಪಟ್ಟಿ

ಭಾರತ-ದಕ್ಷಿಣ ಆಫ್ರಿಕಾ ಕ್ರಿಕೆಟ್ ಸರಣಿಯ ವೇಳಾಪಟ್ಟಿ

ಸೆಂಚುರಿಯನ್ ಮೈದಾನದಲ್ಲಿ ಮೊದಲ ಟೆಸ್ಟ್ ಪಂದ್ಯ ಡಿಸೆಂಬರ್ 26ರಂದು ನಡೆಯಲಿದೆ. ಇನ್ನು ಎರಡನೇ ಪಂದ್ಯವು ಹೊಸ ವರ್ಷದಲ್ಲಿ, ಅಂದರೆ 2022 ರಿಂದ ಆರಂಭವಾಗಲಿದೆ.

ಭಾರತ-ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ ವೇಳಾಪಟ್ಟಿ ಹೀಗಿದೆ
ಮೊದಲ ಟೆಸ್ಟ್‌: ಡಿಸೆಂಬರ್ 26-30, ಸೂಪರ್‌ಸ್ಪೋರ್ಟ್ಸ್ ಪಾರ್ಕ್‌, ಸೆಂಚುರಿಯನ್
ಎರಡನೇ ಟೆಸ್ಟ್: ಜನವರಿ 3-7, ವಾಂಡರರ್ಸ್ ಕ್ರೀಡಾಂಗಣ, ಜೋಹಾನ್ಸ್‌ಬರ್ಗ್
ಮೂರನೇ ಟೆಸ್ಟ್: ಜನವರಿ 11-15, ನ್ಯೂಲ್ಯಾಂಡ್ಸ್, ಕೇಪ್‌ ಟೌನ್

ಏಕದಿನ ಸರಣಿ ವೇಳಾಪಟ್ಟಿ
ಭಾರತವು ಮೂರು ಏಕದಿನ ಪಂದ್ಯಗಳನ್ನು ಸಹ ಆಡುತ್ತದೆ. ಆದರೆ ಬಿಸಿಸಿಐ ಮೊದಲೇ ಘೋಷಿಸಿದಂತೆ ನಾಲ್ಕು ಪಂದ್ಯಗಳ ಟಿ20 ಸರಣಿಯನ್ನು ಮತ್ತೆ ನಿಗದಿಪಡಿಸಲಾಗುತ್ತದೆ.

ಮೊದಲ ಏಕದಿನ: ಜನವರಿ 19 , ಬೆಟ್ವೇ, ಸಮಯ - 2.00 PM
ಎರಡನೇ ಏಕದಿನ: ಜನವರಿ 21, ಪಾರ್ಕ್, ಪಾರ್ಲ್, ಸಮಯ - 2.00 PM
ಮೂರನೇ ಏಕದಿನ: ಜನವರಿ 23, ನ್ಯೂಲ್ಯಾಂಡ್ಸ್, ಕೇಪ್‌ ಟೌನ್, ಸಮಯ - 2.00 PM

Story first published: Tuesday, December 14, 2021, 12:12 [IST]
Other articles published on Dec 14, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X