ಟೀಮ್ ಇಂಡಿಯಾದ ಆಟಗಾರರು ಸದ್ಯ ರೆಸ್ಟ್‌ನಲ್ಲಿದ್ದಾರೆ. ಈ ವೇಳೆ ದೇಶೀಯ ಟೂರ್ನಿಯಲ್ಲಿ ಆಡಲು ಹಲವು ಆಟಗಾರರು ಕಣಕ್ಕೆ ಇಳಿಯಲಿದ್ದಾರೆ. ಇದೇ ವೇಳೆ ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ವಿಜಯ್ ಹಜಾರೆ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಕಣಕ್ಕೆ ಇಳಿಯಲಿದ್ದಾರೆ. ಡಿಸೆಂಬರ್ 24 ರಿಂದ ವಿಜಯ್ ಹಜಾರೆ ಕ್ರಿಕೆಟ್ ಟೂರ್ನಿ ಆರಂಭವಾಗಲಿದೆ. ಈ ಸ್ಟಾರ್ ಆಟಗಾರರ ಆಟವನ್ನು ಕಣ್ಣು ತುಂಬಿಕೊಳ್ಳಲು ಅಭಿಮಾನಿಗಳು ಸಹ ಕಾತುರದಿಂದ ಕಾಯುತ್ತಿದ್ದಾರೆ. ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ 15 ವರ್ಷಗಳ ಬಳಿಕ ವಿಜಯ್ ಹಜಾರೆ ಟೂರ್ನಿ ಆಡಲಿದ್ದಾರೆ.
ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಅಮೋಘ ಪ್ರದರ್ಶನ ನೀಡಿರುವ ವಿರಾಟ್ ಕೊಹ್ಲಿ ದೇಶೀಯ ಟೂರ್ನಿಯಲ್ಲಿ ಅಬ್ಬರದ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಅಭಿಮಾನಿಗಳ ಕಣ್ಣು ವಿರಾಟ್ ಅವರ ಮೇಲೆ ನೆಟ್ಟಿದೆ. ಒಂದೂವರೆ ದಶಕದ ಬಳಿಕ ವಿಜಯ್ ಹಜಾರೆ ಟ್ರೋಫಿಯಲ್ಲಿ ವಿರಾಟ್ ಕಣಕ್ಕೆ ಇಳಿಯಲಿದ್ದಾರೆ. ದೇಶೀಯ ಏಕದಿನ ಟೂರ್ನಿಯಲ್ಲಿ ಟೀಮ್ ಇಂಡಿಯಾದ ಸೂಪರ್ ಸ್ಟಾರ್ ವಿರಾಟ್ ಪ್ರದರ್ಶನ ಹೇಗಿದೆ ಎಂಬ ಬಗ್ಗೆ ವರದಿ ಇಲ್ಲಿದೆ.

ವಿರಾಟ್ ಕೊಹ್ಲಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡಿದ 13 ಪಂದ್ಯಗಳಲ್ಲಿ 819 ರನ್ ಸಿಡಿಸಿದ್ದು, ಇದರಲ್ಲಿ 4 ಶತಕ ಹಾಗೂ 3 ಅರ್ಧಶತಕಗಳು ಸೇರಿವೆ. ಈ ವೇಳೆ ಇವರ ಸರಾಸರಿ 68 ಆಗಿದ್ದು, ಸ್ಟ್ರೈಕ್ ರೇಟ್ 106ರ ಆಗಿದೆ. ವಿರಾಟ್ ಕೊಹ್ಲಿ 2008-09ರಲ್ಲಿ ಆಡಿದ ವಿಜಯ್ ಹಜಾರೆ ಟ್ರೋಫಿಯಲ್ಲಿ ಆಡಿದ 7 ಪಂದ್ಯಗಳಲ್ಲಿ 534 ರನ್ ಸಿಡಿಸಿದ್ದಾರೆ. ವಿರಾಟ್ ಕೊನೆಯ ಬಾರಿಗೆ 2009-10ರಲ್ಲಿ ಕೊನೆಯ ಬಾರಿಗೆ ವಿಜಯ್ ಹಜಾರೆ ಟ್ರೋಫಿ ಆಡಿದ್ದರು. ಈ ವೇಳೆ ಇವರು ಆಡಿದ 5 ಇನ್ನಿಂಗ್ಸ್‌ಗಳಲ್ಲಿ 229 ರನ್ ಸಿಡಿಸಿದ್ದಾರೆ.
ವಿರಾಟ್ ಕೊಹ್ಲಿ ಸದ್ಯ ಭಾರತ ತಂಡದ ಪರ ಏಕದಿನ ಫಾರ್ಮೆಟ್‌ನಲ್ಲಿ ಮಾತ್ರ ಕಣಕ್ಕೆ ಇಳಿದಿದ್ದಾರೆ. ಇವರು ಈಗಾಗಲೇ ಟೆಸ್ಟ್ ಹಾಗೂ ಟಿ20 ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸಿದ್ದಾರೆ. ವಿರಾಟ್ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನಲ್ಲಿ ಆಡುವ ಆಸೆಯನ್ನು ಹೊಂದಿದ್ದಾರೆ. ಹೀಗಾಗಿ ಬಿಸಿಸಿಐ ಇವರಿಗೆ ದೇಶೀಯ ಟೂರ್ನಿಯಲ್ಲಿ ಆಡುವಂತೆ ಸೂಚಿಸಿದೆ.
ವಿಜಯ್ ಹಜಾರೆ ಟ್ರೋಫಿಯಲ್ಲಿ ದೆಹಲಿ "ಡಿ' ಗುಂಪಿನಲ್ಲಿ ಸ್ಥಾನ ಪಡೆದಿದೆ. ಇದೇ ಗುಂಪಿನಲ್ಲಿ ದೆಹಲಿ ಸೇರಿದಂತೆ ಆಂಧ್ರ, ಗುಜರಾತ್, ಸೌರಾಷ್ಟ್ರ, ಓಡಿಶಾ, ರೈಲ್ವೇಸ್, ಹರಿಯಾಣ ತಂಡಗಳು ಸ್ಥಾನ ಪಡೆದಿವೆ. ಡೆಲ್ಲಿ ತಂಡವನ್ನು ವಿಜಯ್ ಹಜಾರೆ ಟೂರ್ನಿಯಲ್ಲಿ ವಿಕೆಟ್ ಕೀಪರ್ ಬ್ಯಾಟರ್ ರಿಷಭ್ ಪಂತ್ ಮುನ್ನಡೆಸಲಿದ್ದಾರೆ. ಆಯೂಷ್ ಬಡೋನಿ ಅವರಿಗೆ ಉಪನಾಯಕ ಪಟ್ಟವನ್ನು ನೀಡಲಾಗಿದೆ. ದೆಹಲಿ ತಂಡ ಡಿಸೆಂಬರ್ 24 ರಂದು ಆಂಧ್ರಪ್ರದೇಶ ವಿರುದ್ಧ ತನ್ನ ಮೊದಲ ಪಂದ್ಯವನ್ನು ಆಡಲಿದೆ.