For Quick Alerts
ALLOW NOTIFICATIONS  
For Daily Alerts
 

Virat Kohli: ಹ್ಯಾಟ್ರಿಕ್‌ ಶತಕ ಸಿಡಿಸುತ್ತಲೇ ವಿರಾಟ್ ಕೊಹ್ಲಿ ದಾಖಲೆ

ಭಾರತದ ಸ್ಟಾರ್ ಬ್ಯಾಟರ್‌ ವಿರಾಟ್ ಕೊಹ್ಲಿ ಸದ್ಯ ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಸದ್ಯ ಇವರು ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದಾರೆ. ಆಡಿದ ಎರಡೂ ಪಂದ್ಯಗಳಲ್ಲಿ ಶತಕ ಸಿಡಿಸಿರುವ ಕೊಹ್ಲಿ ಆರ್ಭಟಿಸಿದ್ದಾರೆ. ರಾಂಚಿ ಹಾಗೂ ರಾಯ್ಪುರ್‌ದಲ್ಲಿ ನಡೆದ ಪಂದ್ಯದಲ್ಲಿ ಕೊಹ್ಲಿ ಶತಕ ಸಿಡಿಸಿ ಅಭಿಮಾನಿಗಳನ್ನು ರಂಜಿದ್ದಾರೆ. ವಿಶಾಖಪಟ್ಟಣಂನಲ್ಲಿ ಕೊಹ್ಲಿ ಅವರಿಗೆ ಸುವರ್ಣ ಅವಕಾಶ ಒಂದು ಲಭಿಸಲಿದೆ. ಈ ವೇಳೆ ಕೊಹ್ಲಿ ಫಾರ್ಮ್‌ನ ಗಮನಿಸಿದರೆ, ಹ್ಯಾಟ್ರಿಕ್‌ ಶತಕದ ಆಸೆ ಫಲಿಸಬಹುದು ಎಂಬ ನಿರೀಕ್ಷೆಗಳು ಗರಿಗೆದರಿವೆ.

ಧೋನಿ ತವರಿನಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಕೊಹ್ಲಿ 11 ಬೌಂಡರಿ ಮತ್ತು 7 ಸಿಕ್ಸರ್‌ಗಳನ್ನು ಬಾರಿಸಿ 135 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದ್ದರು. ಇವರ ಅಮೋಘ ಆಟದ ಪರಿಣಾಮ ಭಾರತ 17 ರನ್ ಜಯ ಸಾಧಿಸಿತ್ತು. ರಾಯ್ಪುರದಲ್ಲಿ ನಡೆದ ಪಂದ್ಯದಲ್ಲಿ 7 ಬೌಂಡರಿ ಮತ್ತು 2 ಸಿಕ್ಸರ್‌ ನೆರವಿನಿಂದ 102 ರನ್ ಗಳಿಸಿದರು. ಈಗ ಇವರು ಮತ್ತೊಮ್ಮೆ ಏಕದಿನ ಕ್ರಿಕೆಟ್‌ನಲ್ಲಿ ಹ್ಯಾಟ್ರಿಕ್‌ ಶತಕದ ಕನಸನ್ನು ಈಡೇರಿಸಿಕೊಳ್ಳುವ ಸನಿಹದಲ್ಲಿದ್ದಾರೆ.

Virat Kohli set to rewrite history aims for second ODI hat-trick century vs South Africa

ವಿಶಾಖಪಟ್ಟಣಂದಲ್ಲಿ ವಿರಾಟ್‌ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಶತಕವನ್ನು ಬಾರಿಸುವಲ್ಲಿ ಸಫಲರಾದರೆ, ಹ್ಯಾಟ್ರಿಕ್‌ ಶತಕವನ್ನು ಪೂರ್ಣಗೊಳಿಸಲಿದ್ದಾರೆ. ಈ ಮೂಲಕ 7 ವರ್ಷಗಳ ಬಳಿಕ ಸತತ ಮೂರು ಶತಕಗಳನ್ನು ಬಾರಿಸುವ ಆಸೆಯನ್ನು ಹೊಂದಿದ್ದಾರೆ. ಇದಕ್ಕೂ ಮೊದಲು ವಿರಾಟ್‌ 2018ರಲ್ಲಿ ವೆಸ್ಟ್‌ ಇಂಡೀಸ್ ವಿರುದ್ಧ ಇದೇ ಸಾಧನೆಯನ್ನು ಮಾಡಿದ್ದರು. ವಿರಾಟ್‌ ಶನಿವಾರ ಶತಕವನ್ನು ಬಾರಿಸುವಲ್ಲಿ ಯಶಸ್ವಿಯಾದರೆ, ಏಕದಿನ ಕ್ರಿಕೆಟ್‌ ಇತಿಹಾಸದಲ್ಲಿ ಹ್ಯಾಟ್ರಿಕ್‌ ಶತಕಗಳನ್ನು ಎರಡು ಬಾರಿ ಬಾರಿಸಿದ ಮೊದಲ ಭಾರತೀಯ ಬ್ಯಾಟರ್ ಆಗಲಿದ್ದಾರೆ.

ವಿರಾಟ್‌ ಕೊಹ್ಲಿ ತಮ್ಮ ವೃತ್ತಿ ಜೀವನದ ಸಂಧ್ಯಾಕಾಲದಲ್ಲಿದ್ದಾರೆ. ಇವರು ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್‌ನಲ್ಲಿ ಆಡುವ ಬಯಕ್ಕೆಯನ್ನು ಹೊಂದಿದ್ದಾರೆ. ಅಲ್ಲದೆ ಈ ತಂಡದಲ್ಲಿ ಇವರಿಗೆ ಸ್ಥಾನ ನೀಡಬೇಕೋ, ಬೇಡವೋ ಎಂಬ ಬಗ್ಗೆ ಚರ್ಚೆಗಳು ಆರಂಭವಾಗಿದ್ದವು. ಆದರೆ ಈಗ ಇವರ ಫಾರ್ಮ್‌ನ್ನು ಗಮನಿಸಿದರೆ ಇವರನ್ನು ತಂಡದಿಂದ ಕೈ ಬಿಡುವ ಪ್ರಶ್ನೆ ಇಲ್ಲವೇ ಇಲ್ಲ ಎಂದು ತೋರುತ್ತಿದೆ. ವಿರಾಟ್ ಕೊಹ್ಲಿ 2011ರಲ್ಲಿ ಭಾರತ ಏಕದಿನ ವಿಶ್ವಕಪ್‌ ಗೆದ್ದಾಗ ತಂಡದ ಸದಸ್ಯರಾಗಿದ್ದರು.

Virat Kohli set to rewrite history aims for second ODI hat-trick century vs South Africa

ಸರಣಿ ಸಮಬಲ

ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಯಲ್ಲಿ ಉಭಯ ತಂಡಗಳು ತಲಾ ಒಂದೊಂದು ಪಂದ್ಯ ಗೆದ್ದಿವೆ. ರಾಂಚಿಯಲ್ಲಿ ಭಾರತ ಮೇಲುಗೈ ಸಾಧಿಸಿದರೆ, ರಾಯ್ಪುರದಲ್ಲಿ ಪ್ರವಾಸಿ ತಂಡ ಜಯ ಸಾಧಿಸಿದೆ. ರಾಯ್ಪುರ್‌ದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತರೂ ಮೊದಲು ಬ್ಯಾಟ್ ಮಾಡಿದ ಭಾರತ ತಂಡ ನಿಗದಿತ 50 ಓವರ್‌ಗಳಲ್ಲಿ 358 ರನ್‌ ಸೇರಿಸಿತು. ಈ ವೇಳೆ ವಿರಾಟ್‌ ಕೊಹ್ಲಿ, ರುತುರಾಜ್ ಗಾಯಕ್ವಾಡ್ ಶತಕ ಬಾರಿಸಿ ಅಬ್ಬರಿಸಿದರು. 359 ಗುರಿಯನ್ನು ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡದ ಪರ ಆರಂಭಿಕ ಐಡೆನ್ ಮಾರ್ಕ್ರಾಮ್ ಶತಕ ಬಾರಿಸಿ ಗೆಲುವಿನಲ್ಲಿ ಮಿಂಚಿದರು.

Story first published: Friday, December 5, 2025, 14:01 [IST]
Other articles published on Dec 5, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+