ನಾಯಕತ್ವ ಬಿಟ್ಟ ನಂತರ ಬ್ಯಾಟ್ಸ್‌ಮನ್‌ ಆಗಿ ಮೈದಾನದಲ್ಲಿ ಅಬ್ಬರಿಸಲು ವಿರಾಟ್ ಕೊಹ್ಲಿ ರೆಡಿ

ಕಳೆದ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯವರೆಗೂ ಭಾರತ ಏಕದಿನ, ಟಿ ಟ್ವೆಂಟಿ ಹಾಗೂ ಟೆಸ್ಟ್ ಈ ಮೂರೂ ಮಾದರಿಯ ತಂಡಗಳಿಗೂ ನಾಯಕನಾಗಿದ್ದ ವಿರಾಟ್ ಕೊಹ್ಲಿ ಇದೀಗ ಎಲ್ಲಾ ತಂಡಗಳ ನಾಯಕತ್ವವನ್ನು ಕೂಡ ಕಳೆದುಕೊಂಡಿದ್ದು ಕೇವಲ ಟೀಮ್ ಇಂಡಿಯಾದ ಆಟಗಾರನಾಗಿ ಮಾತ್ರ ಉಳಿದುಕೊಂಡಿದ್ದಾರೆ.

ಅನುಮಾನ ಬೇಡ ಈತನೇ ಟೆಸ್ಟ್ ತಂಡದ ನೂತನ ನಾಯಕ; ಉಪನಾಯಕನ ಆಯ್ಕೆಯಲ್ಲಿ ಗೊಂದಲ: ಬಿಸಿಸಿಐಅನುಮಾನ ಬೇಡ ಈತನೇ ಟೆಸ್ಟ್ ತಂಡದ ನೂತನ ನಾಯಕ; ಉಪನಾಯಕನ ಆಯ್ಕೆಯಲ್ಲಿ ಗೊಂದಲ: ಬಿಸಿಸಿಐ

ಹೌದು, ಮೊದಲಿಗೆ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವವನ್ನು ಸ್ವಇಚ್ಛೆಯಿಂದ ತ್ಯಜಿಸುವ ನಿರ್ಧಾರವನ್ನು ಕೈಗೊಂಡಿದ್ದ ವಿರಾಟ್ ಕೊಹ್ಲಿ ಅವರನ್ನು ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಟೀಮ್ ಇಂಡಿಯಾವನ್ನು ಪ್ರಕಟಿಸುವ ವೇಳೆ ಬಿಸಿಸಿಐ ಏಕದಿನ ನಾಯಕತ್ವದಿಂದ ಕೂಡ ತೆಗೆದುಹಾಕಿತು. ಹೀಗೆ ವಿರಾಟ್ ಕೊಹ್ಲಿ ಭಾರತ ಟಿ ಟ್ವೆಂಟಿ ಮತ್ತು ಏಕದಿನ ತಂಡದ ನಾಯಕತ್ವದಿಂದ ಕೆಳಗಿಳಿದ ನಂತರ ರೋಹಿತ್ ಶರ್ಮಾ ಆ ಸ್ಥಾನಗಳಿಗೆ ಆಯ್ಕೆಯಾಗಿದ್ದಾರೆ.

ಹೀಗೆ ಭಾರತ ಟಿ ಟ್ವೆಂಟಿ ಮತ್ತು ಏಕದಿನ ತಂಡಗಳ ನಾಯಕತ್ವವನ್ನು ಕಳೆದುಕೊಂಡ ನಂತರ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡು ಹರಿಣಗಳ ವಿರುದ್ಧದ 3 ಪಂದ್ಯಗಳ ಟೆಸ್ಟ್ ಸರಣಿ ಪೈಕಿ ಮೊದಲ ಹಾಗೂ ತೃತೀಯ ಟೆಸ್ಟ್ ಪಂದ್ಯದಲ್ಲಿ ನಾಯಕನಾಗಿ ಕಣಕ್ಕಿಳಿದಿದ್ದ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಮುಗಿದ ನಂತರ ಇದೀಗ ಭಾರತ ಟೆಸ್ಟ್ ತಂಡದ ನಾಯಕತ್ವಕ್ಕೂ ಕೂಡ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಹೌದು, ಜನವರಿ 15ರಂದು ಭಾರತ ಟೆಸ್ಟ್ ತಂಡದ ನಾಯಕತ್ವಕ್ಕೆ ರಾಜೀನಾಮೆಯನ್ನು ಸಲ್ಲಿಸಿದ ವಿರಾಟ್ ಕೊಹ್ಲಿ ಅಭಿಮಾನಿಗಳಿಗೆ ಬೇಸರವನ್ನುಂಟು ಮಾಡಿದ್ದರು.

ಭಾರತ ಟೆಸ್ಟ್ ತಂಡದ ನೂತನ ನಾಯಕ ಫಿಕ್ಸ್: ಉಪನಾಯಕನ ರೇಸ್‌ನಲ್ಲಿ ಈ ಮೂವರು ಆಟಗಾರರು!ಭಾರತ ಟೆಸ್ಟ್ ತಂಡದ ನೂತನ ನಾಯಕ ಫಿಕ್ಸ್: ಉಪನಾಯಕನ ರೇಸ್‌ನಲ್ಲಿ ಈ ಮೂವರು ಆಟಗಾರರು!

ಇನ್ನು ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳ ನಡುವೆ ನಡೆದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ 1 - 2 ಅಂತರದಲ್ಲಿ ಹೀನಾಯವಾದ ಸೋಲನ್ನು ಕಂಡಿದ್ದು ಸದ್ಯ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧ ನಡೆಯಲಿರುವ 3 ಪಂದ್ಯಗಳ ಏಕದಿನ ಸರಣಿಯನ್ನು ಗೆದ್ದು ಪ್ರತೀಕಾರ ತೀರಿಸಿಕೊಳ್ಳುವ ತವಕದಲ್ಲಿದೆ. ಭಾರತ ಏಕದಿನ ತಂಡದ ನಾಯಕನಾಗಿ ನೇಮಕಗೊಂಡಿದ್ದ ರೋಹಿತ್ ಶರ್ಮಾ ಗಾಯದ ಸಮಸ್ಯೆಯಿಂದ ಅಲಭ್ಯರಾಗಿರುವ ಕಾರಣ ಇದೀಗ ಟೀಮ್ ಇಂಡಿಯಾವನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಈ ಏಕದಿನ ಸರಣಿಯಲ್ಲಿ ಕೆ ಎಲ್ ರಾಹುಲ್ ನಾಯಕನಾಗಿ ಮುನ್ನಡೆಸುತ್ತಿದ್ದು, ವಿರಾಟ್ ಕೊಹ್ಲಿ ಓರ್ವ ಆಟಗಾರನಾಗಿ ಕಣಕ್ಕಿಳಿಯಲಿದ್ದಾರೆ. ಸುಮಾರು 4 ವರ್ಷಗಳ ಅಂತರದ ನಂತರ ವಿರಾಟ್ ಕೊಹ್ಲಿ ನೀಲಿ ಜೆರ್ಸಿ ತೊಟ್ಟು ಆಟಗಾರನಾಗಿ ಕಣಕ್ಕಿಳಿಯಲಿದ್ದು, ದಕ್ಷಿಣ ಆಫ್ರಿಕಾ ವಿರುದ್ಧದ ಪ್ರಥಮ ಏಕದಿನ ಪಂದ್ಯ ಆರಂಭವಾಗುವುದಕ್ಕೂ ಮುನ್ನ ಮೈದಾನಕ್ಕಿಳಿದು ಅಭ್ಯಾಸ ನಡೆಸಿದ್ದಾರೆ.

INS ರಣವೀರ್ ಯುದ್ಧನೌಕೆಯಲ್ಲಿ ಸ್ಫೋಟ,ಭಾರತೀಯ ನೌಕಾಪಡೆಯ 3 ಯೋಧರು ಹುತಾತ್ಮ | Oneindia Kannada

ಹೀಗೆ ನೆಟ್ ಪ್ರ್ಯಾಕ್ಟೀಸ್ ನಡೆಸಿದ ಚಿತ್ರಗಳನ್ನು ವಿರಾಟ್ ಕೊಹ್ಲಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿಕೊಂಡಿದ್ದು ಬ್ಯಾಟಿಂಗ್ ಇಮೋಜಿ ಪಕ್ಕ ಹೃದಯದ ಇಮೋಜಿಯನ್ನು ಬಳಸಿ ಬ್ಯಾಟಿಂಗ್‌ನತ್ತ ತಮಗಿರುವ ಒಲವನ್ನು ವ್ಯಕ್ತಪಡಿಸಿದ್ದಾರೆ ಹಾಗೂ ಈ ಬಾರಿ ಬ್ಯಾಟ್ಸ್‌ಮನ್‌ ಆಗಿ ಅಬ್ಬರಿಸುವ ಮುನ್ಸೂಚನೆಯನ್ನು ಕೂಡ ನೀಡಿದ್ದಾರೆ.

For Quick Alerts
ALLOW NOTIFICATIONS
For Daily Alerts
Story first published: Tuesday, January 18, 2022, 23:29 [IST]
Other articles published on Jan 18, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X