ಏಜಸ್ ಬೌಲ್‌ನ ಸುಂದರ ಚಿತ್ರ ಹಂಚಿಕೊಂಡ ವಿರಾಟ್ ಕೊಹ್ಲಿ

ಸೌತಾಂಪ್ಟನ್: ಜೂನ್ 3ರ ಗುರುವಾರ ಭಾರತ ಕ್ರಿಕೆಟ್ ತಂಡ ಇಂಗ್ಲೆಂಡ್‌ಗೆ ತಲುಪಿದೆ. ಮುಂಬರಲಿರುವ ಐಸಿಸಿ ವರ್ಲ್ಡ್ ಟೆಸ್ಟ್ ಚಾಂಪಿಯನ್‌ಶಿಪ್‌ಗಾಗಿ ವಿರಾಟ್ ಕೊಹ್ಲಿ ಪಡೆ ಸದ್ಯ ತಯಾರಿ ನಡೆಸುತ್ತಿದೆ. ಜೂನ್ 18-22ರ ವರೆಗೆ ಭಾರತ-ನ್ಯೂಜಿಲೆಂಡ್ ಮಧ್ಯೆ ವರ್ಲ್ಡ್ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ನಡೆಯಲಿದೆ.
ಇಂಗ್ಲೆಂಡ್‌ನಲ್ಲಿರುವ ಭಾರತ ತಂಡದ ಸದಸ್ಯರು ತಮ್ಮ ಹೋಟೆಲ್ ಮತ್ತು ಕುಟುಂಬದ ಸದಸ್ಯರ ಜೊತೆಗಿನ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಿದ್ದಾರೆ. ನಾಯಕ ವಿರಾಟ್ ಕೊಹ್ಲಿ ಕೂಡ ತನ್ನ ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಸೌತಾಂಪ್ಟನ್‌ನ ಏಜಸ್ ಬೌಲ್‌ನಲ್ಲಿರುವ ಸುಂದರ ಚಿತ್ರಗವನ್ನು ಹಂಚಿಕೊಳ್ಳುತ್ತಿದ್ದಾರೆ.

ಏಜಸ್ ಬೌಲ್‌ನ ಹಿಲ್ಟನ್ ಹೋಟೆಲ್‌ನಲ್ಲಿ ಭಾರತೀಯ ಆಟಗಾರರು ಕ್ವಾರಂಟೈನ್ ಪಾಲಿಸುತ್ತಿದ್ದಾರೆ. ಈ ಮಧ್ಯೆ ರೋಹಿತ್ ಶರ್ಮಾ-ರಿಷಭ್ ಪಂತ್, ಜಸ್‌ಪ್ರೀತ್ ಬೂಮ್ರಾ, ವೃದ್ಧಿಮಾನ್ ಸಾಹ ಮೊದಲಾದವರು ಚಿತ್ರಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿದ್ದಾರೆ.
ಭಾರತೀಯ ಪುರುಷ ಮತ್ತು ಮಹಿಳಾ ಎರಡೂ ತಂಡಗಳೂ ಸದ್ಯ ಇಂಗ್ಲೆಂಡ್‌ನಲ್ಲಿವೆ. ಪುರುಷರ ತಂಡಕ್ಕೆ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಬಳಿಕ ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಮಹಿಳಾ ತಂಡಕ್ಕೆ ಇಂಗ್ಲೆಂಡ್ ವಿರುದ್ಧ 1 ಟೆಸ್ಟ್, 3 ಏಕದಿನ ಮತ್ತು 3 ಟಿ20ಐ ಪಂದ್ಯಗಳು ನಡೆಯಲಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications