Virat Kohli: ವಿರಾಟ್ ದಾಖಲೆಗಳ ಪಟ್ಟಿಗೆ ಮತ್ತಷ್ಟು ರೆಕಾರ್ಡ್ಸ್ ಸೇರ್ಪಡೆ: ಇಲ್ಲಿದೆ ಮಾಹಿತಿ
ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಮೊದಲ ಸೆಮಿಫೈನಲ್ ಪಂದ್ಯ ದುಬೈನಲ್ಲಿ ನಡೆದಿದೆ. ಈ ಪಂದ್ಯದಲ್ಲಿ ಅಮೋಘ ಸಂಘಟಿತ ಆಟದ ಪ್ರದರ್ಶನ ನೀಡಿದ ಭಾರತ 4 ವಿಕೆಟ್‌ಗಳಿಂದ ಕಂಗರೂ ಪಡೆಯನ್ನು ಮಣಿಸಿ, ಚಾಂಪಿಯನ್ಸ್ ಟ್ರೋಫಿಯ ಫೈನಲ್‌ಗೆ ಅರ್ಹತೆ ಪಡೆದಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ಹೊಸ ದಾಖಲೆ ನಿರ್ಮಿಸಿದ್ದಾರೆ. ಹಾಗಿದ್ದಾರೆ ವಿರಾಟ್ ಕೊಹ್ಲಿ ಬರೆದಿರುವ ದಾಖಲೆಗಳ ಪಟ್ಟಿ ಇಲ್ಲಿದೆ.
ಚಾಂಪಿಯನ್ಸ್ ಟ್ರೊಫಿಯ ಸೆಮಿಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ 264 ರನ್‌ಗಳಿಗೆ ಆಲೌಟ್ ಆಯಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಭಾರತ 48.1 ಓವರ್‌ಗಳಲ್ಲಿ 6 ವಿಕೆಟ್‌ಗೆ 267 ರನ್ ಸಿಡಿಸಿ ಜಯ ಸಾಧಿಸಿತು. ಈ ಗೆಲುವಿನಲ್ಲಿ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ 84 ರನ್ ಸಿಡಿಸಿ ಮಿಂಚಿದರು. ಇವರ ಅಬ್ಬರದ ಆಟದ ಫಲವಾಗಿ ಇವರಿಗೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಸಹ ಸಂದಿತು. ಇವರು ಈ ಪಂದ್ಯದಲ್ಲಿ ದಾಖಲೆಗಳನ್ನು ಬರೆದು ಬೀಗಿದ್ದಾರೆ.

ಗುರಿಯನ್ನು ಬೆನ್ನಟ್ಟುವಾಗ 8 ಸಾವಿರ ರನ್
ಏಕದಿನ ಮಾದರಿಯಲ್ಲಿ ಗುರಿಯನ್ನು ಬೆನ್ನಟ್ಟುವಾಗ ಕೊಹ್ಲಿ 8,000 ರನ್ ಗಳಿಸಿದ ವೇಗವಾಗಿ ಬಾರಿಸಿದ ಆಟಗಾರ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಂಡಿದ್ದಾರೆ. ಕೊಹ್ಲಿಗಿಂತಲೂ ಮುಂಚಿತವಾಗಿ ಈ ಸಾಧನೆಯನ್ನು ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರು ಮಾತ್ರ ಮಾಡಿದ್ದರು. ವಿರಾಟ್ ಐಸಿಸಿ ಟೂರ್ನಮೆಂಟ್‌ನ ನಾಕೌಟ್‌ಗಳಲ್ಲಿ ತಮ್ಮ 5 ನೇ ಅರ್ಧಶತಕವನ್ನು ಗಳಿಸಿದ್ದಾರೆ. ನಾಕೌಟ್ ಪಂದ್ಯಗಳಲ್ಲಿ 6 ಅರ್ಧಶತಕಗಳನ್ನು ಸಚಿನ್ ತೆಂಡೂಲ್ಕರ್ ಬಾರಿಸಿದ್ದಾರೆ.
ಐಸಿಸಿ ನಾಕೌಟ್ ಪಂದ್ಯದಲ್ಲಿ ಅತಿ ಹೆಚ್ಚು ರನ್
ವಿರಾಟ್ ಕೊಹ್ಲಿ ಈಗಾಗಲೇ ಐಸಿಸಿ ನಾಕೌಟ್ ಪಂದ್ಯಗಳಲ್ಲಿ ಅತಿ ಹೆಚ್ಚು ರನ್ ಸಿಡಿಸಿದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು. ಆದರೆ ಈ ಪಂದ್ಯದಲ್ಲಿ ಇವರು 61 ರನ್ ಸಿಡಿಸುತ್ತಾ ಇದ್ದಂತೆ, ನಾಕೌಟ್ ಪಂದ್ಯಗಳಲ್ಲಿ 1 ಸಾವಿರ ರನ್ ಮಾರ್ಕ್ ಮುಟ್ಟಿದ ಹಿರಿಮೆಯನ್ನು ತಮ್ಮದಾಗಿಸಿಕೊಂಡರು. ಇದಕ್ಕೂ ಮೊದಲು ಈ ಸಾಧನೆಯನ್ನು ಯಾರು ಮಾಡಿಲ್ಲ.

ಭಾರತದ ಪರ ಚಾಂಪಿಯನ್ಸ್ ಟ್ರೋಫಿಯಲ್ಲಿ ಗರಿಷ್ಠ ರನ್
ಈ ಪಂದ್ಯದಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿರುವ ವಿರಾಟ್ ಕೊಹ್ಲಿ ಭಾರತದ ಪರ ಚಾಂಪಿಯನ್ಸ್ ಟ್ರೋಫಿಯಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಸಾಧನೆ ಮಾಡಿದರು. ಇದಕ್ಕೂ ಮೊದಲು ಈ ದಾಖಲೆ ಶಿಖರ್ ಧವನ್ ಹೆಸರಿನಲ್ಲಿ ಇತ್ತು. ಶಿಖರ್ 10 ಪಂದ್ಯಗಳಲ್ಲಿ 701 ರನ್ ಸಿಡಿಸಿದ್ದರು. ಈಗ ವಿರಾಟ್ 17 ಪಂದ್ಯಗಳಲ್ಲಿ 82ರ ಸರಾಸರಿಯಲ್ಲಿ 746 ರನ್ ಕಲೆ ಹಾಕಿ ಅಬ್ಬರಿಸಿದ್ದಾರೆ.
ಚಾಂಪಿಯನ್ಸ್ ಟ್ರೋಫಿಯ ಫೈನಲ್‌ನಲ್ಲಿ ವಿರಾಟ್ 46 ರನ್‌ಗಳಿಸುವಲ್ಲಿ ಶಕ್ತರಾದಲ್ಲಿ ಮತ್ತೊಂದು ವಿಶ್ವ ದಾಖಲೆ ಬರೆಯಲಿದ್ದಾರೆ. ಇವರು ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಆಟಗಾರ ಎಂಬ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ. ಸದ್ಯ ಈ ದಾಖಲೆ ಕ್ರಿಸ್ ಗೇಲ್ ಹೆಸರಿನಲ್ಲಿದೆ. ಕ್ರಿಸ್ ಗೇಲ್ 17 ಪಂದ್ಯಗಳಲ್ಲಿ 791 ರನ್ ಸಿಡಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications