ಈತನನ್ನು ಹೊರಹಾಕಿ ಕೊಹ್ಲಿಗೆ ಆರಂಭಿಕನ ಸ್ಥಾನ ಕೊಡಿ ರನ್ ಹೊಳೆ ಹರಿಯುತ್ತದೆ ಎಂದ ಇಂಗ್ಲೆಂಡ್ ಕ್ರಿಕೆಟಿಗ!

ಸದ್ಯ ಟೀಮ್ ಇಂಡಿಯಾ ಇಂಗ್ಲೆಂಡ್‌ನಲ್ಲಿ ಬೀಡುಬಿಟ್ಟಿದ್ದು ಆಂಗ್ಲರ ವಿರುದ್ಧ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಹಾಗೂ 3 ಪಂದ್ಯಗಳ ಏಕದಿನ ಸರಣಿಗಳಲ್ಲಿ ಸೆಣಸಾಟ ನಡೆಸುತ್ತಿದೆ. ಈಗಾಗಲೇ ಇತ್ತಂಡಗಳ ನಡುವಿನ ಟಿ ಟ್ವೆಂಟಿ ಸರಣಿ ಆರಂಭವಾಗಿದ್ದು, ನಿನ್ನೆ (ಜುಲೈ 7 ) ನಡೆದ ಪ್ರಥಮ ಟಿ ಟ್ವೆಂಟಿ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಟೀಮ್ ಇಂಡಿಯಾ ಆತಿಥೇಯ ಇಂಗ್ಲೆಂಡ್ ವಿರುದ್ಧ 50 ರನ್‌ಗಳ ಬೃಹತ್ ಗೆಲುವನ್ನು ದಾಖಲಿಸುವುದರ ಮೂಲಕ ಸರಣಿಯಲ್ಲಿ ಗೆಲುವಿನ ಖಾತೆ ತೆರೆದು ಮುನ್ನಡೆಯನ್ನು ಕಾಯ್ದುಕೊಂಡಿದೆ.
ಇನ್ನು ಇದಕ್ಕೂ ಮುನ್ನ ನಡೆದಿದ್ದ ಮರು ಆಯೋಜನೆಯಾಗಿದ್ದ ಇತ್ತಂಡಗಳ ನಡುವಿನ ಐದನೇ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಜಯ ಸಾಧಿಸುವುದರ ಮೂಲಕ ಭಾರತ ತಂಡ ಮುಖಭಂಗಕ್ಕೊಳಗಾಗಿತ್ತು. ಈ ಪಂದ್ಯದಲ್ಲಿ ಭಾಗವಹಿಸಿದ್ದ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ವಿರಾಟ್ ಕೊಹ್ಲಿ ನೀರಸ ಪ್ರದರ್ಶನ ತೋರಿ ತಮ್ಮ ಕಳಪೆ ಫಾರ್ಮ್ ಮುಂದುವರಿಸಿದ್ದರು. ಹಾಗೂ ಪ್ರಥಮ ಟಿ ಟ್ವೆಂಟಿ ಪಂದ್ಯದಲ್ಲಿ ವಿಶ್ರಾಂತಿಗೆಂದು ಹೊರಗುಳಿದಿದ್ದ ವಿರಾಟ್ ಕೊಹ್ಲಿ ದ್ವಿತೀಯ ಟಿ ಟ್ವೆಂಟಿ ಪಂದ್ಯದಲ್ಲಿ ಕಣಕ್ಕಿಳಿಯಲಿದ್ದಾರೆ.
ಸದ್ಯ ವಿರಾಟ್ ಕೊಹ್ಲಿ ಇಂಗ್ಲೆಂಡ್ ವಿರುದ್ಧದ ಈ ಸರಣಿಗಳಲ್ಲಿ ಉತ್ತಮ ಪ್ರದರ್ಶನ ನೀಡಿದರೆ ಮಾತ್ರ ಮುಂದಿನ ಭವಿಷ್ಯ ನಿರ್ಧಾರವಾಗಲಿದೆ ಎಂಬ ಸುದ್ದಿಗಳು ಹರಿದಾಡುತ್ತಿದ್ದು, ಕೊಹ್ಲಿ ಉತ್ತಮ ರನ್ ಗಳಿಸಲೇಬೇಕಿದೆ. ವಿರಾಟ್ ಕೊಹ್ಲಿಯ ಕಳಪೆ ಫಾರ್ಮ್ ಕುರಿತು ಮಾತನಾಡಿರುವ ಇಂಗ್ಲೆಂಡ್ ತಂಡದ ಮಾಜಿ ಕ್ರಿಕೆಟಿಗ ಗ್ರೇಮ್ ಸ್ವಾನ್ ಟೀಮ್ ಇಂಡಿಯಾಗೆ ವಿರಾಟ್ ಕೊಹ್ಲಿ ಆಡುವ ಸ್ಥಾನದ ಕುರಿತಾಗಿ ವಿಶೇಷ ಸಲಹೆಯೊಂದನ್ನು ನೀಡಿದ್ದಾರೆ. ಗ್ರೇಮ್ ಸ್ವಾನ್ ನೀಡಿರುವ ಸಲಹೆಯ ಕುರಿತಾದ ಮಾಹಿತಿ ಕೆಳಕಂಡಂತಿದೆ.

ಈತನನ್ನು ಹೊರಹಾಕಿ ವಿರಾಟ್ ಕೊಹ್ಲಿಯನ್ನು ಆರಂಭಿಕನಾಗಿ ಕಣಕ್ಕಿಳಿಸಿ
ಸೋನಿ ಸ್ಪೋರ್ಟ್ಸ್ ಜೊತೆ ಮಾತನಾಡಿದ ಗ್ರೇಮ್ ಸ್ವಾನ್ ಇಶಾನ್ ಕಿಶನ್ ಅವರನ್ನು ಹೊರಗಿಟ್ಟು ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿಯನ್ನು ಆರಂಭಿಕನನ್ನಾಗಿ ಕಣಕ್ಕಿಳಿಸಬೇಕು, ನಾನಾಗಿದ್ದರೆ ಅದೇ ರೀತಿ ಮಾಡುತ್ತಿದ್ದೆ ಎಂಬ ಹೇಳಿಕೆಯನ್ನು ನೀಡಿದ್ದಾರೆ.

ಕೊಹ್ಲಿಗೆ ಮೂರನೇ ಕ್ರಮಾಂಕ ಬೇಡ
ಇನ್ನೂ ಮುಂದುವರಿದು ಮಾತನಾಡಿರುವ ಗ್ರೇಮ್ ಸ್ವಾನ್ ವಿರಾಟ್ ಕೊಹ್ಲಿ ಓರ್ವ ಅತ್ಯುತ್ತಮ ಆಟಗಾರ, ಕೊಹ್ಲಿ ಸೂರ್ಯಕುಮಾರ್ ಯಾದವ್ ಮತ್ತು ದೀಪಕ್ ಹೂಡಾ ರೀತಿ ಮಧ್ಯಮ ಕ್ರಮಾಂಕದಲ್ಲಿ ವೇಗವಾಗಿ ರನ್ ಗಳಿಸಲಾರ ಎಂಬ ಕಾರಣಕ್ಕೆ ಆತ ಮೂರನೇ ಕಣಕ್ಕಿಳಿಯುವುದು ನಿಮಗೆ ಬೇಡ ಎನಿಸಿದರೆ ಆತನನ್ನು ಆರಂಭಿಕನಾಗಿ ಕಣಕ್ಕಿಳಿಸಿ ಎಂದು ಸಲಹೆ ಕೊಟ್ಟಿದ್ದಾರೆ.

ವಿರಾಟ್ ಮತ್ತು ರೋಹಿತ್ ಆರಂಭಿಕರಾಗಿ ಕಣಕ್ಕಿಳಿದರೆ ರನ್ ಹೊಳೆ ಹರಿಯಲಿದೆ
ಇಶಾನ್ ಕಿಶನ್ ಅವರನ್ನು ಹೊರಹಾಕಿ ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಅವರನ್ನು ಆರಂಭಿಕರಾಗಿ ಕಣಕ್ಕೆ ಇಳಿಸಿದರೆ ರೋಹಿತ್ ಶರ್ಮಾ ವೇಗವಾಗಿ ರನ್ ಚಚ್ಚಲಿದ್ದಾರೆ ಹಾಗೂ ನಂತರದ ಸಮಯದಲ್ಲಿ ವಿರಾಟ್ ಕೊಹ್ಲಿ ಕೂಡ ವೇಗವಾಗಿ ಬ್ಯಾಟ್ ಬೀಸಲಿದ್ದಾರೆ ಎಂದು ಗ್ರೇಮ್ ಸ್ವಾನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹೀಗೆ ಆರಂಭಿಕರಾಗಿ ಕಣಕ್ಕಿಳಿದು ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ರನ್ ಹೊಳೆ ಹರಿಸಿ ನಂತರ ಸೂರ್ಯಕುಮಾರ್ ಯಾದವ್ ಮತ್ತು ದೀಪಕ್ ಹೂಡಾ ಕೂಡ ರನ್ ಹೊಳೆ ಹರಿಸುವುದನ್ನು ಊಹಿಸಿಕೊಳ್ಳಿ ಎಂದು ಗ್ರೇಮ್ ಸ್ವಾನ್ ಸಲಹೆ ನೀಡಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications