ಸಚಿನ್ ದಾಖಲೆಯ ಮೇಲೆ ವಿರಾಟ್ ಕೊಹ್ಲಿ, ಸ್ಟೀವನ್ ಸ್ಮಿತ್ ಕಣ್ಣು
ಸದ್ಯ ಭಾರತ ತಂಡ ಆಸ್ಟ್ರೇಲಿಯಾ ಪ್ರವಾಸದಲ್ಲಿದೆ. ಈ ವೇಳೆ ಐದು ಪಂದ್ಯಗಳ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯನ್ನು ಆಡಲಾಗುತ್ತಿದೆ. ಉಭಯ ತಂಡಗಳು ತಲಾ ಒಂದೊಂದು ಪಂದ್ಯ ಗೆದ್ದಿದ್ದರಿಂದ ಬ್ರಿಸ್ಬೇನ್‌ನಲ್ಲಿ ನಡೆಯುತ್ತಿರುವ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಸ್ಥಿರ ಪ್ರದರ್ಶನ ನೀಡುವ ವಿಶ್ವಾಸ ಹೊಂದಿದೆ. ಈ ಸರಣಿಯಲ್ಲಿ ಇಬ್ಬರು ಸ್ಟಾರ್ ಆಟಗಾರರು ಲಯಕ್ಕೆ ಮರಳಿದ್ದಾರೆ. ಎರಡೂ ತಂಡಗಳ ಪರ ಈ ಆಟಗಾರರು ಮಿಂಚಿ ತಮ್ಮ ತಮ್ಮ ತಂಡಕ್ಕೆ ನೆರವಾಗಿದ್ದಾರೆ. ಈ ಆಟಗಾರರ ಕಣ್ಣು ಈಗ ದಾಖಲೆಯ ಮೇಲೆ ನೆಟ್ಟಿದೆ.
ಪರ್ತ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿ ಲಯಕ್ಕೆ ಮರಳಿರುವ ವಿರಾಟ್ ಕೊಹ್ಲಿ, ಎರಡನೇ ಇನಿಂಗ್ಸ್‌ನಲ್ಲಿ ಶತಕ ಬಾರಿಸಿ ಲಯಕ್ಕೆ ಮರಳಿದ್ದರು. ಆದರೆ ಅಡಿಲೇಡ್ ಹಾಗೂ ಬ್ರಿಸ್ಬೇನ್‌ನಲ್ಲಿ ರನ್ ಕಲೆ ಹಾಕುವಲ್ಲಿ ವಿಫಲರಾದರು. ಪರ್ತ್ ಹಾಗೂ ಆಡಿಲೇಡ್‌ನಲ್ಲಿ ರನ್ ಕಲೆ ಹಾಕುವಲ್ಲಿ ಹಿಂದೆ ಬಿದ್ದಿದ್ದ ಆಸ್ಟ್ರೇಲಿಯಾದ ಸ್ಟೀವನ್ ಸ್ಮಿತ್ ಗಬ್ಬಾ ಟೆಸ್ಟ್‌ನಲ್ಲಿ ಅಬ್ಬರದ ಶತಕ ಬಾರಿಸಿ ತಂಡಕ್ಕೆ ನೆರವಾದರು. ಈ ಇಬ್ಬರೂ ಆಟಗರರ ಕಣ್ಣು ಈಗ ಆ ಒಂದು ದಾಖಲೆಯ ಮೇಲೆ ನೆಟ್ಟಿದೆ.

ಯಾವ ದಾಖಲೆಯ ಮೇಲೆ ಆಟಗಾರರ ಕಣ್ಣು?
ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಬಾರ್ಡರ್ ಗವಾಸ್ಕರ್ ಸರಣಿಯು 1996ರಿಂದ ಆರಂಭವಾಗಿದೆ. ಈ ಸರಣಿಯಲ್ಲಿ ಟೀಮ್ ಇಂಡಿಯಾದ ಸಚಿನ್ ತೆಂಡೂಲ್ಕರ್ 1996 ರಿಂದ 2013ರ ವರೆಗೆ ಬ್ಯಾಟ್ ಮಾಡಿದ್ದಾರೆ. ಈ ಅವಧಿಯಲ್ಲಿ ಇವರು ಆಡಿದ 34 ಪಂದ್ಯಗಳಲ್ಲಿ 9 ಶತಕ ಸಿಡಿಸಿದ ದಾಖಲೆಯನ್ನು ಹೊಂದಿದ್ದಾರೆ. ಇದು ಉಭಯ ದೇಶಗಳ ನಡುವಣ ಟೆಸ್ಟ್ ಸರಣಿಯಲ್ಲಿ ಒಬ್ಬ ಬ್ಯಾಟರ್ ದಾಖಲಿಸಿದ ಅಧಿಕ ಶತಕ. ಈ ದಾಖಲೆಯ ಮೇಲೆ ಟೀಮ್ ಇಂಡಿಯಾದ ವಿರಾಟ್ ಕೊಹ್ಲಿ ಹಾಗೂ ಆಸ್ಟ್ರೇಲಿಯಾದ ಸ್ಟೀವನ್ ಸ್ಮಿತ್ ಕಣ್ಣು ನೆಟ್ಟಿದ್ದಾರೆ.
ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ವಿರಾಟ್ ಕೊಹ್ಲಿ ಹಾಗೂ ಸ್ಟೀವನ್ ಸ್ಮಿತ್ 9 ಶತಕ ಸಿಡಿಸಿದ್ದಾರೆ. ವಿರಾಟ್ 2011ರಿಂದ ಈ ಸರಣಿಯಲ್ಲಿ ಆಡುತ್ತಿದ್ದು, 27 ಪಂದ್ಯಗಳಲ್ಲಿ 9 ಶತಕ ದಾಖಲಿಸಿದ್ದಾರೆ. ಇನ್ನು ಆಸ್ಟ್ರೇಲಿಯಾ ಬ್ಯಾಟಿಂಗ್ ಬೆನ್ನೆಲಬು ಎಂದೇ ಕರೆಯಲ್ಪಡುವ ಸ್ಟೀವನ್ ಸ್ಮಿತ್ 2013ರಿಂದ ಬಾರ್ಡರ್ ಗವಾಸ್ಕರ್ ಸರಣಿಯ ಭಾಗವಾಗಿದ್ದಾರೆ. ಇವರು ಈ ಸರಣಿಯಲ್ಲಿ ಆಡಿದ 21 ಪಂದ್ಯಗಳಲ್ಲಿ 9 ಶತಕ ಸಿಡಿಸಿದ್ದಾರೆ. ಮುಂದಿನ ಪಂದ್ಯಗಳಲ್ಲಿ ಯಾರೇ ಶತಕ ಬಾರಿಸಿದರೂ ಸಚಿನ್ ತೆಂಡೂಲ್ಕರ್ ಅವರ ದಾಖಲೆ ಅಳಿಸುತ್ತದೆ.

ಇನ್ನು ಎರಡು ಪಂದ್ಯ ಬಾಕಿ
ವಿರಾಟ್ ಕೊಹ್ಲಿ ಹಾಗೂ ಸ್ಟೀವನ್ ಸ್ಮಿತ್‌ಗೆ ಈ ಸರಣಿಯಲ್ಲಿ ಇನ್ನೂ ಎರಡು ಪಂದ್ಯಗಳಲ್ಲಿ ಆಡುವ ಅವಕಾಶ ಲಭಿಸುತ್ತದೆ. ಇವರು ಕನಿಷ್ಠ ನಾಲ್ಕು ಇನಿಂಗ್ಸ್ ಆಡಬಹುದು. ಹೀಗಾಗಿ ಇಬ್ಬರೂ ಸಚಿನ್ ತೆಂಡೂಲ್ಕರ್ ಅವರ ಶ್ರೇಷ್ಠ ದಾಖಲೆಯನ್ನು ಮುರಿಯುವ ಅವಕಾಶವನ್ನು ಹೊಂದಿದ್ದಾರೆ. ಯಾರು ಈ ದಾಖಲೆಯನ್ನು ಮೊದಲು ಮುರಿಯುತ್ತಾರೆ ಕಾದು ನೋಡಬೇಕಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications