ಭಾರತದಲ್ಲಿ ನಡೆಯುತ್ತಿರುವ 2023ರ ಐಸಿಸಿ ಏಕದಿನ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾದ ಬ್ಯಾಟರ್‌ಗಳು ಅಮೋಘ ಪ್ರದರ್ಶನ ನೀಡುತ್ತಿದ್ದಾರೆ. ರನ್ ಗುಡ್ಡೆಯನ್ನು ಹಾಕುವಲ್ಲೂ ಟೀಮ್ ಇಂಡಿಯಾದ ಆಟಗಾರರು ಹಿಂದೆ ಬಿದ್ದಿಲ್ಲ. ಗರಿಷ್ಠ ರನ್ ಸರದಾರರ ಲೀಸ್ಟ್‌ನಲ್ಲೂ ಕಾಣಿಸಿಕೊಂಡಿದ್ದಾರೆ.
ಅಂದಹಾಗೆ ರನ್‌ಗಳು ಬ್ಯಾಟರ್‌ಗಳ ಬ್ಯಾಟನಿಂದ ಬಂದಿದೆ ಎಂದರೆ ಒಂದಂತೂ ಪಕ್ಕಾ, ಗರಿಷ್ಠ ರನ್ ಗಳಿಸಿದ ಬ್ಯಾಟರ್ ಕ್ರೀಸ್‌ನಲ್ಲಿ ಅತಿ ಹೆಚ್ಚು ಕಾಲ ಸಮಯ ಕಳೆದಿದ್ದಾನೆ ಎಂದು ಸಾಬೀತು ಆಗುತ್ತದೆ.
ಈ ಬಾರಿಯ ವಿಶ್ವಕಪ್‌ನಲ್ಲಿ ಭಾರತ ತಂಡದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಟಾಪ್ ರನ್ ಸ್ಕೋರ್ ಮಾಡಿದವರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಅಮೋಘ ಫಾರ್ಮ್‌ನಲ್ಲಿರುವ ಟೀಮ್ ಇಂಡಿಯಾದ ಚೇಸಿಂಗ್ ಸ್ಟಾರ್ ವಿರಾಟ್ ಕೊಹ್ಲಿ ಪ್ರಸಕ್ತ ಏಕದಿನ ವಿಶ್ವಕಪ್‌ನಲ್ಲಿ ಎರಡು ಶತಕ ಬಾರಿಸಿ ಅಬ್ಬರಿಸುತ್ತಿದ್ದಾರೆ. ಇನ್ನು ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಸಹ ಹೆಚ್ಚು ರನ್ ಸರಾಸರಿಯೊಂದಿಗೆ ರನ್ ಕಲೆ ಹಾಕುತ್ತಿದ್ದಾರೆ.
2023ರ ಏಕದಿನ ವಿಶ್ವಕಪ್‌ನ 8 ಪಂದ್ಯಗಳಲ್ಲಿ ಟೀಮ್ ಇಂಡಿಯಾದ ಅಗ್ರ-5 ಬ್ಯಾಟ್ಸ್‌ಮನ್‌ಗಳು ಒಟ್ಟಾಗಿ 42 ಗಂಟೆ 43 ನಿಮಿಷಗಳ ಕಾಲ ಬ್ಯಾಟಿಂಗ್ ಮಾಡಿದ್ದಾರೆ. ಈ ಪೈಕಿ ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ.
ವಿರಾಟ್ 14 ಗಂಟೆಗಳಿಗೂ ಹೆಚ್ಚು ಕಾಲ ಏಕಾಂಗಿಯಾಗಿ ಬ್ಯಾಟ್ ಮಾಡಿದರು, ಇದು ಈ ಪಂದ್ಯಾವಳಿಯಲ್ಲಿ ಗರಿಷ್ಠವಾಗಿದೆ. ಭಾರತದ ಆಟಗಾರರ ಪೈಕಿ ನಾಯಕ ರೋಹಿತ್ ಶರ್ಮಾ ಸುದೀರ್ಘ ಬ್ಯಾಟಿಂಗ್ ಮಾಡಿದ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ.

ಇನ್ನು ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಕೆಎಲ್ ರಾಹುಲ್ ಮೂರನೇ ಸ್ಥಾನದಲ್ಲಿದ್ದರೆ, ಶ್ರೇಯಸ್ ಅಯ್ಯರ್ ನಾಲ್ಕನೇ ಸ್ಥಾನದಲ್ಲಿ ಮತ್ತು ಆರಂಭಿಕ ಆಟಗಾರ ಶುಭ್ಮನ್ ಗಿಲ್ ಐದನೇ ಸ್ಥಾನದಲ್ಲಿದ್ದಾರೆ.
ಎಂಟು ಪಂದ್ಯಗಳಲ್ಲಿ ವಿರಾಟ್ ಕೊಹ್ಲಿ 14 ಗಂಟೆ 39 ನಿಮಿಷಗಳ ಕಾಲ ಕ್ರೀಸ್‌ನಲ್ಲಿ ಕಾಲ ಕಳೆದಿದ್ದಾರೆ. ಈ ಅವಧಿಯಲ್ಲಿ ಅವರು 543 ರನ್ ಕಲೆಹಾಕಿದ್ದಾರೆ. ಇದರಲ್ಲಿ ಅವರು 2 ಶತಕಗಳು ಮತ್ತು ನಾಲ್ಕು ಅರ್ಧ ಶತಕಗಳನ್ನು ಬಾರಿಸಿದ್ದಾರೆ. ಈ ವೇಳೆ ಅವರ ಸ್ಟ್ರೈಕ್ ರೇಟ್ 108.60 ಆಗಿದೆ. ಈ ಬಾರಿಯ ವಿಶ್ವಕಪ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರಲ್ಲಿ ಕಿಂಗ್ ಕೊಹ್ಲಿ ಎರಡನೇ ಸ್ಥಾನದಲ್ಲಿದ್ದಾರೆ.
ರೋಹಿತ್ ಶರ್ಮಾ 8 ಪಂದ್ಯಗಳಲ್ಲಿ 8 ಗಂಟೆ 23 ನಿಮಿಷಗಳ ಕಾಲ ಬ್ಯಾಟಿಂಗ್ ಮಾಡಿದ್ದಾರೆ. ಅವರು 122.77ರ ಸ್ಟ್ರೈಕ್ ರೇಟ್‌ನಲ್ಲಿ 442 ರನ್ ಸಿಡಿಸಿದ್ದಾರೆ. ಕೆಎಲ್ ರಾಹುಲ್ 7 ಗಂಟೆ 20 ನಿಮಿಷಗಳ ಕಾಲ ಬ್ಯಾಟ್ ಮಾಡಿ 245 ರನ್ ಗಳಿಸಿದ್ದಾರೆ.
ಶ್ರೇಯಸ್ ಅಯ್ಯರ್ ಒಟ್ಟು 6 ಗಂಟೆ 29 ನಿಮಿಷಗಳನ್ನು ಬ್ಯಾಟ್ ಮಾಡಿದ್ದು, 97.34ರ ಸ್ಟ್ರೈಕ್ ರೇಟ್‌ನಲ್ಲಿ 293 ರನ್‌ಗಳನ್ನು ಬಾರಿಸಿದ್ದರೆ, ಆರಂಭಿಕ ಬ್ಯಾಟರ್ ಶುಭ್ಮನ್ ಗಿಲ್ 5 ಗಂಟೆ 52 ನಿಮಿಷಗಳ ಕಾಲ ಬ್ಯಾಟಿಂಗ್ ಮಾಡಿ 219 ರನ್ ಒಟ್ಟುಗೂಡಿಸಿದ್ದಾರೆ.
ಭಾನುವಾರ, ನವೆಂಬರ್ 12ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರತ ತಂಡವು ನೆದರ್ಲ್ಯಾಂಡ್ಸ್ ವಿರುದ್ಧ 2023ರ ಐಸಿಸಿ ಏಕದಿನ ವಿಶ್ವಕಪ್‌ನ ತಮ್ಮ ಅಂತಿಮ ಲೀಗ್ ಹಣಾಹಣಿಯಲ್ಲಿ ಮುಖಾಮುಖಿಯಾಗಲಿದೆ.