ಲಂಡನ್‌ನಲ್ಲಿ ವಿರಾಟ್ ಕೊಹ್ಲಿ ಬಿಂದಾಸ್ ತಿರುಗಾಟ: ವಿಡಿಯೋ ವೈರಲ್
ಟೀಮ್ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಸದ್ಯ ರಜೆಯ ಮಜೆಯಲ್ಲಿದ್ದಾರೆ. ಅವರು ಈ ವೇಳೆ ಲಂಡನ್‌ನಲ್ಲಿ ಕುಟುಂಬದ ಜೊತೆ ಕಾಲ ಕಳೆಯುತ್ತಿದ್ದಾರೆ. ವಿರಾಟ್ ಕೊಹ್ಲಿಗೆ ಎರಡನೇ ಮಗು ಆದಾಗಿನಿಂದಲೂ ಅವರು ಅಲ್ಲಿಯೇ ವಾಸಿಸುತ್ತಿದ್ದಾರೆ. ಈಗ ವಿರಾಟ್ ಕೊಹ್ಲಿ ಅವರಿಗೆ ಸಂಬಂಧಿಸಿದ ವಿಡಿಯೋ ಒಂದು ಸಾಮಾಜಿಕ ತಾಣದಲ್ಲಿ ಸಖತ್ ವೈರಲ್ ಆಗುತ್ತಿದೆ.
ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟ್ ಆಟಗಾರ ವಿರಾಟ್ ಕೊಹ್ಲಿ, ವೆಸ್ಟ್ ಇಂಡೀಸ್ ಹಾಗೂ ಅಮೆರಿಕದಲ್ಲಿ ನಡೆದ ಟಿ20 ವಿಶ್ವಕಪ್ ಬಳಿಕ ಚುಟುಕು ಫಾರ್ಮೆಟ್‌ಗೆ ವಿದಾಯ ಹೇಳಿದ್ದಾರೆ. ಅವರು ಸದ್ಯ ಏಕದಿನ ಹಾಗೂ ಟೆಸ್ಟ್ ತಂಡದ ಪರ ಮಾತ್ರ ಕಾಣಿಸಿಕೊಳ್ಳಲಿದ್ದಾರೆ. ಬಾಂಗ್ಲಾದೇದ ವಿರುದ್ಧ ಆರಂಭವಾಗಲಿರುವ ಟೆಸ್ಟ್ ಸರಣಿಗೆ ಇವರು ತಂಡ ಸೇರಿಕೊಳ್ಳಲಿದ್ದಾರೆ. ವಿರಾಟ್ ಕೊಹ್ಲಿ ಈಗ ಲಂಡನ್‌ನಲ್ಲಿ ಸುತ್ತಾಡುತ್ತಿರುವುದು ಸಖತ್ ವೈರಲ್ ಆಗುತ್ತಿದೆ.

ಲಂಡನ್‌ನಲ್ಲಿ ಸರಳ ಜೀವನ
ವಿರಾಟ್ ಕೊಹ್ಲಿ ಅವರ ಪತ್ನಿ ಅನುಷ್ಕಾ ಶರ್ಮಾ ಜೊತೆ ಲಂಡನ್‌ನ ಬೀದಿಗಳಲ್ಲಿ ಕಾಣಿಸಿಕೊಂಡಿದ್ದಾರೆ. ವಿಶ್ವದ ಖ್ಯಾತ ಕ್ರಿಕೆಟಿಗರಲ್ಲಿ ಒಬ್ಬರಾಗಿರುವ ಕಿಂಗ್ ಕೊಹ್ಲಿ ಲಂಡನ್‌ನಲ್ಲಿ 'ಕಾಮನ್ ಮ್ಯಾನ್' ಆಗಿ ತಿರುಗಾಡುತ್ತಿದ್ದಾರೆ. ವಿಡಿಯೋದಲ್ಲಿ ಕಿಂಗ್ ಕೊಹ್ಲಿ ಪತ್ನಿ ಅನುಷ್ಕಾ ಜೊತೆ ರಸ್ತೆಯಲ್ಲಿ ನಿಂತಿರುವುದನ್ನು ಕಾಣಬಹುದು.
ಈ ವೇಳೆ ಕೊಹ್ಲಿ ಸರಳವಾದ ಉಡುಗಿನಲ್ಲಿ ಕಾಣಿಸಿಕೊಂಡಿದ್ದಾರೆ. ಸರಳವಾದ ಲೋವರ್ ಮತ್ತು ಟಿ-ಶರ್ಟ್‌ನೊಂದಿಗೆ ಚಪ್ಪಲಿಯನ್ನು ಧರಿಸಿ ಕಾಮನ್ ಮ್ಯಾನ್ ರೀತಿ ಲಂಡನ್‌ನ ರಸ್ತೆಗಳಲ್ಲಿ ತಿರುಗಾಟ ನಡೆಸಿದ್ದಾರೆ. ಕೊಹ್ಲಿ ಒಂದು ಕೈಯಲ್ಲಿ ಮೊಬೈಲ್ ಫೋನ್ ಇದ್ದು, ಇನ್ನೊಂದು ಕೈಯಲ್ಲಿ ನೀರಿನ ಬಾಟಲ್ ಇಟ್ಟುಕೊಂಡಿದ್ದಾರೆ. ಇದೇ ದೃಶ್ಯದಲ್ಲಿ ಅನುಷ್ಕಾ ಜೊತೆ ವಾಮಿಕಾ ಸಹ ಕಾಣಿಸಿಕೊಂಡಿದ್ದಾರೆ. ಆದರೆ ವಿಡಿಯೋದಲ್ಲಿ ವಾಮಿಕಾ ಮುಖ ಕಾಣುತ್ತಿಲ್ಲ.
ವಿಡಿಯೋ ಸಖತ್ ವೈರಲ್
ವಿರಾಟ್ ಕೊಹ್ಲಿ ಭಾರತದಲ್ಲಿ ಸಖತ್ ಫೇಮಸ್.. ಇವರು ಇಲ್ಲಿ ಜನ ಸಾಮಾನ್ಯರಂತೆ ಜೀವಿಸಲು ಆಗುವುದಿಲ್ಲ. ಹೀಗಾಗಿ ಅವರು ಸರಳ ಜೀವನವನ್ನು ನಡೆಸಲು ಬಯಸುತ್ತಾರೆ. ಈ ವಿಡಿಯೋ ಸದ್ಯ ಸಖತ್ ವೈರಲ್ ಆಗುತ್ತಿದೆ. ಆದರೆ ಈ ವಿಡಿಯೋ ಯಾವಗ ಸೆರೆ ಹಿಡಿಯಲಾಗಿದೆ ಎಂಬುದರ ಬಗ್ಗೆ ಇನ್ನು ಸ್ಪಷ್ಟತೆ ಇಲ್ಲ.
ವೆಸ್ಟ್‌ಇಂಡಿಸ್‌ನಲ್ಲಿ ಮುಕ್ತಾಯವಾದ ಟಿ20 ವಿಶ್ವಕಪ್ ಬಳಿಕ ವಿರಾಟ್ ಕೊಹ್ಲಿ ಶ್ರೀಲಂಕಾ ಪ್ರವಾಸದಲ್ಲಿ ಏಕದಿನ ಸರಣಿಯಲ್ಲಿ ಭಾರತ ತಂಡವನ್ನು ಸೇರಿಕೊಂಡಿದ್ದರು. ಈ ವೇಳೆ ಅವರು ಏಕದಿನ ಸರಣಿಯಲ್ಲಿ ರನ್ ಕಲೆ ಹಾಕುವಲ್ಲಿ ಹಿಂದೆ ಬಿದ್ದಿದ್ದರು. ಈ ಸರಣಿಯಲ್ಲಿ ವಿರಾಟ್ ಮೂರು ಪಂದ್ಯಗಳಿಂದ 58 ರನ್ ಮಾತ್ರ ಕಲೆ ಹಾಕಿದ್ದಾರೆ. ಸದ್ಯ ವಿರಾಟ್ ಮತ್ತೆ ವಿಶ್ರಾಂತಿಯಲ್ಲಿದ್ದಾರೆ.
ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅವರಿಗೆ ಬಿಸಿಸಿಐ ಆಯ್ಕೆ ಸಮಿತಿ ದುಲೀಪ್ ಟ್ರೋಫಿಯನ್ನು ಆಡಲು ಸೂಚಿಸಿತ್ತು. ಆದರೆ ಈ ಸ್ಟಾರ್ ಆಟಗಾರರು ಇದಕ್ಕೆ ಒಪ್ಪಿಗೆ ನೀಡಿರಲಿಲ್ಲ. ಇನ್ನು ಇದೇ 19 ರಂದು ಬಾಂಗ್ಲಾದೇಶದ ವಿರುದ್ಧ ನಡೆಯಲಿರುವ ಟೆಸ್ಟ್ ಸರಣಿಯಲ್ಲಿ ಭಾರತ ತಂಡಕ್ಕೆ ಕಮ್ ಬ್ಯಾಕ್ ಮಾಡಲಿದ್ದಾರೆ. ಆದರೆ ಈ ಸರಣಿಗೆ ಇನ್ನು ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿಲ್ಲ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications