Virat Kohli: ಟಿ20 ವಿಶ್ವಕಪ್ ಬಳಿಕ ವಿರಾಟ್ ಕೊಹ್ಲಿ ವಿದಾಯ?: ನಿವೃತ್ತಿ ಮಾತುಗಳನ್ನಾಡಿದ ರನ್ ಮಷಿನ್!
ಮೇ 17 ಶುಕ್ರವಾರ, ಕೆಲ ದಿನಗಳಿಂದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮುಂಬರುವ 2024ರ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಬಳಿಕ ಚುಟುಕು ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಲಿದ್ದಾರೆ ಎಂಬ ವಿಚಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ಇನ್ನೊಂದೆಡೆ ಟೀಮ್ ಇಂಡಿಯಾ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ತಮ್ಮ ಕ್ರಿಕೆಟ್ ವೃತ್ತಿಜೀವನಕ್ಕೆ ತೆರೆ ಎಳೆಯುವ ಬಗ್ಗೆ ಸುಳಿವು ಬಿಟ್ಟು ಕೊಟ್ಟಿದ್ದಾರೆ. ವಿರಾಟ್ ಕೊಹ್ಲಿ ಅವರ ಈ ಹೇಳಿಕೆ ಅಭಿಮಾನಿಗಳಿಗೆ ಶಾಕ್ ನೀಡಿದೆ.

ವೆಸ್ಟ್ ಇಂಡೀಸ್ ಮತ್ತು ಅಮೆರಿಕಾದಲ್ಲಿ ಜೂನ್ 2ರಿಂದ ಆರಂಭವಾಗುತ್ತಿರುವ 2024ರ ಟಿ20 ವಿಶ್ವಕಪ್ ಬಳಿಕ ಚುಟುಕು ಕ್ರಿಕೆಟ್‌ಗೆ ಕೊಹ್ಲಿ ನಿವೃತ್ತಿ ಘೋಷಿಸಲಿದ್ದಾರಾ ಎಂಬ ಸಾಕಷ್ಟು ಪ್ರಶ್ನೆಗಳು ಅಭಿಮಾನಿಗಳನ್ನು ಕಾಡುತ್ತಿವೆ. ಆದರೇ ಈ ಪ್ರಶ್ನೆಗೆ ಸದ್ಯಕ್ಕೆ ಉತ್ತರವಂತೂ ಸಿಕ್ಕಿಲ್ಲ.
ನಿವೃತ್ತಿ ಬಗ್ಗೆ ಮಾತನಾಡಿರುವ ವಿರಾಟ್ ಕೊಹ್ಲಿ ಅವರ ವಿಡಿಯೋವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಂಚಿಕೊಂಡಿದ್ದು, ಇದರಲ್ಲಿ ಕ್ರಿಕೆಟ್ ಬಗ್ಗೆ ಸಾಕಷ್ಟು ಹೇಳಿದ್ದಾರೆ.

ಒಂದು ಬಾರಿ ನಾನು ಕ್ರಿಕೆಟ್ ವೃತ್ತಿಜೀವನಕ್ಕೆ ನಿವೃತ್ತಿ ಘೋಷಿಸಿದರೆ, ಆ ಬಳಿಕ ಕೆಲ ಸಮಯ ನಾನೆಲ್ಲೂ ಕಾಣಿಸಿಕೊಳ್ಳುವುದಿಲ್ಲ. ನಾನು ನಿವೃತ್ತಿಯ ದಿನದವರೆಗೂ ನನ್ನಿಂದ ಸಾಧ್ಯವಾದಷ್ಟು ತಂಡಕ್ಕೆ ಕೊಡುಗೆ ನೀಡುತ್ತೇನೆ. ಯಾವುದೇ ಕನಸು ಕೈಗೂಡದೇ ಅನಿರೀಕ್ಷಿತವಾಗಿ ಕ್ರಿಕೆಟ್ ವೃತ್ತಿಜೀವನಕ್ಕೆ ವಿದಾಯ ಹೇಳಲಾರೆ ಎಂದು ವಿರಾಟ್ ಕೊಹ್ಲಿ ತಿಳಿಸಿದ್ದಾರೆ.
ವಿರಾಟ್ ಕೊಹ್ಲಿ ಅವರ ಈ ಹೇಳಿಕೆಗಳನ್ನು ಗಮನಿಸಿದರೆ, ಟಿ20 ವಿಶ್ವಕಪ್ ಬಳಿಕ ಚುಟುಕು ಕ್ರಿಕೆಟ್‌ಗೆ ಕೊಹ್ಲಿ ವಿದಾಯ ಹೇಳುವ ಸಾಧ್ಯತೆ ಹೆಚ್ಚಿದೆ. 35 ವರ್ಷದ ಕೊಹ್ಲಿ ಉತ್ತಮ ಫಿಟ್‌ನೆಸ್ ಹೊಂದಿದ್ದು, ಇನ್ನು ಸಾಕಷ್ಟು ಕ್ರಿಕೆಟ್ ಆಡುವ ಸಾಮರ್ಥ್ಯವಿದೆ. ಸುಮಾರು 3-4 ವರ್ಷಗಳ ಕಾಲ ಕ್ರಕೆಟ್ ಮೈದಾನದಲ್ಲಿ ಕೊಹ್ಲಿ ಕಾಣಿಸಿಕೊಳ್ಳಬಹುದು.
ಸಾಮಾಜಿಕ ಜಾಲತಾಣಗಳಲ್ಲಿ ನಿವೃತ್ತಿ ಬಗ್ಗೆ ಕೊಹ್ಲಿ ಆಡಿರುವ ಮಾತುಗಳನ್ನು ಕೇಳಿ ಅಭಿಮಾನಿಗಳು ದುಃಖಿತರಾಗಿದ್ದಾರೆ. ಕ್ರಿಕೆಟ್‌ಗೆ ವಿದಾಯ ಹೇಳಿದ ನಂತರ ನಾನು ಎಲ್ಲಿಯೂ ಕಾಣಿಸಿಕೊಳ್ಳುವುದಿಲ್ಲ ಎಂದಿರುವ ಕೊಹ್ಲಿ ಮಾತು ಅಭಿಮಾನಿಗಳ ಕಣ್ಣಲ್ಲಿ ನೀರು ತರಿಸಿದೆ.
ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಪರ 117 ಅಂತರಾಷ್ಟ್ರೀಯ ಟಿ20 ಪಂದ್ಯಗಳನ್ನಾಡಿದ್ದು, 1 ಶತಕ ಹಾಗೂ 37 ಅರ್ಧಶತಕಗಳೊಂದಿಗೆ ಒಟ್ಟು 4037 ರನ್ ಗಳಿಸಿದ್ದಾರೆ. ಪ್ರಸ್ತುತ ನಡೆಯುತ್ತಿರುವ ಐಪಿಎಲ್‌ನಲ್ಲಿ ಆರ್‌ಸಿಬಿ ಪರ ವಿರಾಟ್ ಕೊಹ್ಲಿ ಅಬ್ಬರ ಆಟವಾಡುತ್ತಿದ್ದಾರೆ. ಆಡಿರುವ 13 ಪಂದ್ಯಗಳಿಂದ ಕೊಹ್ಲಿ 66.10 ಸರಾಸರಿಯಲ್ಲಿ 661 ರನ್ ಹೊಡೆದಿದ್ದಾರೆ. ಇದರಲ್ಲಿ ಒಂದು ಶಕತ ಕೂಡ ಬಾರಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications