Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ICC rankings: ಒಡಿಐ ಅಗ್ರಸ್ಥಾನದಲ್ಲೇ ವಿರಾಟ್ ಕೊಹ್ಲಿ, ಬೂಮ್ರಾ ಕುಸಿತ

Virat Kohli stays on top of ODI rankings, Jasprit Bumrah slips to fourth

ನವದೆಹಲಿ: ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಏಕದಿನ ರ್‍ಯಾಂಕಿಂಗ್‌ನಲ್ಲಿ ಟೀಮ್ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ನಂ.1 ಸ್ಥಾನದಲ್ಲೇ ಮುಂದುವರೆದಿದ್ದಾರೆ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ಕೊಹ್ಲಿ ಪ್ರದರ್ಶನ ಅವರು ಅಗ್ರ ಸ್ಥಾನದಲ್ಲೇ ನಿಲ್ಲುವಂತೆ ನೆರವು ನೀಡಿದೆ.

ಬ್ಯಾಟಿಂಗ್‌ ರ್‍ಯಾಂಕಿಂಗ್‌ನಲ್ಲಿ ಅಗ್ರ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ ಖಾತೆಯಲ್ಲೀಗ 857 ಅಂಕಗಳಿವೆ. ದ್ವಿತೀಯ ಸ್ಥಾನದಲ್ಲಿರುವ ಪಾಕಿಸ್ತಾನದ ಬಾಬರ್ ಅಝಾಮ್ 837 ಅಂಕ ಕಲೆ ಹಾಕಿದ್ದಾರೆ. ತೃತೀಯ ಸ್ಥಾನದಲ್ಲಿ ರೋಹಿತ್ ಶರ್ಮಾ ಇದ್ದು, 825 ಪಾಯಿಂಟ್ಸ್‌ ಗಳಿಸಿದ್ದಾರೆ. ಕೊಹ್ಲಿ ಸದ್ಯ ಐಪಿಎಲ್‌ಗೆ ಸಿದ್ಧರಾಗುತ್ತಿದ್ದಾರೆ.

ಬ್ಯಾಟಿಂಗ್‌ ರ್‍ಯಾಂಕಿಂಗ್‌ನಲ್ಲಿ 4ನೇ ಸ್ಥಾನದಲ್ಲಿ ನ್ಯೂಜಿಲೆಂಡ್‌ನ ರಾಸ್ ಟೇಲರ್, 5ನೇ ಸ್ಥಾನದಲ್ಲಿ ಆಸ್ಟ್ರೇಲಿಯಾದ ಆ್ಯರನ್ ಫಿಂಚ್ ಇದ್ದಾರೆ. ಏಕದಿನ ಬೌಲಿಂಗ್‌ ರ್‍ಯಾಂಕಿಂಗ್‌ನಲ್ಲಿ ನ್ಯೂಜಿಲೆಂಡ್‌ನ ಟ್ರೆಂಟ್ ಬೌಲ್ಟ್, ಅಫ್ಘಾನಿಸ್ತಾನದ ಮುಜೀಬ್ ಉರ್ ರಹ್ಮಾನ್, ನ್ಯೂಜಿಲೆಂಡ್‌ನ ಮ್ಯಾಟ್ ಹೆನ್ರಿ ಕ್ರಮವಾಗಿ ಮೊದಲ ಮೂರು ಸ್ಥಾನ ಪಡೆದಿದ್ದಾರೆ. ಭಾರತದ ವೇಗಿ ಜಸ್‌ಪ್ರೀತ್‌ ಬೂಮ್ರಾ 4ನೇ ಸ್ಥಾನಕ್ಕೆ ಕುಸಿದಿದ್ದಾರೆ.

ಏಕದಿನ ಆಲ್ ರೌಂಡರ್‌ಗಳ ರ್‍ಯಾಂಕಿಂಗ್‌ನಲ್ಲಿ ಬಾಂಗ್ಲಾದೇಶದ ಶಕೀಬ್ ಅಲ್ ಹಸನ್, ಇಂಗ್ಲೆಂಡ್‌ನ ಬೆನ್ ಸ್ಟೋಕ್ಸ್, ಅಫ್ಘಾನಿಸ್ತಾನದ ಮೊಹಮ್ಮದ್ ನಬಿ ಆರಂಭಿಕ ಮೂರು ಸ್ಥಾನಗಳಲ್ಲಿ ಇದ್ದಾರೆ. ದೇಶಗಳ ಒಡಿಐ ಶ್ರೇಯಾಂಕದಲ್ಲಿ ಇಂಗ್ಲೆಂಡ್, ಭಾರತ ಮತ್ತು ನ್ಯೂಜಿಲೆಂಡ್ ಮೊದಲ ಮೂರು ಸ್ಥಾನಗಳಲ್ಲಿವೆ.

Story first published: Wednesday, March 31, 2021, 23:29 [IST]
Other articles published on Mar 31, 2021
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+