For Quick Alerts
ALLOW NOTIFICATIONS  
For Daily Alerts
 

ವಿರಾಟ್ ಕೊಹ್ಲಿ ನಿರ್ಧಾರಕ್ಕೆ ರೋಹಿತ್ ಶರ್ಮಾ 'ಶಾಕ್': ಜಾಲತಾಣದಲ್ಲಿ ಶರ್ಮಾ ಹೇಳಿದ್ದೇನು!

Virat Kohli step down India Test captaincy: Rohit Sharma Shocked by Kohli decision

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ 1-2 ಅಂತರದಿಂದ ಸರಣಿಯನ್ನು ಕಳೆದುಕೊಂಡ ಮರುದಿನವೇ ಟೀಮ್ ಇಂಡಿಯಾ ಟೆಸ್ಟ್ ತಂಡದ ನಾಯಕತ್ವವನ್ನು ಕೂಡ ವಿರಾಟ್ ಕೊಹ್ಲಿ ತೊರೆದಿದ್ದಾರೆ. ವಿರಾಟ್ ಕೊಹ್ಲಿಯ ಈ ದಿಢೀರ್ ನಿರ್ಧಾರ ಕ್ರಿಕೆಟ್ ಪ್ರೇಮಿಗಳಿಗೆ ಮಾತ್ರವಲ್ಲ ಟೀಮ್ ಇಂಡಿಯಾದ ಆಟಗಾರರಿಗೂ ಆಘಾತ ನಿಡಿದೆ ಎಂಬುದು ನಿಜ. ಭಾರತೀಯ ಸೀಮಿತ ಓವರ್‌ಗಳ ತಂಡದ ನಾಯಕ ರೋಹಿತ್ ಶರ್ಮಾ ವಿರಾಟ್ ಕೊಹ್ಲಿ ನಿರ್ಧಾರಕ್ಕೆ ಆಘಾತವನ್ನು ವ್ಯಕ್ತಪಡಿಸಿದ್ದಾರೆ.

ವಿರಾಟ್ ಕೊಹ್ಲಿ ಶನಿವಾರ ಸಂಜೆ ಸಾಮಾಜಿಕ ಜಾಲತಾಣದಲ್ಲಿ ಟೆಸ್ಟ್ ನಾಯಕತ್ವವನ್ನು ತೊರೆಯುವ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಕಳೆದ ಏಳು ವರ್ಷಗಳಲ್ಲಿ ಟೀಮ್ ಇಡಿಯಾವನ್ನು ಮುನ್ನಡೆಸಿದ ರೀತಿಯಲ್ಲಿ ಮುಂದಿನ ದಿನಗಳಲ್ಲಿ ಮುಂದಿನ ದಿನಗಳಲ್ಲಿ ಮುನ್ನಡೆಸಲು ಸಾಧ್ಯವಾಗದಿರಬಹುದು ಎಂಬ ಭಾವನೆಯನ್ನು ವ್ಯಕ್ತಪಡಿಸಿ ನಾಯಕತ್ವವನ್ನು ತೊರೆಯಲು ನಿರ್ಧರಿಸಿರುವುದಾಗಿ ಕೊಹ್ಲಿ ಹೇಳಿದ್ದಾರೆ. ಇನ್ನು ಬಿಸಿಸಿಐ ಕೂಡ ವಿರಾಟ್ ಕೊಹ್ಲಿಯ ಈ ನಿರ್ಧಾರದ ಬಗ್ಗೆ ಪ್ರತಿಕ್ರಿಯಿಸಿದ್ದು ಇದು ವಿರಾಟ್ ಕೊಹ್ಲಿಯ ವೈಯಕ್ತಿಕವಾದ ನಿರ್ಧಾರವಾಗಿದ್ದು ಈ ಬಗ್ಗೆ ಯಾರೂ ಕೂಡ ಅವರಿಗೆ ಒತ್ತಡವನ್ನು ಹೇರಿಲ್ಲ ಎಂದಿದೆ.

ಇನ್ನು ವಿರಾಟ್ ಕೊಹ್ಲಿ ನಾಯಕತ್ವ ತೊರೆಯುವ ನಿರ್ಧಾರವನ್ನು ಪ್ರಕಟಿಸಿದ ಬಳಿಕ ರೋಹಿತ್ ಶರ್ಮಾ ಇನ್ಸ್ಟಾಗ್ರಾಮ್‌ನಲ್ಲಿ ಆಘಾತವನ್ನು ವ್ಯಕ್ತಪಡಿಸಿದ್ದಾರೆ. "ಆಘಾತಗೊಂಡಿದ್ದೇನೆ!! ಆದರೆ ಭಾರತೀಯ ನಾಯಕನಾಗಿ ಯಶಸ್ವಿಯಾಗಿದ್ದಕ್ಕೆ ಅಭಿನಂದನೆಗಳು. ಭವಿಷ್ಯಕ್ಕಾಗಿ ತುಂಬಾ ತುಂಬಾ ಶುಭಕಾಮನೆಗಳು" ಎಂದು ರೋಹಿತ್ ಶರ್ಮಾ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ.

ರೋಹಿತ್ ಶರ್ಮಾ ಹೆಗಲಿಗೇರುತ್ತಾ ನಾಯಕತ್ವ: ಟೀಮ್ ಇಂಡಿಯಾದ ಸೀಮಿತ ಓವರ್‌ಗಳ ನಾಯಕತ್ವವನ್ನು ಸಂಪೂರ್ಣವಾಗಿ ರೋಹಿತ್ ಶರ್ಮಾ ಈಗಾಗಲೇ ವಹಿಸಿಕೊಂಡಿದ್ದಾರೆ. ಮತ್ತೊಂದೆಡೆ ಟೆಸ್ಟ್ ತಂಡದ ಉಪನಾಯಕನ ಸ್ಥಾನ ಕೂಡ ರೋಹಿತ್ ಶರ್ಮಾ ಹೆಗಲಿಗೆ ಬಿದ್ದಿದೆ. ಹೀಗಾಗಿ ಟೀಮ್ ಇಂಡಿಯಾ ಟೆಸ್ಟ್ ತಂಡದ ನಾಯಕತ್ವ ರೋಹಿತ್ ಶರ್ಮಾ ಹೆಗಲೇರುವುದು ಬಹುತೇಕ ಖಚಿತ ಎನ್ನಲಾಗಿದೆ. ಆದರೆ ಬಿಸಿಸಿಐ ಈ ಬಗ್ಗೆ ಇನ್ನಷ್ಟೇ ನಿರ್ಧಾರವನ್ನು ತೆಗೆದುಕೊಳ್ಳಬೇಕಿದೆ. ಕನಿಷ್ಠ 15 ದಿನಗಳ ಬಳಿಕವೇ ಬಿಸಿಸಿಐ ಈ ಬಗ್ಗೆ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ.

ಯಾರೆಲ್ಲಾ ನಾಯಕತ್ವದ ರೇಸ್‌ನಲ್ಲಿದ್ದಾರೆ: ಇನ್ನು ಟೀಮ್ ಇಂಡಿಯಾ ಟೆಸ್ಟ್ ತಂಡದ ನಾಯಕತ್ವದ ರೇಸ್‌ನಲ್ಲಿ ಪ್ರಮುಖವಾಗಿ ಮೂರು ಹೆಸರುಗಳು ಬಲವಾಗಿ ಕೇಳಿ ಬರುತ್ತಿದೆ. ಸೀನಿತ ಓವರ್‌ಗಳ ನಾಯಕ ರೋಹಿತ್ ಶರ್ಮಾ ಹೆಸರು ಸಹಜವಾಗಿಯೇ ಚರ್ಚೆಯಲ್ಲಿದ್ದರೆ ದಕ್ಷಿಣ ಆಪ್ರಿಕಾ ಪ್ರವಾಸದಲ್ಲಿ ಭಾರತೀಯ ತಂಡದ ಉಪನಾಯಕನಾಗಿ ಜವಾಬ್ಧಾರಿ ವಹಿಸಿಕೊಂಡ ಕೆಎಲ್ ರಾಹುಲ್ ಕೂಡ ಭಾರತೀಯ ತಮಡದ ನಾಯಕನ ಸ್ಥಾನದ ರೇಸ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ಯುವ ಆಟಗಾರ ರಿಷಭ್ ಪಂತ್ ಹೆಸರು ಕೂಡ ಈ ರೇಸ್‌ನಲ್ಲಿ ಕಾಣಿಸಿಕೊಳ್ಳುವ ಮೂಲಕ ಅಚ್ಚರಿ ಮೂಡಿಸಿದೆ.

Story first published: Sunday, January 16, 2022, 12:10 [IST]
Other articles published on Jan 16, 2022
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+