ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಟೆಸ್ಟ್ ನಾಯಕತ್ವಕ್ಕೆ ಕೊಹ್ಲಿ ವಿದಾಯ: ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಗೆದ್ದಿದ್ದೆಷ್ಟು, ಸೋತಿದ್ದೆಷ್ಟು?

Virat Kohli steps down as Team India test captain: winning percentage of Kohli as test captain

ಕಳೆದ ವರ್ಷವಷ್ಟೇ ಭಾರತ ಏಕದಿನ ಮತ್ತು ಟಿ ಟ್ವೆಂಟಿ ತಂಡಗಳ ನಾಯಕತ್ವವನ್ನು ಕಳೆದುಕೊಂಡಿದ್ದ ವಿರಾಟ್ ಕೊಹ್ಲಿ ಇದೀಗ ಭಾರತ ಟೆಸ್ಟ್ ತಂಡದ ನಾಯಕತ್ವಕ್ಕೂ ಕೂಡ ರಾಜಿನಾಮೆಯನ್ನು ನೀಡಿದ್ದಾರೆ. ಹೌದು, ಮೊದಲಿಗೆ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವಕ್ಕೆ ಸ್ವಇಚ್ಛೆಯಿಂದ ರಾಜೀನಾಮೆಯನ್ನು ನೀಡಿದ ವಿರಾಟ್ ಕೊಹ್ಲಿ ನಂತರ ಭಾರತ ಏಕದಿನ ತಂಡದ ನಾಯಕತ್ವದಿಂದ ಕೆಳಗಿಳಿಸಲ್ಪಟ್ಟರು. ಸದ್ಯ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡಿರುವ ಟೀಮ್ ಇಂಡಿಯಾವನ್ನು ಪ್ರಕಟಿಸಿದ ವೇಳೆಯೇ ಭಾರತ ಏಕದಿನ ತಂಡದ ನಾಯಕತ್ವವನ್ನು ರೋಹಿತ್ ಶರ್ಮಾ ವಹಿಸಿಕೊಳ್ಳಲಿದ್ದಾರೆ ಎಂಬ ಸ್ಫೋಟಕ ಸುದ್ದಿಯನ್ನೂ ಸಹ ಬಿಸಿಸಿಐ ಹೊರಡಿಸಿತ್ತು.

ದ.ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ ಸೋತ ಭಾರತ: ಟೀಮ್ ಇಂಡಿಯಾ ಕಾಲೆಳೆದು ಕೆಂಗಣ್ಣಿಗೆ ಗುರಿಯಾದ ಎಬಿಡಿ!ದ.ಆಫ್ರಿಕಾ ವಿರುದ್ಧ ಟೆಸ್ಟ್ ಸರಣಿ ಸೋತ ಭಾರತ: ಟೀಮ್ ಇಂಡಿಯಾ ಕಾಲೆಳೆದು ಕೆಂಗಣ್ಣಿಗೆ ಗುರಿಯಾದ ಎಬಿಡಿ!

ಹೀಗೆ ಭಾರತ ಏಕದಿನ ತಂಡದ ನಾಯಕತ್ವದಿಂದ ಕೆಳಗಿಳಿಸಲ್ಪಟ್ಟ ವಿರಾಟ್ ಕೊಹ್ಲಿ ದಕ್ಷಿಣ ಆಫ್ರಿಕಾ ಪ್ರವಾಸಕ್ಕೂ ಮುನ್ನ ನಡೆಸಿದ ಮಾಧ್ಯಮಗೋಷ್ಠಿಯೊಂದರಲ್ಲಿ ನಾಯಕತ್ವದ ವಿವಾದದ ಕುರಿತಾಗಿ ಬಿಸಿಸಿಐಗೆ ಪರೋಕ್ಷವಾಗಿ ಟಾಂಗ್ ನೀಡಿದ್ದರು. ಮೊದಲಿಗೆ ಸೌರವ್ ಗಂಗೂಲಿ ವಿರಾಟ್ ಕೊಹ್ಲಿ ಭಾರತ ಟಿ ಟ್ವೆಂಟಿ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಲು ಮುಂದಾದಾಗ ಬಿಸಿಸಿಐ ವಿರೋಧ ವ್ಯಕ್ತಪಡಿಸಿತ್ತು ಎಂಬ ಹೇಳಿಕೆಯನ್ನು ನೀಡಿದ್ದರು. ಆದರೆ ವಿರಾಟ್ ಕೊಹ್ಲಿ ಮಾಧ್ಯಮಗೋಷ್ಠಿಯಲ್ಲಿ ನಾನು ಭಾರತ ಟಿ ಟ್ವೆಂಟಿ ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡಲು ಮುಂದಾದಾಗ ಬಿಸಿಸಿಐ ಯಾವುದೇ ವಿರೋಧವನ್ನು ವ್ಯಕ್ತಪಡಿಸಲಿಲ್ಲ ಎಂದು ಹೇಳಿ ಗಂಗೂಲಿ ಹೇಳಿಕೆಯನ್ನು ತಳ್ಳಿಹಾಕಿದರು.

ಪ್ರೋ ಕಬಡ್ಡಿ ಲೀಗ್ 8: ಗುಜರಾತ್ ವಿರುದ್ಧ ಗೆದ್ದು ಅಗ್ರಸ್ಥಾನಕ್ಕೇರಿದ ಬೆಂಗಳೂರು ಬುಲ್ಸ್ಪ್ರೋ ಕಬಡ್ಡಿ ಲೀಗ್ 8: ಗುಜರಾತ್ ವಿರುದ್ಧ ಗೆದ್ದು ಅಗ್ರಸ್ಥಾನಕ್ಕೇರಿದ ಬೆಂಗಳೂರು ಬುಲ್ಸ್

ಹೀಗೆ ಟಿ ಟ್ವೆಂಟಿ ಮತ್ತು ಏಕದಿನ ಎರಡೂ ತಂಡಗಳ ನಾಯಕತ್ವವನ್ನು ಕಳೆದುಕೊಂಡಿದ್ದ ವಿರಾಟ್ ಕೊಹ್ಲಿ ಇತ್ತೀಚೆಗಷ್ಟೇ ಮುಕ್ತಾಯಗೊಂಡ ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿಯಲ್ಲಿ ಗೆಲುವು ಸಾಧಿಸಿ ಪ್ರತ್ಯುತ್ತರವನ್ನು ನೀಡಲಿದ್ದಾರೆ ಎಂದು ವಿರಾಟ್ ಕೊಹ್ಲಿ ಅಭಿಮಾನಿಗಳು ಹಾಗೂ ಕೆಲ ಮಾಜಿ ಕ್ರಿಕೆಟಿಗರು ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೆ ಈ ನಿರೀಕ್ಷೆಗಳನ್ನು ಹುಸಿಗೊಳಿಸಿದ ಕೊಹ್ಲಿ ನಾಯಕತ್ವದ ಟೀಮ್ ಇಂಡಿಯಾ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಹೀನಾಯವಾಗಿ ಸೋತಿತು.

ಟೆಸ್ಟ್ ನಾಯಕತ್ವಕ್ಕೆ ರಾಜೀನಾಮೆ ಸಲ್ಲಿಸಿದ ಕೊಹ್ಲಿ

ಟೆಸ್ಟ್ ನಾಯಕತ್ವಕ್ಕೆ ರಾಜೀನಾಮೆ ಸಲ್ಲಿಸಿದ ಕೊಹ್ಲಿ

ಈ ಸೋಲಿನ ಬೆನ್ನಲ್ಲೇ ಇದೀಗ ಕೊಹ್ಲಿ ಅಭಿಮಾನಿಗಳಿಗೆ ಮತ್ತೊಂದು ಕಹಿ ಸುದ್ದಿ ಹೊರಬಂದಿದ್ದು, ವಿರಾಟ್ ಕೊಹ್ಲಿ ಟೆಸ್ಟ್ ನಾಯಕತ್ವಕ್ಕೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಇಂದು ( ಜನವರಿ 15 ) ಸಾಮಾಜಿಕ ಜಾಲತಾಣದಲ್ಲಿ ರಾಜೀನಾಮೆ ನೀಡುತ್ತಿರುವುದರ ಕುರಿತಾಗಿ ವಿಶೇಷ ಪತ್ರವೊಂದನ್ನು ಹಂಚಿಕೊಂಡಿರುವ ವಿರಾಟ್ ಕೊಹ್ಲಿ ಎಲ್ಲ ಮಾದರಿಗಳ ನಾಯಕತ್ವಕ್ಕೆ ವಿದಾಯ ಹೇಳಿದ್ದಾರೆ. ಇದೇ ವೇಳೆ ವಿರಾಟ್ ಕೊಹ್ಲಿ ಟೆಸ್ಟ್ ನಾಯಕನಾಗಿ ಎಷ್ಟು ಪಂದ್ಯಗಳಲ್ಲಿ ಜಯಸಾಧಿಸಿದ್ದಾರೆ ಮತ್ತು ಈ ಗೆಲುವಿನ ಶೇಕಡಾಂಶವನ್ನು ಎಷ್ಟು ಹೊಂದಿದ್ದಾರೆ ಎಂಬುದರ ಕುರಿತು ಚರ್ಚೆ ಆಗುತ್ತಿದೆ.

ಕೊಹ್ಲಿ ನಾಯಕತ್ವದಲ್ಲಿ ಗೆದ್ದದ್ದೆಷ್ಟು?

ಕೊಹ್ಲಿ ನಾಯಕತ್ವದಲ್ಲಿ ಗೆದ್ದದ್ದೆಷ್ಟು?

ಇನ್ನು ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಟೀಮ್ ಇಂಡಿಯಾ ಒಟ್ಟು 68 ಟೆಸ್ಟ್ ಪಂದ್ಯಗಳನ್ನಾಡಿದ್ದು, 40 ಟೆಸ್ಟ್ ಪಂದ್ಯಗಳಲ್ಲಿ ಗೆದ್ದು, 17 ಟೆಸ್ಟ್ ಪಂದ್ಯಗಳಲ್ಲಿ ಸೋತು, 11 ಪಂದ್ಯಗಳನ್ನು ಡ್ರಾ ಮಾಡಿಕೊಂಡಿದೆ. ಈ ಮೂಲಕ ವಿರಾಟ್ ಕೊಹ್ಲಿ ನಾಯಕತ್ವದ ಶೇಕಡಾ 58.82ರಷ್ಟು ಟೆಸ್ಟ್ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಜಯ ಸಾಧಿಸಿದ್ದರೆ, 25ರಷ್ಟು ಪಂದ್ಯಗಳಲ್ಲಿ ಸೋತಿದೆ.

Virat Kohli ನಿರ್ಧಾರದಿಂದ ಆಘಾತಗೊಂಡ Rohit Sharma ಹೇಳಿದ್ದೇನು? | Oneindia Kannada
ಟೆಸ್ಟ್ ನಾಯಕನಾಗಿ ಅತಿ ಹೆಚ್ಚು ಪಂದ್ಯಗಳನ್ನಾಡಿರುವ ಏಷ್ಯಾದ ಆಟಗಾರ

ಟೆಸ್ಟ್ ನಾಯಕನಾಗಿ ಅತಿ ಹೆಚ್ಚು ಪಂದ್ಯಗಳನ್ನಾಡಿರುವ ಏಷ್ಯಾದ ಆಟಗಾರ

ಇನ್ನು ನಾಯಕನಾಗಿ 68 ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿರುವ ವಿರಾಟ್ ಕೊಹ್ಲಿ, ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ನಾಯಕನಾಗಿ ಮುನ್ನಡೆಸಿದ ಏಷ್ಯಾದ ಆಟಗಾರ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ. ಅಷ್ಟೇ ಅಲ್ಲದೇ ಟೀಮ್ ಇಂಡಿಯಾವನ್ನು ಟೆಸ್ಟ್ ಪಂದ್ಯಗಳಲ್ಲಿ ಅತಿ ಹೆಚ್ಚು ಬಾರಿ ಗೆಲ್ಲಿಸಿದ ನಾಯಕ ಎಂಬ ಸಾಧನೆಯನ್ನು ಕೂಡ ಕೊಹ್ಲಿ ತಮ್ಮ ಹೆಸರಿನಲ್ಲಿ ಹೊಂದಿದ್ದಾರೆ.

Story first published: Saturday, January 15, 2022, 20:06 [IST]
Other articles published on Jan 15, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X