ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

Ind Vs Aus T20: ರಾಹುಲ್ ದ್ರಾವಿಡ್ ದಾಖಲೆಯನ್ನು ಮುರಿದ ವಿರಾಟ್ ಕೊಹ್ಲಿ

ಹಿರಿಯ ಬ್ಯಾಟರ್ ವಿರಾಟ್ ಕೊಹ್ಲಿ ಸೆಪ್ಟೆಂಬರ್ 25 ರಂದು ಭಾನುವಾರ, ಭಾರತದ ಮಾಜಿ ಕ್ರಿಕೆಟಿಗ ರಾಹುಲ್ ದ್ರಾವಿಡ್ ಅವರ ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಎರಡನೇ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಹಿಂದಿಕ್ಕಿದ್ದಾರೆ.

ವಿರಾಟ್ ಕೊಹ್ಲಿ ಹೈದರಾಬಾದ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ನಡೆದ ಮೂರನೇ ಟಿ20 ಪಂದ್ಯದಲ್ಲಿ 48 ಎಸೆತಗಳಲ್ಲಿ 63 ರನ್ ಗಳಿಸಿ ತಂಡವನ್ನು ಗೆಲುವಿನ ಸನಿಹಕ್ಕೆ ತಂದ ವೇಳೆಯೇ, ಈ ಮೈಲಿಗಲ್ಲನ್ನು ಸಾಧಿಸಿದರು.

ದೀಪ್ತಿ ಶರ್ಮಾ ರನ್ ಔಟ್ ವಿವಾದ: MCCಯಿಂದ ಹೊರಬಿತ್ತು ಮಹತ್ವದ ಹೇಳಿಕೆ; ಇಂಗ್ಲೆಂಡ್‌ಗೆ ಮುಖಭಂಗದೀಪ್ತಿ ಶರ್ಮಾ ರನ್ ಔಟ್ ವಿವಾದ: MCCಯಿಂದ ಹೊರಬಿತ್ತು ಮಹತ್ವದ ಹೇಳಿಕೆ; ಇಂಗ್ಲೆಂಡ್‌ಗೆ ಮುಖಭಂಗ

ಆಸ್ಟ್ರೇಲಿಯಾ ವಿರುದ್ಧದ ಟಿ20 ನಿರ್ಣಾಯಕ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದರು. ತಮ್ಮ ಅರ್ಧಶತಕದಲ್ಲಿ ಅವರು ನಾಲ್ಕು ಸಿಕ್ಸರ್ ಮತ್ತು ಮೂರು ಬೌಂಡರಿಗಳನ್ನು ಹೊಡೆದರು.

ವಿರಾಟ್ ಕೊಹ್ಲಿ ಮೂರನೇ ವಿಕೆಟ್‌ಗೆ ಸೂರ್ಯಕುಮಾರ್ ಯಾದವ್ ಅವರೊಂದಿಗೆ 104 ರನ್‌ಗಳ ಮಹತ್ವದ ಜೊತೆಯಾಟವನ್ನು ಆಡಿದರು. ಇವರಿಬ್ಬರೂ ಉತ್ತಮ ಬ್ಯಾಟಿಂಗ್ ಮಾಡುವ ಮೂಲಕ ಟೀಂ ಇಂಡಿಯಾವನ್ನು ಗೆಲುವಿನ ಸನಿಹಕ್ಕೆ ತಂದರು.

ಮೊದಲೆರಡು ಪಂದ್ಯಗಳಲ್ಲಿ ರನ್ ಗಳಿಸಲು ವಿಫಲವಾಗಿದ್ದ ವಿರಾಟ್ ಕೊಹ್ಲಿ ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದರು.

ದ್ರಾವಿಡ್‌ರನ್ನು ಹಿಂದಿಕ್ಕಿದ ವಿರಾಟ್ ಕೊಹ್ಲಿ

ದ್ರಾವಿಡ್‌ರನ್ನು ಹಿಂದಿಕ್ಕಿದ ವಿರಾಟ್ ಕೊಹ್ಲಿ

ತಮ್ಮ ಅಂತರಾಷ್ಟ್ರೀಯ ವೃತ್ತಿಜೀವನದಲ್ಲಿ 24,078 ರನ್‌ ಗಳಿಸುವ ಮೂಲಕ ವಿರಾಟ್ ಕೊಹ್ಲಿ ರಾಹುಲ್ ದ್ರಾವಿಡ್‌ರನ್ನು ಹಿಂದಿಕ್ಕಿದರು. ದ್ರಾವಿಡ್ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 24064 ರನ್‌ ಗಳಿಸಿದ್ದಾರೆ.

ಭಾರತದ ಪರವಾಗಿ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದವರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಎರಡನೇ ಸ್ಥಾನಕ್ಕೆ ಜಿಗಿದಿದ್ದಾರೆ. ಕ್ರಿಕೆಟ್ ಐಕಾನ್ ಸಚಿನ್ ತೆಂಡೂಲ್ಕರ್ (34,357) ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ್ದಾರೆ.

ಒಟ್ಟಾರೆಯಾಗಿ ಪಟ್ಟಿಯಲ್ಲಿ ಕುಮಾರ ಸಂಗಕ್ಕಾರ (ಶ್ರೀಲಂಕಾ), ರಿಕಿ ಪಾಂಟಿಂಗ್ (ಆಸ್ಟ್ರೇಲಿಯಾ), ಮಹೇಲಾ ಜಯವರ್ಧನಾ (ಎಸ್‌ಎಲ್) ಮತ್ತು ಜಾಕ್ವೆಸ್ ಕಾಲಿಸ್ (ದಕ್ಷಿಣ ಆಫ್ರಿಕಾ) ನಂತರದ ಸ್ಥಾನದಲ್ಲಿದ್ದಾರೆ.

ಟೀಂ ಇಂಡಿಯಾದಲ್ಲಿ ತನ್ನ ಪಾತ್ರವೇನು ಎನ್ನುವ ಬಗ್ಗೆ ಮಾತನಾಡಿದ ದಿನೇಶ್ ಕಾರ್ತಿಕ್

 ಟಿ20 ಕ್ರಿಕೆಟ್‌ನಲ್ಲಿ 33ನೇ ಅರ್ಧಶತಕ

ಟಿ20 ಕ್ರಿಕೆಟ್‌ನಲ್ಲಿ 33ನೇ ಅರ್ಧಶತಕ

ಆಸ್ಟ್ರೇಲಿಯಾ ವಿರುದ್ಧದ ಸರಣಿಯ 3ನೇ ಟಿ20 ಪಂದ್ಯದಲ್ಲಿ ಕೆಎಲ್ ರಾಹುಲ್, ರೋಹಿತ್ ಶರ್ಮಾ ಬೇಗನೆ ಔಟಾದ ನಂತರ ವಿರಾಟ್ ಕೊಹ್ಲಿ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು. ನಿಧಾನಗತಿಯಲ್ಲಿ ಇನ್ನಿಂಗ್ಸ್ ಆರಂಭಿಸಿದ ವಿರಾಟ್ ಕೊಹ್ಲಿ ನಂತರ ಬೌಂಡರಿ ಹೊಡೆಯಲು ಆರಂಭಿಸಿದರು. ಒಂದೆಡೆ ಸೂರ್ಯಕುಮಾರ್ ಯಾದವ್ ಉತ್ತಮವಾಗಿ ರನ್ ಗಳಿಸುವಾಗ ಮತ್ತೊಂದು ಬದಿಯಲ್ಲಿ ಕೊಹ್ಲಿ ಇನ್ನಿಂಗ್ಸ್ ಆಂಕರ್ ಮಾಡಿದರು.

37 ಎಸೆತಗಳಲ್ಲಿ ಅರ್ಧಶತಕ ಗಳಿಸಿದ ವಿರಾಟ್ ಕೊಹ್ಲಿ, ಅಂತಾರಾಷ್ಟ್ರೀಯ ಟಿ20 ಪಂದ್ಯದಲ್ಲಿ 33ನೇ ಅರ್ಧಶತಕ ದಾಖಲಿಸಿದರು. 48 ಎಸೆತಗಳಲ್ಲಿ 4 ಬೌಂಡರಿ 4 ಭರ್ಜರಿ ಸಿಕ್ಸರ್ ರಹಿತ 63 ಗಳಿಸಿದ ವಿರಾಟ್ ಕೊಹ್ಲಿ ಅಂತಿಮ ಓವರ್ ನಲ್ಲಿ ಔಟಾದರು.

ಸೂರ್ಯಕುಮಾರ್ ಬ್ಯಾಟಿಂಗ್‌ಗೆ ಶ್ಲಾಘನೆ

ಸೂರ್ಯಕುಮಾರ್ ಬ್ಯಾಟಿಂಗ್‌ಗೆ ಶ್ಲಾಘನೆ

ವಿರಾಟ್ ಕೊಹ್ಲಿ ತಮ್ಮ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ ಮಾತನಾಡಿದ್ದಾರೆ. 36 ಎಸೆತಗಳಲ್ಲಿ69 ರನ್ ಗಳಿಸಿದ ಸೂರ್ಯಕುಮಾರ್ ಯಾದವ್ ಆಟಕ್ಕೆ ವಿರಾಟ್ ಕೊಹ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

"ಅದಕ್ಕಾಗಿಯೇ ನಾನು ಮೂರರಲ್ಲಿ ಬ್ಯಾಟಿಂಗ್ ಮಾಡುತ್ತಿದ್ದೇನೆ, ತಂಡಕ್ಕೆ (ಆ ಸ್ಥಾನದಲ್ಲಿ) ಅನುಭವವನ್ನು ನೀಡುತ್ತಿದ್ದೇನೆ. ಸೂರ್ಯಕುಮಾರ್ ಯಾವುದೇ ಪರಿಸ್ಥಿತಿಯಲ್ಲಿ ಬ್ಯಾಟ್ ಮಾಡುವ ಸಾಮರ್ಥ್ಯ ಹೊಂದಿದ್ದಾರೆ. ಏಷ್ಯಾಕಪ್‌ನಲ್ಲಿ ಅವರು ಸುಂದರವಾಗಿ ಬ್ಯಾಟಿಂಗ್‌ ಮಾಡಿದ್ದರು." ಎಂದು ಹೇಳಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧ ಮುಂದಿನ ಪಂದ್ಯ

ದಕ್ಷಿಣ ಆಫ್ರಿಕಾ ವಿರುದ್ಧ ಮುಂದಿನ ಪಂದ್ಯ

ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯಲ್ಲಿ ಕೊಹ್ಲಿ ಕಾಣಿಸಿಕೊಳ್ಳಲಿದ್ದಾರೆ. ಮುಂದಿನ ತಿಂಗಳು ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ತಮ್ಮ ಫಾರ್ಮ್ ಅನ್ನು ಮುಂದುವರಿಸಲು ನೋಡುತ್ತಿದ್ದಾರೆ.

ದಕ್ಷಿಣ ಆಫ್ರಿಕಾ ವಿರುದ್ಧದ ಆರಂಭಿಕ ಟಿ20 ಪಂದ್ಯ ಸೆಪ್ಟೆಂಬರ್ 28ರಂದು ಬುಧವಾರ ತಿರುವನಂತಪುರದಲ್ಲಿ ನಡೆಯಲಿದೆ. ಅಕ್ಟೋಬರ್ 2 ಮತ್ತು 4 ರಂದು ಎರಡನೇ ಮತ್ತು ಮೂರನೇ ಟಿ20 ಪಂದ್ಯಗಳು ಗುವಾಹಟಿ ಮತ್ತು ಇಂದೋರ್‌ನಲ್ಲಿ ನಡೆಯಲಿವೆ.

Story first published: Monday, September 26, 2022, 10:10 [IST]
Other articles published on Sep 26, 2022
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X