For Quick Alerts
ALLOW NOTIFICATIONS  
For Daily Alerts
 

ಮೈದಾನಕ್ಕೆ ಇಳಿಯುತ್ತಲೇ ಗಂಗೂಲಿ ದಾಖಲೆ ಅಳಿಸಿದ ವಿರಾಟ್

ವಡೋದರಾ: ಟೀಮ್ ಇಂಡಿಯಾ ಹಾಗೂ ನ್ಯೂಜಿಲೆಂಡ್‌ ತಂಡಗಳು ಮೊದಲ ಪಂದ್ಯದಲ್ಲಿ ಕಾದಾಟ ನಡೆಸಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ಟಾಸ್ ಗೆದ್ದು ಫೀಲ್ಡಿಂಗ್ ಮಾಡುವ ನಿರ್ಧಾರ ಮಾಡಿತು. ಶುಭಮನ್‌ ಗಿಲ್‌ ಟಾಸ್ ಗೆದ್ದು ತಮ್ಮ ಪ್ಲೇಯಿಂಗ್ ಇಲೆವೆನ್ ಘೋಷಿಸಿದ ಬಳಿಕ, ಟೀಮ್ ಇಂಡಿಯಾದ ಸ್ಟಾರ್ ಆಟಗಾರ ವಿರಾಟ್‌ ಕೊಹ್ಲಿ ದೊಡ್ಡ ದಾಖಲೆಯನ್ನು ಬರೆದಿದ್ದಾರೆ. ವಿರಾಟ್‌ ದಾಖಲೆಯ ಪರಿಚರ ಇಲ್ಲಿದೆ.

ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ತಮ್ಮ ಭರ್ಜರಿ ಬ್ಯಾಟಿಂಗ್ ಮೂಲಕ ಹಲವು ದಾಖಲೆಗಳನ್ನು ಬರೆದಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಬ್ಯಾಕ್ ಟು ಬ್ಯಾಕ್‌ ಶತಕ ಬಾರಿಸಿ ಅಬ್ಬರಿಸಿದ್ದರು. ಅಲ್ಲದೆ ವಿಜಯ್ ಹಜಾರೆ ಟ್ರೋಫಿಯಲ್ಲೂ ಇವರು ಅಮೋಘ ಪ್ರದರ್ಶನ ನೀಡಿದ್ದರು. ಹೀಗಾಗಿ ಇವರ ಮೇಲೆ ಎಲ್ಲರ ಕಣ್ಣುಗಳು ನೆಟ್ಟಿದ್ದವು. ನ್ಯೂಜಿಲೆಂಡ್‌ ವಿರುದ್ಧದ ಪಂದ್ಯದಲ್ಲಿ ವಿರಾಟ್‌ ಫೀಲ್ಡಿಂಗ್ ಮಾಡಲು ಮೈದಾನಕ್ಕೆ ಇಳಿಯುತ್ತಲೇ ದಾಖಲೆಯನ್ನು ಬರೆದಿದ್ದಾರೆ.

Virat Kohli Surpasses Sourav Ganguly Becomes India s 5th Most Capped ODI Player vs New Zealand

ಮೊದಲ ಪಂದ್ಯದಲ್ಲಿ ಟೀಮ್ ಇಂಡಿಯಾ ಮಾಜಿ ನಾಯಕ ವಿರಾಟ್ ಕೊಹ್ಲಿ ಅಂಗಳಕ್ಕೆ ಇಳಿಯುತ್ತಲೇ ಹೊಸ ದಾಖಲೆ ಬರೆದರು. ವಿರಾಟ್, ಭಾರತದ ಪರ 309 ಏಕದಿನ ಪಂದ್ಯಗಳನ್ನು ಆಡಿದ ಹೆಗ್ಗಳಿಕೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಈ ಮೂಲಕ ವಿರಾಟ್‌, ಮಾಜಿ ನಾಯಕ ಸೌರವ್ ಗಂಗೂಲಿ ಅವರ ದಾಖಲೆಯನ್ನು ಅಳಿಸಿ ಹಾಕಿದ್ದಾರೆ. ಗಂಗೂಲಿ ಭಾರತದ ಪರ 308 ಏಕದಿನ ಪಂದ್ಯಗಳನ್ನು ಆಡಿದ್ದಾರೆ.

ಭಾರತದ ಪರ ಅತಿ ಹೆಚ್ಚು ಏಕದಿನ ಪಂದ್ಯಗಳನ್ನು ಆಡಿದ ಕೀರ್ತಿ ದಿಗ್ಗಜ ಆಟಗಾರ ಸಚಿನ್ ತೆಂಡೂಲ್ಕರ್ ಅವರದ್ದಾಗಿದೆ. ಸಚಿನ್ ಭಾರತದ ಪರ 463 ಏಕದಿನ ಪಂದ್ಯಗಳನ್ನು ಆಡಿದ್ದಾರೆ. ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿ ಎಂಎಸ್ ಧೋನಿ ಇದ್ದು, ಇವರು 347 ಪಂದ್ಯ ಆಡಿದ್ದಾರೆ. ಮೂರನೇ ಸ್ಥಾನದಲ್ಲಿ ಮಾಜಿ ಆಟಗಾರ ಕರ್ನಾಟಕದ ರಾಹುಲ್ ದ್ರಾವಿಡ್‌ ಇದ್ದಾರೆ. ದ್ರಾವಿಡ್ 340 ಏಕದಿನ ಪಂದ್ಯಗಳನ್ನು ಆಡಿದ ಅನುಭವ ಹೊಂದಿದ್ದಾರೆ. ಮೊಹಮ್ಮದ್ ಅಜರುದ್ದೀನ್ ನಾಲ್ಕನೇ ಸ್ಥಾನದಲ್ಲಿದ್ದು, 334 ಪಂದ್ಯಗಳನ್ನು ಆಡಿದ್ದಾರೆ. ಈಗ ಈ ಸಾಲಿಗೆ ವಿರಾಟ್ ಕೊಹ್ಲಿ ಸೇರಿಕೊಂಡಿದ್ದಾರೆ.

Virat Kohli Surpasses Sourav Ganguly Becomes India s 5th Most Capped ODI Player vs New Zealand

ಪಾಂಟಿಂಗ್, ಸೆಹ್ವಾಗ್ ದಾಖಲೆಯ ಮೇಲೆ ಕಣ್ಣು

ಟೀಮ್ ಇಂಡಿಯಾದ ಭರವಸೆಯ ಆಟಗಾರ ವಿರಾಟ್ ಕೊಹ್ಲಿ ಸದ್ಯ ಭರ್ಜರಿ ಫಾರ್ಮ್‌ನಲ್ಲಿದ್ದಾರೆ. ಇವರು ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಒಂದು ಶತಕ ಬಾರಿಸುವಲ್ಲಿ ಸಫಲರಾದರೆ, ದೊಡ್ಡ ದಾಖಲೆಯನ್ನು ಬರೆಯಬಹುದು. ನ್ಯೂಜಿಲೆಂಡ್ ವಿರುದ್ಧದ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ಶತಕ ಬಾರಿಸಿದ ಆಟಗಾರರ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ, ವೀರೇಂದ್ರ ಸೆಹ್ವಾಗ್‌, ರಿಕಿ ಪಾಂಟಿಂಗ್ ಅವರೊಂದಿಗೆ ಜಂಟಿ ಅಗ್ರ ಸ್ಥಾನ ಪಡೆದಿದ್ದಾರೆ. ಇನ್ನು ಮೂರು ಪಂದ್ಯಗಳ ಸರಣಿಯಲ್ಲಿ ಇನ್ನೊಂದು ಶತಕ ಬಾರಿಸಿದಲ್ಲಿ ಕಿವೀಸ್‌ ವಿರುದ್ಧ ಅತಿ ಹೆಚ್ಚು ಶತಕ ಬಾರಿಸಿದ ಬ್ಯಾಟರ್‌ ಎಂಬ ಹಿರಿಮೆ ತಮ್ಮದಾಗಿಸಿಕೊಳ್ಳಲಿದ್ದಾರೆ.

Story first published: Sunday, January 11, 2026, 14:58 [IST]
Other articles published on Jan 11, 2026
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+