For Quick Alerts
ALLOW NOTIFICATIONS  
For Daily Alerts
 

ಪಂದ್ಯಶ್ರೇಷ್ಠ ಮತ್ತು ಸರಣಿಶ್ರೇಷ್ಠ ಪ್ರಶಸ್ತಿಗಳ ಬಗ್ಗೆ ಕೊಹ್ಲಿ ಬೇಸರ

Virat Kohli surprised at Shardul Thakur not getting MOM and Bhuvneshwar Kumar missing MOS

ಭಾರತ - ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ ಕೊನೆಯ ಪಂದ್ಯ ಮುಗಿದ ನಂತರ ಮಾತನಾಡಿದ ವಿರಾಟ್ ಕೊಹ್ಲಿ ಅವರು ಏಕದಿನ ಸರಣಿಯ ಪಂದ್ಯಶ್ರೇಷ್ಠ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿಗಳ ಕುರಿತು ಬೇಸರವನ್ನು ವ್ಯಕ್ತಪಡಿಸಿದ್ದಾರೆ. ಕೊನೆಯ ಏಕದಿನ ಪಂದ್ಯದಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಸ್ಯಾಮ್ ಕರನ್ ಅವರಿಗೆ ಮತ್ತು ಏಕದಿನ ಸರಣಿ ಶ್ರೇಷ್ಠ ಪ್ರಶಸ್ತಿಯನ್ನು ಜಾನಿ ಬೈರ್‌ಸ್ಟೋವ್ ಅವರಿಗೆ ನೀಡಿದ ನಂತರ ವಿರಾಟ್ ಬೇಸರವನ್ನು ವ್ಯಕ್ತಪಡಿಸಿದ್ದಾರೆ.

ಭಾರತದ ಆಟಗಾರರಾದ ಶಾರ್ದೂಲ್ ಠಾಕೂರ್ ಮತ್ತು ಭುವನೇಶ್ವರ್ ಕುಮಾರ್ ಅವರು ಅತ್ಯದ್ಭುತ ಪ್ರದರ್ಶನವನ್ನು ತೋರಿದರೂ ಸಹ ಅವರಿಗೆ ಪ್ರಶಸ್ತಿಗಳನ್ನು ನೀಡದೇ ಇರುವುದರ ಬಗ್ಗೆ ವಿರಾಟ್ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಹೌದು ಕೊನೆಯ ಏಕದಿನ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಶಾರ್ದೂಲ್ ಠಾಕೂರ್ ಅವರಿಗೆ ನೀಡದೇ ಇದ್ದದ್ದು ಮತ್ತು ಏಕದಿನ ಸರಣಿಯಲ್ಲಿ ಅತ್ಯದ್ಭುತ ಪ್ರದರ್ಶನ ತೋರಿದ ಭುವನೇಶ್ವರ್ ಕುಮಾರ್ ಅವರಿಗೆ ಸರಣಿಶ್ರೇಷ್ಠ ಪ್ರಶಸ್ತಿ ನೀಡದೇ ಇರುವುದನ್ನು ನನಗೆ ನಿಜಕ್ಕೂ ಆಶ್ಚರ್ಯವಾಗಿದೆ ಎಂದು ಹೇಳಿಕೆ ನೀಡಿ ವಿರಾಟ್ ಬೇಸರ ವ್ಯಕ್ತಪಡಿಸಿದರು.

ಭಾರತದ ಪರ ಕೊನೆಯ ಏಕದಿನ ಪಂದ್ಯದಲ್ಲಿ ಶಾರ್ದೂಲ್ ಠಾಕೂರ್ 10 ಓವರ್ ಮಾಡಿ 4 ವಿಕೆಟ್ ಪಡೆದು ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಏಕದಿನ ಸರಣಿಯಲ್ಲಿ ಒಟ್ಟು 6 ವಿಕೆಟ್‍ಗಳನ್ನು ಭುವನೇಶ್ವರ್ ಕುಮಾರ್ ಪಡೆದಿದ್ದಾರೆ.

Story first published: Monday, March 29, 2021, 12:02 [IST]
Other articles published on Mar 29, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+