ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗಾಗಿ ಬೆವರಿಳಿಸಿದ ಕೊಹ್ಲಿ: ವಿಡಿಯೋ

ಚೆನ್ನೈ: ಭಾರತಕ್ಕೆ ಪ್ರವಾಸ ಬಂದಿರುವ ಇಂಗ್ಲೆಂಡ್ ಎದುರಿನ ಟೆಸ್ಟ್ ಸರಣಿಗಾಗಿ ಟೀಮ್ ಇಂಡಿಯಾ ಸಿದ್ಧತೆ ನಡೆಸುತ್ತಿದೆ. ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಕ್ವಾರಂಟೈನ್ ವೇಳೆಯ ಸಮಯವನ್ನು ಬಳಸಿಕೊಳ್ಳುತ್ತಿದ್ದಾರೆ. ಅಭ್ಯಾಸ ನಡೆಸುತ್ತಿದ್ದಾರೆ.
ಚೆನ್ನೈಯ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಫೆಬ್ರವರಿ 5ರಿಂದ ಆರಂಭಗೊಳ್ಳಲಿರುವ ಮೊದಲ ಟೆಸ್ಟ್‌ಗಾಗಿ ತಯಾರಿ ನಡೆಸುತ್ತಿರುವ ಕಿಂಗ್ ಕೊಹ್ಲಿ, ಹೋಟೆಲ್ ರೂಮ್‌ನ ಜಿಮ್‌ನಲ್ಲಿ ಬೆವರಿಳಿಸಿ ಅಭ್ಯಾಸ ನಡೆಸಿದ್ದಾರೆ. ಕೊಹ್ಲಿ ಜಿಮ್ ವರ್ಕೌಟ್ ನಡೆಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿದೆ.
ಶುಕ್ರವಾರ (ಜನವರಿ 29) ಕೊಹ್ಲಿ ವಿಡಿಯೋ ಶೇರ್ ಮಾಡಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋ ಹಂಚಿಕೊಂಡಿರುವ ಕೊಹ್ಲಿ ಜಿಮ್‌ನಲ್ಲಿದ್ದು ಪ್ರ್ಯಾಕ್ಟೀಸ್ ಮಾಡುತ್ತಿರುವ ಚಿತ್ರಣ ನೀಡಿದ್ದಾರೆ. ಜನವರಿ 25ರಂದು ಟ್ವಿಟರ್‌ನಲ್ಲಿ ಹಾಕಿಕೊಂಡಿರುವ ಮತ್ತೊಂದು ಚಿತ್ರದಲ್ಲೂ ಕೊಹ್ಲಿ ಕಠಿಣ ಅಭ್ಯಾಸ ನಡೆಸುತ್ತಿದ್ದರು.
ಫೆಬ್ರವರಿ 5ರಿಂದ 9ರ ವರೆಗೆ ಮತ್ತು ಫೆಬ್ರವರಿ 13ರಿಂದ 17ರ ವರೆಗೆ ನಡೆಯಲಿರುವ ಎರಡೂ ಟೆಸ್ಟ್ ಪಂದ್ಯಗಳೂ ಚೆನ್ನೈಯ ಎಂಎಂ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿದೆ. ಮುಂದಿನ ಎರಡು ಪಂದ್ಯಗಳು ಅಹ್ಮದಾಬಾದ್‌ನ ಸರ್ದಾರ್ ಪಟೇಲ್ ಸ್ಟೇಡಿಯಂನಲ್ಲಿ ಫೆಬ್ರವರಿ 28ರಿಂದ ಆರಂಭಗೊಳ್ಳಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications