ನ್ಯೂಜಿಲೆಂಡ್ ವಿರುದ್ಧದ ಕೊನೆ 2 ಪಂದ್ಯಕ್ಕೆ ವಿರಾಟ್ ಕೊಹ್ಲಿ ಅಲಭ್ಯ


ಬೆಂಗಳೂರು, ಜನವರಿ 23: ನ್ಯೂಜಿಲೆಂಡ್ ಪ್ರವಾಸವನ್ನು ಭರ್ಜರಿಯಾಗಿ ಆರಂಭಿಸಿರುವ ಟೀಂ ಇಂಡಿಯಾ, ಮೊದಲ ಏಕದಿನ ಪಂದ್ಯದಲ್ಲಿ 8 ವಿಕೆಟ್ ಗಳ ಜಯ ದಾಖಲಿಸಿದೆ.
ಆದರೆ, ಕಿವೀಸ್ ವಿರುದ್ಧದ ಐದು ಏಕದಿನ ಪಂದ್ಯಗಳ ಸರಣಿಯ ಕೊನೆಯ 2 ಏಕದಿನ ಪಂದ್ಯ ಹಾಗೂ 3 ಪಂದ್ಯಗಳ ಟಿ-20 ಸರಣಿಯಿಂದ ಪಂದ್ಯಗಳಿಗೆ ಕೊಹ್ಲಿ ಅಲಭ್ಯರಾಗಲಿದ್ದು, ಅವರಿಗೆ ವಿಶ್ರಾಂತಿ ನೀಡಲು ತೀರ್ಮಾನಿಸಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ.
ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಉಪ ನಾಯಕ ರೋಹಿತ್ಶರ್ಮಾ ತಂಡದ ನಾಯಕರಾಗಿ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ. ಇನ್ನುಳಿದಂತೆ ಟೀಂ ಇಂಡಿಯಾ ತಂಡದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಇದಕ್ಕೂ ಮೊದಲು ವಿರಾಟ್ ಕೊಹ್ಲಿಗೆ ಏಷ್ಯಾಕಪ್ಸರಣಿಯಲ್ಲಿ ವಿಶ್ರಾಂತಿ ನೀಡಲಾಗಿತ್ತು. ರೋಹಿತ್ ಶರ್ಮಾ ತಂಡದ ನಾಯಕತ್ವ ಟೀಂ ಇಂಡಿಯಾ ಏಷ್ಯಾಕಪ್ ಗೆದ್ದು ಬೀಗಿತ್ತು.
ಕಳೆದ ಕೆಲವು ತಿಂಗಳುಗಳಿಂದ ನಿರಂತರವಾಗಿ ಕ್ರಿಕೆಟ್ ಆಡಿರುವ ವಿರಾಟ್ ಕೊಹ್ಲಿ ಅವರಿಗೆ ವಿಶ್ರಾಂತಿಯ ಅಗತ್ಯವಿದೆ ಎಂದು ಟೀಂ ಮಾನೇಜ್ಮೆಂಟ್ ಹಾಗೂ ಹಿರಿಯ ಆಯ್ಕೆ ಸಮಿತಿ ತೀರ್ಮಾನಿಸಿದೆ. ಮುಂಬರುವ ಆಸ್ಟ್ರೇಲಿಯಾ ವಿರುದ್ಧದ ತವರು ಸರಣಿಗೆ ಕೊಹ್ಲಿ ಸಿದ್ಧರಾಗಬೇಕಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications